ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಸೆ.17ರಂದು ಶಿಲಾನ್ಯಾಸ

ಮಂಗಳೂರು, ಸೆ.14: ಕರಾವಳಿ ಭಾಗದ ದೀರ್ಘಕಾಲದ ಬೇಡಿಕೆಯಾಗಿರುವ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ ಸೆ.17ರಂದು ಸಂಜೆ 4.30ಕ್ಕೆ ಬಜಪೆಯಲ್ಲಿ ಶಿಲಾನ್ಯಾಸ ನೆರವೇರಲಿದೆ ಎಂದು ಕರ್ನಾಟಕ ರಾಜ್ಯ ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಜಿ ಡಾ. ಯೆನೆಪೋಯ ಅಬ್ದುಲ್ಲ ಕುಂಞಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ತಾಲೂಕಿನ ಬಜಪೆಯಲ್ಲಿ ಉದ್ಯಮಿ ಇನಾಯತ್ ಅಲಿ ಅವರು ತಮ್ಮ ತಂದೆ-ತಾಯಿಯ ಸ್ಮರಣಾರ್ಥ ಹಜ್ ಭವನ ನಿರ್ಮಾಣಕ್ಕಾಗಿ ಸುಮಾರು 1.55 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ….

Read More

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜಾಲ್–ನಂತೂರು ನಿವಾಸಿ, 34 ವರ್ಷದ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 24/2020ರ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ…

Read More

ಸೆ.18ಕ್ಕೆ ‘ಅಮರ್ಥ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ; ಕರಾವಳಿಯ ಕಥೆಗೆ ಬೆಳ್ಳಿತೆರೆ ಸಜ್ಜು

ಮಂಗಳೂರು:* ಪಂಚರಂಗಿ ಬ್ಯಾನರ್ ಅಡಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ಅವರ ನಿರ್ಮಾಣದಲ್ಲಿ, ಗುರು ಹೆಗ್ಡೆ ಮತ್ತು ವಿನಯ್ ಪ್ರೀತಂ ನಿರ್ದೇಶನದಲ್ಲಿ ಮೂಡಿಬಂದಿರುವ ‘ಅಮರ್ಥ’ ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಗುರು ಹೆಗ್ಡೆ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಥೆ ಮತ್ತು ಚಿತ್ರಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದರಿಂದ ಚಿತ್ರದ ಬಿಡುಗಡೆ ವಿಳಂಬವಾಗಿದೆ. ಸುಮಾರು ಎರಡೂವರೆ ವರ್ಷಗಳ ಅವಧಿಯಲ್ಲಿ ಸಿನಿಮಾ ಪೂರ್ಣಗೊಂಡಿದ್ದು, ಅಂತಿಮ ಹಂತದಲ್ಲಿ…

Read More

ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ: ಡಿ.ಕೆ. ಶಿವಕುಮಾರ್

ಮಂಗಳೂರು: ತುಳುನಾಡಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೆ.18ರಂದು ಮಂಗಳೂರಿಗೆ ಆಗಮಿಸುತ್ತಿದ್ದು, ತುಳುನಾಡಿನಲ್ಲಿ ವಿಶೇಷವಾದ ಸಚಿವ ಸಂಪುಟ ಸಭೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಜಿಲ್ಲೆಯ ಜನರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳು ಹಾಗೂ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಾಗುವುದು ಎಂದರು. ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರ…

Read More

ತುಳು ವಿಕಿಪೀಡಿಯಕ್ಕೆ ದಶ ಸಂಭ್ರಮ

ಮಂಗಳೂರು: ಡಿಜಿಟಲ್ ಲೋಕದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ತುಳು ವಿಕಿಪೀಡಿಯ ಮಹತ್ತರ ಪಾತ್ರ ವಹಿಸುತ್ತಿದೆ. ತುಳು ಭಾಷೆಗೆ ತುಳು ವಿಕಿಪೀಡಿಯ ದೊಡ್ಡ ಶಕ್ತಿ ನೀಡಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಹೇಳಿದರು. ನಗರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ಶನಿವಾರ ತುಳು ವಿಕಿಪೀಡಿಯ ಹಾಗೂ ಕರಾವಳಿ ವಿಕಿಮೀಡಿಯನ್ಸ್ ಯೂಸರ್ಸ್ ಗ್ರೂಪ್ ಆಶ್ರಯದಲ್ಲಿ ನಡೆದ ‘ತುಳು ವಿಕಿಪೀಡಿಯ ದಶ ಸಂಭ್ರಮ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

ಶಿಕ್ಷಣ, ಸಂಸ್ಕೃತಿ, ಸಮಾಜ ಸೇವೆಗೆ ಮೋಹನ್ ಆಳ್ವರ ಕೊಡುಗೆ ಅಪಾರ:ಡಾ. ವೀರೇಂದ್ರ ಹೆಗ್ಡೆ

ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಆಯೋಜಿಸುತ್ತಿರುವ ಪ್ರೇರಣಾ ದಿವಸ್ – 2026 ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಡೆಯವರು ಬಿಡುಗಡೆಗೊಳಿಸಿದರು. ನಂತರ ಅವರು ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘವು ಪ್ರತಿವರ್ಷವೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಅಧ್ಯಾಪಕರನ್ನು ಗುರುತಿಸಿ, ಗೌರವಿಸುವ ಮೂಲಕ ಅವರ ಸೇವೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಅಧ್ಯಾಪಕರ ಸಾಧನೆಯನ್ನು ಗುರುತಿಸಿ…

