ಮಂಗಳೂರು ಪೊಲೀಸರ ಡ್ರಗ್ಸ್ ವಿರುದ್ಧ ದಿಢೀರ್ ಕಾರ್ಯಾಚರಣೆ: 159 ವಿದ್ಯಾರ್ಥಿಗಳ ತಪಾಸಣೆ, ಒಬ್ಬ ಪಾಸಿಟಿವ್
ಮಂಗಳೂರು : ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ…
