ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಜಾಗತಿಕ ಸಮುದಾಯಕ್ಕೆ ಮನವಿ

ಮಂಗಳೂರು: ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಟಿಬೆಟಿಯನ್ ಸಂಸ್ಕೃತಿಯ ಉಳಿವಿಗಾಗಿ ವಿಶ್ವಸಂಸ್ಥೆ, ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟಿಬೆಟಿಯನ್ ಸಮುದಾಯದ ಪ್ರತಿನಿಧಿ ಡೆನ್ಜಿನ್ ದಾತೋನ್ (Denzin Dataon) ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಬೆಟಿಯನ್ ಜನರು ಹಲವು ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸುತ್ತಿದ್ದು, ಅವರ ಧ್ವನಿಯನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಸ್ವಯಂ-ಆಹುತಿ ನೀಡಿದ ಟಿಬೆಟಿಯನ್ ಹುತಾತ್ಮರ ತ್ಯಾಗವನ್ನು…

Read More

ರಾಮ ಮಂದಿರ ಕಾಣಿಕೆ ಹಗರಣದ ಸಮಗ್ರ ತನಿಖೆಗೆ ಆಗ್ರಹ: ವಿನಯ್ ಕುಮಾರ್ ಸೊರಕೆ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ಕಾಣಿಕೆ ಕಳ್ಳತನ ಪ್ರಕರಣವು ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ನಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದ್ದು, ಭಕ್ತರು ಸಮರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ಕಾಣಿಕೆಗಳ ದುರುಪಯೋಗ ನಡೆದಿದೆ ಎಂಬ…

Read More

“ಟಾರ್ಗೆಟ್ ಒತ್ತಡ, ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ರಾಷ್ಟ್ರವ್ಯಾಪಿ ಹೋರಾಟ”

ಮಂಗಳೂರು: ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಟಾರ್ಗೆಟ್ ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ಖಾತೆ ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಮೆಕಿನ್ಸಿ (McKinsey) ಸಲಹೆ ಮೇರೆಗೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಅಂಚೆ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರಕ್ಕೆ ಕರೆ ನೀಡಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ , ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಸಿಬ್ಬಂದಿ ಶೋಷಣೆಗೆ ಒಳಗಾಗುತ್ತಿದ್ದು, ಈ ಕ್ರಮವನ್ನು…

Read More

ಕರಾವಳಿಯಲ್ಲಿ SAF ಯಾಕೆ? ಉದ್ದೇಶ ಸ್ಪಷ್ಟಪಡಿಸಿ: ಅನುಪಮ ಶೆಣೈ ಆಗ್ರಹ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ಸ್ಥಾಪಿಸಿರುವ ಉದ್ದೇಶವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಸಮಾಜ ಸೇವಕಿ ಅನುಪಮ ಶೆಣೈ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ರಚಿಸಲಾಗಿತ್ತು. ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿವೆ ಎಂದು ಹೇಳಿ, ಅರಣ್ಯ ನಕ್ಸಲ್ ಪಡೆ (ANF) ಸಿಬ್ಬಂದಿಯನ್ನು ಕಡಿತಗೊಳಿಸಿ SAF ರಚಿಸಿರುವ ಸರ್ಕಾರ, ಈ ಪಡೆಯ ಸ್ಥಾಪನೆಗೆ ಯಾವ ಕಾನೂನು…

