ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು : ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಇದರ ವತಿಯಿಂದ ಮಹಿಳಾ ಸಬಲೀಕರಣ ಮತ್ತು ಮತ್ತು ಮಕ್ಕಳ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ದಿನಾಂಕ 30.07.2026 ರಂದು ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಖಿ -1 ಸ್ಟಾಪ್ ಸೆಂಟರ್ ನ ಆಡಳಿತಾಧಿಕಾರಿ ಶ್ರೀಮತಿ ಪ್ರಿಯಾ ರಾಜ್ ಮೋಹನ್ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ, “ಹದಿಹರೆಯದ ಹುಡುಗಿಯರು ಮತ್ತು ಹುಡುಗರು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಸನ್ನಡತೆಯಿಂದ ದೂರವಾಗಿ ಹಾದಿ…

Read More

ಚಾವಣಿ ಕುಸಿದ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ : ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿದ ಶಾಸಕರು, ಸಂಭವಿಸಿದ ಹಾನಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸರ್ಕಾರದ ನಿಯಮಾನುಸಾರ ತುರ್ತು ಪರಿಹಾರ ಹಾಗೂ ಅಗತ್ಯ ನೆರವನ್ನು ಶೀಘ್ರವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ (VA)…

Read More

ಕೆಎಸ್‌ಒಯು ಪ್ರವೇಶಾತಿ ಆರಂಭ; ದೂರಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ದೂರಶಿಕ್ಷಣ ನೀಡಲು ರಾಜ್ಯದಲ್ಲಿ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾಲಯವಾಗಿದ್ದು, 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 38 ಪ್ರಾದೇಶಿಕ ಕೇಂದ್ರಗಳು ಹಾಗೂ 118 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಳೆದ 31 ವರ್ಷಗಳಲ್ಲಿ…

Read More

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ ಖಂಡನೀಯ:ಯಶ್ ಪಾಲ್ ಸುವರ್ಣ ಕ್ಷಮೆಯಾಚಿಸಬೇಕು – ಮಮತಾ ಗಟ್ಟಿ

ಮಂಗಳೂರು:ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಬಳಸಿರುವ ಭಾಷೆ ಹಾಗೂ ಮಾಡಿರುವ ವೈಯಕ್ತಿಕ ಆರೋಪಗಳು ಅತ್ಯಂತ ಖಂಡನೀಯ, ಬೇಜವಾಬ್ದಾರಿಯುತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯ ಆರೋಪಗಳನ್ನು ಮಾಡುವುದು ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ. ದೇಶದ ಪ್ರಮುಖ ನಾಯಕರ…

Read More

ಬಿಜೈ ಸ್ಮಾರ್ಟ್ ಬಜಾರ್‌ನಲ್ಲಿ ತುಳುನಾಡಿನ ಸಂಭ್ರಮ; ಆಟಿ ತಿಂಗಳ ಆಚರಣೆ

ಮಂಗಳೂರು: ತುಳುನಾಡಿನ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಬಿಜೈ ಮಂಗಳೂರಿನ ಸ್ಮಾರ್ಟ್ ಬಜಾರ್ ವತಿಯಿಂದ ಆಟಿ ತಿಂಗಳ ಆಚರಣೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ತುಳುನಾಡಿನ ಸಂಪ್ರದಾಯಿಕ ಆಚರಣೆಗಳು, ಆಟಿ ತಿಂಗಳ ವಿಶೇಷತೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಹಾರ ಪದಾರ್ಥಗಳು, ಆಟಿ ತಿಂಗಳ ವಿಶೇಷ ಖಾದ್ಯಗಳು ಹಾಗೂ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು. ಮಹಿಳೆಯರಿಗಾಗಿ ಏರ್ಪಡಿಸಿದ ಈ ಕೂಟದಲ್ಲಿ ವಿವಿಧ ಮನೋರಂಜನೆ ಆಟ , ತುಳುನಾಡು ಸಂಸ್ಕೃತಿಯನ್ನು…

Read More

ಬಂಟ್ವಾಳದಲ್ಲಿ ಭಾರೀ ಮಳೆ ಅಬ್ಬರ; ಮನೆ ಚಾವಣಿ ಕುಸಿದು ಅಪಾರ ನಷ್ಟ

ಬಂಟ್ವಾಳ: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ.ಕಾಗುಡ್ಡೆ ನಿವಾಸಿ ಜಯ ಸಪಲ್ಯ ಅವರ ಮನೆಗೆ ಈ ಅನಾಹುತ ಸಂಭವಿಸಿದೆ. ಬಿರುಗಾಳಿಯ ತೀವ್ರತೆಗೆ ಮನೆಯ ಮೇಲ್ಛಾವಣಿಯ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದ್ದು, ಮನೆಯೊಳಗೆ ಮಳೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮನೆಯ ಸದಸ್ಯರು ಒಳಗೇ ಇದ್ದರೂ, ಚಾವಣಿ ಕುಸಿಯುವ ಶಬ್ದ…

