ಒಮಾನ್‌ನಲ್ಲಿ ದುರಂತ: ಮೂಡುಬಿದಿರೆಯ ಯುವಕ ರಾಜವರ್ಮ ಜೈನ್ ವಾಹನದ ಚಕ್ರದಡಿ ಸಾವು

ಮಂಗಳೂರು/ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಗುರುಪೂರ್ಣಿಮೆ ಸಂಭ್ರಮ: ಕದ್ರಿ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸಹಸ್ರಾರು ಭಕ್ತರ ದರ್ಶನ

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆಯನ್ನು ಬುಧವಾರ ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು. ಗುರುಪೂರ್ಣಿಮೆಯ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು, ರುದ್ರಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ, ಶ್ರೀ ಚೌರಂಗಿನಾಥ, ತ್ರಿಲೋಕೇಶ್ವರ, ವಿಷ್ಣು ದೇವರು ಹಾಗೂ ವ್ಯಾಸಮುನಿಗಳಿಗೆ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ವೈದಿಕ ವಿಧಿವಿಧಾನಗಳೊಂದಿಗೆ ಏಕಾದಶ ರುದ್ರಾಭಿಷೇಕ ನೆರವೇರಿತು. ಗುರುಪೂರ್ಣಿಮೆಯ ಪವಿತ್ರ ಪರ್ವದ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ದೇವಸ್ಥಾನಕ್ಕೆ…

Read More

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಐವನ್ ಡಿ’ಸೋಜಾ ಆಗ್ರಹ

ಮಂಗಳೂರು, ಜು. 29: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವುದಾಗಿ ಆರೋಪಿಸಲಾಗಿರುವ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತೀವ್ರವಾಗಿ ಖಂಡಿಸಿದ್ದಾರೆ. ಯಶ್‌ಪಾಲ್ ಸುವರ್ಣ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಬುಧವಾರ ಪ್ರಕಟಣೆ ನೀಡಿರುವ ಐವನ್ ಡಿ’ಸೋಜಾ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು…

Read More

ಸಮಗ್ರ ನಾಗರಿಕ ಸೇವೆಗಳು (ಸಿವಿಲ್ ಸರ್ವಿಸಸ್) ಮತ್ತು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ‘ಮಂಗಳೂರು ಐಎಎಸ್’ ಸಂಸ್ಥೆಯಲ್ಲಿ ಪ್ರವೇಶಾತಿ ಆರಂಭ

ಮಂಗಳೂರು, ಜುಲೈ 24: ಭಾರತೀಯ ಯುವಕರಲ್ಲಿ ಸರ್ಕಾರಿ ಸೇವೆಯು ಅತ್ಯಂತ ಬೇಡಿಕೆಯ ವೃತ್ತಿ ಆಯ್ಕೆಗಳಲ್ಲಿ ಒಂದಾಗಿ ಮುಂದುವರಿಯುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ವ್ಯಾಪಕ ಶ್ರೇಣಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಪಡಿಸಲು ವಿನ್ಯಾಸಗೊಳಿಸಲಾದ ತನ್ನ ಹೊಸ ಬ್ಯಾಚ್‌ಗಳ ತರಬೇತಿ ಕಾರ್ಯಕ್ರಮಗಳಿಗೆ ‘ಮಂಗಳೂರು ಐಎಎಸ್ – ಎ ಸ್ಕೂಲ್ ಫಾರ್ ಸಿವಿಲ್ ಸರ್ವಿಸಸ್’ (Mangalore IAS – A School for Civil Services) ಪ್ರವೇಶಾತಿಯನ್ನು ಪ್ರಕಟಿಸಿದೆ. ಮಂಗಳೂರಿನ ನಂತೂರು ಬಜ್ಜೋಡಿಯ ಪ್ರೇಮ್‌ನಗರದಲ್ಲಿರುವ ಸಂದೇಶ ಪ್ರತಿಷ್ಠಾನದ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು,…

Read More

ವೃಧ್ದೆಯೋರ್ವರ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃಧ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ, ಅದರಲ್ಲಿ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ ದಿನಾಂಕ: 25-01-21…