Read More

ಮದುವೆ ಸಂಭ್ರಮದಲ್ಲೊಂದು ಅರ್ಥಪೂರ್ಣ ಕಾರ್ಯ: ‘ಗೋ ಸಮ್ಮಾನ್’ ಅಭಿಯಾನಕ್ಕೆ ಸಹಿ ಸಂಗ್ರಹ

​ಬಂಟ್ವಾಳ: ತಾಲೂಕಿನ ರೆಂಜನ್ ಪದವಿನ ಶುಭಲಕ್ಷ್ಮೀ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಜೇತೇಶ್ ಹಾಗೂ ಶರಣ್ಯ ಅವರ ವಿವಾಹ ಸಮಾರಂಭದಲ್ಲಿ ಸಮಾಜಮುಖಿ ಉದ್ದೇಶದ ‘ಗೋ ಸಮ್ಮಾನ್’ ಅಭಿಯಾನಕ್ಕೆ ಸಹಿ ಸಂಗ್ರಹಿಸಲಾಯಿತು. ಮದುವೆ ಸಂಭ್ರಮದ ನಡುವೆಯೂ ಗೋ ರಕ್ಷಣೆ ಹಾಗೂ ಜಾಗೃತಿಯ ಈ ವಿನೂತನ ಪ್ರಯತ್ನಕ್ಕೆ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಗೋಸೇವಾ ವಿಭಾಗ ಪ್ರಮುಖ್ ಗಂಗಾಧರ್, ಗೊಸಮ್ಮನ್ ಜಿಲ್ಲಾ ಸಹ ಪ್ರಭಾರಿ ಅಶೋಕ ಇಳಂತಿಲ ಸೇರಿದಂತೆ ಹಲವು…

Read More

ಪುತ್ತೂರು ತಾಲೂಕು ಸಮಗ್ರ ಅಭಿವೃದ್ಧಿ ಹಾಗೂ ರೈತರ ಹಿತರಕ್ಷಣೆಗೆ ಆಗ್ರಹಿಸಿ ಡಿ.ಕೆ. ಶಿವಕುಮಾರ್ ಅವರಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಪುತ್ತೂರು: ಪುತ್ತೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಗ್ರಾಮೀಣ ಮೂಲಸೌಕರ್ಯ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿಕರ ತುರ್ತು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಬೆಂಗಳೂರಿನಲ್ಲಿ ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸುದೀರ್ಘ ಮನವಿ ಪತ್ರ ಸಲ್ಲಿಸಿದ್ದಾರೆ. ಕೃಷಿಕರ ಗನ್ ಲೈಸೆನ್ಸ್ ನವೀಕರಣದ ಕುರಿತು ವಿಶೇಷವಾಗಿ ಸಮಾಲೋಚನೆ ನಡೆಸಲಾಗಿದ್ದು, ಈ ಹಿಂದೆ ಇದ್ದ ನಿಯಮಗಳಂತೆಯೇ ಯಾವುದೇ ಎನ್‌ಒಸಿ…

Read More

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವಕ್ಕೆ ಗಣಪನ ಆಗಮನ

ಮಂಗಳೂರು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಜಪ್ಪಿನಮೊಗರು ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಇಂದಿನಿಂದ ಸೆಪ್ಟೆಂಬರ್ 15ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಪ್ಪಿನಮೊಗರಿನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕಾಗಿ ನಗರದ ವಿ.ಟಿ. ರಸ್ತೆಯ ನಳಂದ ಶಾಲೆಯ ಸಮೀಪದ ಪ್ರದೇಶದಿಂದ ಗಣಪನ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಪ್ಪಿನಮೊಗರಿಗೆ ಕೊಂಡೊಯ್ಯಲಾಯಿತು. ಗಣಪನನ್ನು ಸ್ವಾಗತಿಸಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು….

Read More

ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ‘ಸ್ವರ ಕುಡ್ಲ’ ಸಂಗೀತ ಸ್ಪರ್ಧೆಗೆ ಅದ್ದೂರಿ ಚಾಲನೆ

ಸಂಗೀತ ಹಾಗೂ ಸಾಂಸ್ಕೃತಿಕ ಕಲೆಗಳ ಸ್ಪರ್ಧೆಗಳಲ್ಲಿ ಸೋಲು ಗೆಲುವಿನ ಪ್ರಶ್ನೆಗಿಂತ ಅನುಭವದ ಹೆಚ್ಚಳಕ್ಕಾಗಿ ಕಲಿಕೆಯಲ್ಲಿ ಸ್ಪರ್ಧಾ ಛಲವಿರಬೇಕು ಎಂದು ವಿಶ್ವವಿದ್ಯಾನಿಲಯ ಪ್ರಾಂಶುಪಾಲರಾದ ಜಯವಂತ ನಾಯಕ್ ಹೇಳಿದರು. ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರು ಆಯೋಜಿಸಿದ ಸ್ವರ ಕುಡ್ಲ ಸಂಗೀತ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಧನುರಾಜ್ ಅತ್ತಾವರ ಅಧ್ಯಕ್ಷತೆ ವಹಿಸಿದ್ದರು.ಯೆನಪೋಯ ಆಸ್ಪತ್ರೆಯ ಸೀನಿಯರ್ ಸರ್ಜನ್ ಹಾಗೂ ಗಾಯಕರಾದ ಡಾಕ್ಟರ್ ಕುಂಬ್ಳೆ ಅನಂತ ಪ್ರಭು ಗೀತೆಹಾಡಿ ಸ್ಪರ್ಧೆಗೆ ಚಾಲನೆ…

Read More
error: Content is protected !!