2018ರ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ತಲಾ 20 ವರ್ಷ ಕಠಿಣ ಜೈಲು: ಒಟ್ಟು ₹74 ಸಾವಿರ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ
ಮಂಗಳೂರು, ಜು. 31: 2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹74 ಸಾವಿರ ದಂಡ ವಿಧಿಸಿದೆ. ಶಿಕ್ಷೆಗೆ ಗುರಿಯಾದವರನ್ನು ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಹಾಗೂ ಅಬ್ದುಲ್ ರಿಯಾಜ್ (40) ಎಂದು ಗುರುತಿಸಲಾಗಿದೆ. 2018ರ ನವೆಂಬರ್ 18ರಂದು ಯುವತಿಯೊಬ್ಬಳು ತನ್ನ…