Read More

ಎನ್‌ಎಸ್‌ಎಎಂ ಪಿಯು ಕಾಲೇಜಿನಲ್ಲಿ ಅದ್ಧೂರಿ ಅಲುಮ್ನಿ ಡೇ: ನೂತನ ಪದಾಧಿಕಾರಿಗಳ ಪದಗ್ರಹಣ

ಮಂಗಳೂರು: ನಗರದ ನಂತೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಪದವಿಪೂರ್ವನ ‘ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ಶಿಕ್ಷಣವೇ ಸಮಾಜದ ಬುನಾದಿ, ಮತ್ತು ನಿಟ್ಟೆ ಎಜ್ಯುಕೇಷನ್ ಟ್ರಸ್ಟ್‌ನಂತಹ ಸಂಸ್ಥೆಗಳು ಮಾದರಿ ನಾಯಕರನ್ನು ರೂಪಿಸುತ್ತಲೇ ಬಂದಿವೆ. ಹೊಸ ನಾಯಕತ್ವದ ಜವಾಬ್ದಾರಿ ಸ್ವೀಕರಿಸುತ್ತಿರುವ ವಿದ್ಯಾರ್ಥಿಗಳು ಸವಾಲುಗಳನ್ನು ಧೈರ್ಯದಿಂದ ಎದುರಿಸಿ,…

Read More

“ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ”-ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ದುರಾಡಳಿತದಿಂದ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ…

Read More

ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ: ಪ್ರೊ. ಕವಿತಾ ಕೆ.ಆರ್.

ಮಂಗಳೂರು: ಜಲವು ಕೇವಲ ಪ್ರಕೃತಿಯ ಸಂಪನ್ಮೂಲವಲ್ಲ; ಮಾನವ ಜೀವನ, ಕೃಷಿ, ಪರಿಸರ ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಆಧಾರವಾಗಿದ್ದು, ನೀರಿನ ಕೊರತೆ ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್. ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ.) ಮಂಗಳೂರು ವಿಭಾಗ, ಮಂಗಳೂರು ರನ್ನರ್ಸ್ ಕ್ಲಬ್ ಹಾಗೂ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು ಗುರು ಪೂರ್ಣಿಮೆ; ಲಕ್ಷ ತುಳಸಿ ಅರ್ಚನೆ, ವಿಶ್ವಶಾಂತಿ ಹೋಮ

ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು (ಜುಲೈ 29) ಗುರು ಪೂರ್ಣಿಮೆ ಅಂಗವಾಗಿ ಲೋಕಕಲ್ಯಾಣಾರ್ಥ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಗುರು ಪ್ರಾರ್ಥನೆ, 9.15ಕ್ಕೆ ವಿಶ್ವಶಾಂತಿ ಹೋಮ, 10 ಗಂಟೆಗೆ ಲಕ್ಷ ತುಳಸಿ ಅರ್ಚನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗುವ ಉದ್ದೇಶದಿಂದ ಭಕ್ತರು ಸಪರಿವಾರ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ…

Read More

ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ ಐದನೇ ಪುಣ್ಯಸ್ಮರಣೆ ಇಂದು; ಕುಲಶೇಖರ ಚರ್ಚ್‌ನಲ್ಲಿ ವಿಶೇಷ ಕಾರ್ಯಕ್ರಮ

ಮಂಗಳೂರು: ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ (ವಿನ್ನಿ ಬಾಯಿ) ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಇಂದು (ಜುಲೈ 29) ಮಂಗಳೂರಿನ ಕುಲಶೇಖರ ಚರ್ಚ್‌ನಲ್ಲಿ IWIL Productions ವತಿಯಿಂದ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರ ಪುತ್ರ, ನಿರ್ಮಾಪಕ ಹಾಗೂ ಚಲನಚಿತ್ರ ನಿರ್ದೇಶಕ ವಿಲ್ಫ್ರೆಡ್ ಫರ್ನಾಂಡೀಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನ್ನಿ ಫರ್ನಾಂಡೀಸ್ ಅವರು ಏಳು ಭಾಷೆಗಳ 90ಕ್ಕೂ ಹೆಚ್ಚು ನಾಟಕ, ದೂರದರ್ಶನ ಹಾಗೂ ಚಲನಚಿತ್ರ ನಿರ್ಮಾಣಗಳಲ್ಲಿ ಅಭಿನಯಿಸಿ, ನಿರ್ವಹಣಾ ಹೊಣೆಗಾರಿಕೆಯನ್ನೂ…

Read More
error: Content is protected !!