ಯಕ್ಷಗಾನ ಕರ್ನಾಟಕ ರಾಜ್ಯದ ರಾಜ್ಯ ಕಲೆಯನ್ನಾಗಿ ಘೋಷಿಸಲು ಮನವಿ

ಮಂಗಳೂರು: ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಮ್ಮ ದೇಶದ ಶ್ರೇಷ್ಠ ಕಲೆಯಾದ ಯಕ್ಷಗಾನವನ್ನು ರಾಜ್ಯದ ಕಲೆಯಾಗಿ ಘೋಷಿಸಬೇಕೆಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರು ಕಲಾವಿದರು ಹಾಗೂ ಕಲಾಭಿಮಾನಿಗಳ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಮನವಿಯನ್ನು ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಯನ್ನು ಪೂರೈಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.ಸಾವಿರ ವರ್ಷಗಳ ಇತಿಹಾಸವಿರುವ, ವಿಶ್ವದಾದ್ಯಂತ ಪ್ರಸಿದ್ಧಿಯನ್ನು ಗಳಿಸಿದಂತಹ,…

Read More

ಕೊಂಕಣಿ ಸಮುದಾಯಗಳ ಒಗ್ಗೂಡಿಸುವಿಕೆಗೆ ‘ಕೊಂಕನಿಜ್’ ವೇದಿಕೆ; ಸೆ.18ರಂದು ‘ನಾಚೋಂ ಯಾ ಕುಂಪಸಾರ್’ ಚಿತ್ರ ಪ್ರದರ್ಶನ

ಮಂಗಳೂರು:ವಿಶ್ವದಾದ್ಯಂತ ಹರಡಿರುವ ಕೊಂಕಣಿ ಮಾತನಾಡುವ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ‘ಕೊಂಕನಿಜ್’ (KONKANIZ) ಎಂಬ ಸಮುದಾಯ ಆಧಾರಿತ ವೇದಿಕೆಯನ್ನು ಮಂಗಳೂರಿನಲ್ಲಿ ಆರಂಭಿಸಲಾಗಿದೆ ಎಂದು ಮೆಂಡೋನ್ಸಾ ಫೌಂಡೇಶನ್‌ನ ಡಾ. ವಿವೇಕ್ ಮಂಡೋನ್ಸಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೊಂಕಣಿ ಸಮುದಾಯಗಳ ನಡುವಿನ ಭಾಷಾ ಉಪಭಾಷೆಗಳು, ವಿವಿಧ ಲಿಪಿಗಳು ಹಾಗೂ ಭೌಗೋಳಿಕ ಗಡಿಗಳಿಂದ ಉಂಟಾಗಿರುವ ಅಂತರವನ್ನು ಕಡಿಮೆ ಮಾಡಿ, ಸಾಮಾನ್ಯ ಸಾಂಸ್ಕೃತಿಕ ಬಂಧವನ್ನು ಬಲಪಡಿಸುವುದು ವೇದಿಕೆಯ ಉದ್ದೇಶವಾಗಿದೆ. ಕೊಂಕಣಿ ಭಾಷೆ, ಆಹಾರ,…

Read More

ತುಳು ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದ “ಟಾಸ್” ಸೆ.18ಕ್ಕೆ ಬಿಡುಗಡೆ

ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಚಿತ್ರದ ನಿರ್ದೇಶಕ ಅರ್ಜುನ್ ದೇವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ….

Read More

ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ: ಪದ್ಮರಾಜ್ ಪೂಜಾರಿ

ಮಂಗಳೂರು:* ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಯು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಹಿನ್ನಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಆರಂಭದಲ್ಲಿ ಉಚಿತ ಹಾಗೂ ಸರಳ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಿ ಜನರನ್ನು ಡಿಜಿಟಲ್ ವಹಿವಾಟಿನತ್ತ ಕೊಂಡೊಯ್ದ ಬಳಿಕ, ಇದೀಗ ಶುಲ್ಕ ವಿಧಿಸುವ ಕ್ರಮಕ್ಕೆ ಮುಂದಾಗಿರುವುದು ಸರ್ಕಾರದ ನೀತಿಯಲ್ಲಿನ ಹಿಮ್ಮುಖ ಚಲನೆಯ ಸಂಕೇತವಾಗಿದೆ ಎಂದು ಟೀಕಿಸಿದ್ದಾರೆ. ಯುಪಿಐ ವಹಿವಾಟಿನ…

Read More

ತುಳುನಾಡಿನ ಬಗ್ಗೆ ಸರ್ವರಿಗೂ ಸದಭಿಪ್ರಾಯ: ನಟ ಶಿವಧ್ವಜ್ ಶೆಟ್ಟಿಬಂಟ್ಸ್ ಹಾಸ್ಟೇಲ್: ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

ಮಂಗಳೂರು: ತುಳುನಾಡಿನವರ ಶಿಸ್ತು ಹಾಗೂ ಸಜ್ಜನಿಕೆಯ ವ್ಯಕ್ತಿತ್ವದ ಬಗ್ಗೆ ಹೊರಗಿನ ಮಂದಿಗೆ ಅತ್ತ್ಯುತ್ತಮ ಅಭಿಪ್ರಾಯವಿದ್ದು, ಈ ಅಭಿಪ್ರಾಯವನ್ನು ನಾವು ಉಳಿಸಿಕೊಳ್ಳಬೇಕಾಗಿದೆ ಎಂದು ಖ್ಯಾತ ಚಿತ್ರ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಶಿವಧ್ವಜ್ ಶೆಟ್ಟಿ ಹೇಳಿದರು.ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶ್ರೀ ಗಣೇಶ ದೇವರು ಹಾಗೂ…