Read More

ತುಳು-ಕೊಂಕಣಿ ರಂಗಭೂಮಿಯ ಕಲಾವಿದ ಎಂ. ಸುಬ್ರಹ್ಮಣ್ಯ ಪೈ ವಿಧಿವಶ

ಬಂಟ್ವಾಳ: ಜೋಡುಮಾರ್ಗ ನೇತ್ರಾವತಿ ಜೇಸಿಯ ಮಾಜಿ ಅಧ್ಯಕ್ಷ, ಬಿ.ಸಿ.ರೋಡಿನ ಜಿ.ಎಸ್.ಬಿ.ಸಮಾಜ ಸೇವಾ ಸಮಿತಿಯ ಮಾಜಿ ಕಾರ್ಯದರ್ಶಿ, ಕಲಾವಿದ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದ ಎಂ.ಸುಬ್ರಹ್ಮಣ್ಯ ಪೈ (43) ಕೆಲಕಾಲದ ಅಸೌಖ್ಯದ ಬಳಿಕ ಬುಧವಾರ (ಸೆ.29) ರಾತ್ರಿ ನಿಧನ ಹೊಂದಿದ್ದಾರೆ. ಶಿಕ್ಷಕಿಯಾಗಿರುವ ಪತ್ನಿ ಮತ್ತು ಬಂಧುವರ್ಗ ಹಾಗೂ ಅಪಾರ ಸ್ನೇಹಿತ ಬಳಗವನ್ನು ಅವರು ಅಗಲಿದ್ದಾರೆ. ತುಳು, ಕೊಂಕಣಿ ಭಾಷಾ ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಉತ್ತಮ ನಿರೂಪಕರೂ ಆಗಿದ್ದರು. ಮೃತರ ಅಂತಿಮ ವಿಧಿ ವಿಧಾನಗಳು 30.07.2026 ಗುರುವಾರ ಸಂಜೆ…

Read More

ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ‘ಸಂಘಟನ್ ಸೃಜನ್ ಅಭಿಯಾನ’ ಮಹತ್ವದ್ದು: ಎಐಸಿಸಿ ವೀಕ್ಷಕ ಜಯಂತ್

ಸುರತ್ಕಲ್: ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ‘ಸಂಘಟನ್ ಸೃಜನ್ ಅಭಿಯಾನ’ದ ಮೂಲಕ ಪಾರದರ್ಶಕ ಹೆಜ್ಜೆ ಇಟ್ಟಿದೆ ಎಂದು ಎಐಸಿಸಿ ವೀಕ್ಷಕರೂ, ಕೇರಳದ ಶಾಸಕರೂ ಆದ ಜಯಂತ್ ಹೇಳಿದರು. ಸುರತ್ಕಲ್‌ನ ಚೊಕ್ಕಬೆಟ್ಟು ಕ್ರಾಸ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ’ದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ದಾಖಲಿಸಿದ್ದ ಯಶಸ್ಸನ್ನು ಪುನರಾವರ್ತಿಸುವ ಗುರಿ ಹೊಂದಲಾಗಿದೆ ಎಂದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್…

Read More

ಅಪಘಾತ ರಹಿತ ಚಾಲಕರಿಗೆ ಗೌರವ; ಸಮಾಜಕ್ಕೆ ಮಾದರಿಯಾಗಲಿ: ಮುರಗೇಂದ್ರ ಬಸವರಾಜ ಶಿರೋಳಕರ

ಮಂಗಳೂರು: ಅಪಘಾತ ರಹಿತವಾಗಿ ವಾಹನ ಚಲಾಯಿಸಿ ಸೇವೆ ಸಲ್ಲಿಸುತ್ತಿರುವ ಚಾಲಕರನ್ನು ಗೌರವಿಸುವ ಮೂಲಕ ಅವರು ಸಮಾಜಕ್ಕೆ ಮಾದರಿಯಾಗಬೇಕು ಎಂಬ ಸಂದೇಶವನ್ನು ಸಾರಬಹುದು ಎಂದು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಮುರಗೇಂದ್ರ ಬಸವರಾಜ ಶಿರೋಳಕರ ಹೇಳಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ (ರಿ) ಸಂಯುಕ್ತ ಆಶ್ರಯದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಅಪಘಾತ ರಹಿತ ಚಾಲಕರಿಗೆ ಗೌರವಾರ್ಪಣೆ ಹಾಗೂ ಪತ್ರಕರ್ತರಿಗೆ…

Read More

ಚಿಲಿಂಬಿ ಡ್ರೈನೇಜ್ ಸಮಸ್ಯೆಗೆ ಪರಿಹಾರದ ಭರವಸೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮಹತ್ವದ ಸಭೆ

ನಗರದ ಚಿಲಿಂಬಿಯ ಮಹಾಲಕ್ಷ್ಮಿ ಕ್ಲಬ್ ಬಳಿಯ ಪರಿಸರದ ಡ್ರೈನೇಜ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಈ ಪರಿಸರದಲ್ಲಿ ಅಗತ್ಯವಾಗಿ ಡ್ರೈನೇಜ್ ನಿರ್ಮಾಣವಾಗಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಾಗಿದೆ. ಆ ನಿಟ್ಟಿನಲ್ಲಿ ಈ ಹಿಂದೆ ಅಧಿಕಾರಿಗಳಿಂದ ಸರ್ವೇ ನಡೆಸಿ ವರದಿ ಪಡೆಯಲಾಗಿತ್ತು. ಆದರೆ ಇಲ್ಲಿನ ಸ್ಥಳಾವಕಾಶದ ಕೊರತೆಯಿಂದ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ಈಗ ಕೆಲವು ಸ್ಥಳೀಯರು ಡ್ರೈನೇಜ್ ನಿರ್ಮಾಣಕ್ಕೆ ಜಾಗ ಬಿಟ್ಟು ಕೊಡುವ ಬಗ್ಗೆ ಸ್ವತಃ ಒಲವು ತೋರಿದ್ದು,…

Read More
error: Content is protected !!