Read More

ಸಹ್ಯಾದ್ರಿ ಕಾಲೇಜಿನಲ್ಲಿ ಸೆ.18ರಿಂದ ‘ಎಲೆಕ್ಟ್ರೋಥಾನ್ 2026’ ಹ್ಯಾಕಥಾನ್

ಮಂಗಳೂರು, ಸೆ.16:* ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ (ECE) ವಿಭಾಗವು IETE ವಿದ್ಯಾರ್ಥಿ ವೇದಿಕೆಯ ಸಹಯೋಗದಲ್ಲಿ ‘ಎಲೆಕ್ಟ್ರೋಥಾನ್ 2026’ ಹೆಸರಿನ 24 ಗಂಟೆಗಳ ಹ್ಯಾಕಥಾನ್‌ನ್ನು ಸೆ.18ರಿಂದ 19ರವರೆಗೆ ಕಾಲೇಜು ಆವರಣದಲ್ಲಿ ಆಯೋಜಿಸಿದೆ. ‘ಇಂಡಸ್ಟ್ರಿ IoT/ಸೇಫ್ಟಿ’ (Industry IoT/Safety) ವಿಷಯವನ್ನು ಆಧರಿಸಿರುವ ಈ ಹ್ಯಾಕಥಾನ್, ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನ ಹಾಗೂ ಪ್ರಾಯೋಗಿಕ ಪರಿಹಾರಗಳನ್ನು ರೂಪಿಸಲು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುವ ಉದ್ದೇಶ ಹೊಂದಿದೆ. ಸಮಸ್ಯೆ ಪರಿಹಾರ, ಎಂಬೆಡೆಡ್ ಸಿಸ್ಟಮ್ಸ್,…

Read More

ಪರಿಶಿಷ್ಟ ಜಾತಿ ಪಟ್ಟಿಗೆ ‘ಮನ್ಸ’ ಸೇರ್ಪಡೆಗೆ ಆಗ್ರಹ

ಮಂಗಳೂರು: ‘ಮನ್ಸ’ ಜಾತಿಯ ಹೆಸರನ್ನು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘ ಆಗ್ರಹಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ, ‘ಮನ್ಸ’ ಸಮುದಾಯದ ಮೂಲ ದಕ್ಷಿಣ ಕನ್ನಡ ಜಿಲ್ಲೆಯಾಗಿದ್ದು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿಯೂ ಸಮುದಾಯದವರು ನೆಲೆಸಿದ್ದಾರೆ. ಸಂಘದ ಅಂದಾಜಿನಂತೆ ಸಮುದಾಯದ…

Read More

ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಎಸಿಸಿಇ ಗೌರವ ಫೆಲೋಶಿಪ್

ಮಂಗಳೂರು: ಎಂಜಿನಿಯರಿಂಗ್, ಶಿಕ್ಷಣ ಸಂಸ್ಥೆಗಳ ನಿರ್ಮಾಣ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್‌ (ಎಸಿಸಿಇ–ಇಂಡಿಯಾ) ವತಿಯಿಂದ ಗೌರವ ಫೆಲೋಶಿಪ್ ಪ್ರದಾನ ಮಾಡಲಾಗುವುದು ಎಂದು ಎಸಿಸಿಇ ಅಧ್ಯಕ್ಷ ರಾಜೇಂದ್ರ ಕಲ್ಬಾವಿ ತಿಳಿಸಿದ್ದಾರೆ. ಮಂಗಳವಾರ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.17ರಂದು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿರುವ ಎಂಜಿನಿಯರ್ಸ್‌ ಡೇ ಆಚರಣೆಯ ಸಂದರ್ಭದಲ್ಲಿ ಫೆಲೋಶಿಪ್ ಪ್ರದಾನ ಮಾಡಲಾಗುವುದು. ಬೆಂಗಳೂರು…

Read More

ಕುಡ್ಲ ಉದ್ಯೋಗ ಮೇಳಕ್ಕೆ 750ಕ್ಕೂ ಹೆಚ್ಚು ನೋಂದಣಿ

ಮಂಗಳೂರು: ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ ಸೆ.20ರಂದು ನಗರದ ಕದ್ರಿ ಪಾರ್ಕ್‌ ಬಳಿಯ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ‘ಕುಡ್ಲ ಉದ್ಯೋಗ ಮೇಳ 2026’ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕಿರಣ್‌ ಕುಮಾರ್‌ ಜೋಗಿ ತಿಳಿಸಿದರು. ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಕಳೆದ 56 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜೋಗಿ ಸಮಾಜದ ಏಳಿಗೆ ಹಾಗೂ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳೂರು…

Read More

ಹಂಪನಕಟ್ಟೆಯಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರ ಮುಂದುವರಿಸಿ

ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರವನ್ನು ಮುಂದುವರಿಸಬೇಕು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ‘ಪರಪು’ ತುಳು ಎಂ.ಎ. ಹಿರಿಯ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ. ಮಂಗಳೂರು ವಿಶ್ವವಿದ್ಯಾಲಯವು 2018ರಲ್ಲಿ ಉತ್ತಮ ಪಠ್ಯಕ್ರಮ ರೂಪಿಸಿ, ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆರಂಭಿಸುವ ಮೂಲಕ ತುಳು ಭಾಷಾ ಅಧ್ಯಯನಕ್ಕೆ ಸೂಕ್ತ ಶೈಕ್ಷಣಿಕ ಸ್ವರೂಪ ನೀಡಿತ್ತು. ಏಳು ಬ್ಯಾಚ್‌ಗಳಲ್ಲಿ ಸುಮಾರು…

Read More
error: Content is protected !!