Read More

ಮಂಗಳೂರು-ಕುಳಾಯಿಯಲ್ಲಿ ಭವ್ಯ ಶ್ರೀ ಜಗನ್ನಾಥ ರಥಯಾತ್ರೆ

ಮಂಗಳೂರು:ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ಮಂಗಳೂರು-ಕುಳಾಯಿ ವತಿಯಿಂದ ವಾರ್ಷಿಕ ಶ್ರೀ ಜಗನ್ನಾಥ ರಥಯಾತ್ರೆ ಗುರುವಾರ ಭಕ್ತಿಭಾವ ಹಾಗೂ ವೈಭವದಿಂದ ನಡೆಯಲಿದೆ ಎಂದು ಇಸ್ಕಾನ್‌ನ ಪೂಜ್ಯ ನಾಮ ನಿಷ್ಠ ದಾಸ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ರಥಯಾತ್ರೆಗೆ ದೊರೆತ ಅಭೂತಪೂರ್ವ ಸ್ಪಂದನೆಯ ಹಿನ್ನೆಲೆಯಲ್ಲಿ ಈ ಬಾರಿ ಇನ್ನಷ್ಟು ಭವ್ಯವಾಗಿ ಉತ್ಸವವನ್ನು ಆಯೋಜಿಸಲಾಗಿದೆ. ಮಂಗಳೂರು, ಸುರತ್ಕಲ್, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಶ್ರೀ ಜಗನ್ನಾಥ,…

Read More

ಭೂಕುಸಿತಕ್ಕೆ ಅವೈಜ್ಞಾನಿಕ ಬೆಟ್ಟ ಕೊರೆಯುವಿಕೆಯೇ ಕಾರಣ: ಎಎಪಿ ಆರೋಪ

ಮಂಗಳೂರು:ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಭೂಕುಸಿತ ಮತ್ತು ತಡೆಗೋಡೆ ಕುಸಿತ ಪ್ರಕರಣಗಳಿಗೆ ಹವಾಮಾನ ವೈಪರೀತ್ಯದ ಜೊತೆಗೆ ಅವೈಜ್ಞಾನಿಕ ಹಾಗೂ ಅನಿಯಂತ್ರಿತ ಬೆಟ್ಟ ಕೊರೆಯುವಿಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬೆಟ್ಟ ಕೊರೆಯುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತಕ್ಷಣ ಕಠಿಣ ಕಾನೂನು ಕ್ರಮವನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಮಾತನಾಡಿ , ಮೂಡಬಿದ್ರೆ ಸಮೀಪದ…

Read More

ಟಾರ್ಗೆಟ್ ಒತ್ತಡ ಖಂಡಿಸಿ ಅಂಚೆ ನೌಕರರ ರಾಷ್ಟ್ರವ್ಯಾಪಿ ಹೋರಾಟ

ಮಂಗಳೂರು:ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಗುರಿ ಸಾಧನೆ (ಟಾರ್ಗೆಟ್) ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ವಿವಿಧ ಖಾತೆಗಳನ್ನು ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ, ವಿದೇಶಿ ಸಲಹಾ ಸಂಸ್ಥೆ ಮೆಕಿನ್ಸಿ (McKinsey) ಶಿಫಾರಸುಗಳ ಆಧಾರದ ಮೇಲೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಅಂಚೆ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರಕ್ಕೆ ಕರೆ ನೀಡಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಅಂಚೆ ನೌಕರರ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್…

Read More

ಬಾಂಗ್ಲಾದೇಶಿ ‘ನುಸುಳುಕೋರರ ಪ್ರವೇಶ ಕೇಂದ್ರದ ವೈಫಲ್ಯ’ – ಎಸ್‌ಡಿಪಿಐ ಆರೋಪ

ಮಂಗಳೂರಲ್ಲಿ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಫೇಸ್ ಬುಕ್ ನಲ್ಲಿ ಒಂದು ಪೋಸ್ಟ್ ಹಾಕುತ್ತಾರೆ. ಇದ್ರಲ್ಲಿ ಅವರು ಮಂಗಳೂರಲ್ಲಿ ಬಾಂಗ್ಲಾದೇಶಿಗಳು ಇದ್ದಾರೆ, ಎಚ್ಚೆತ್ತುಕೊಳ್ಳಬೇಕೆಂದು ಹೇಳಿದ್ದರು. ಆದ್ರೆ ವಾಸ್ತವವಾಗಿ ಮಂಗಳೂರಲ್ಲಿ ಬಾಂಗ್ಲಾದೇಶದಿಂದ ನುಸುಳುಕೋರರು ಯಾವುದೇ ದಾರಿ ಇಲ್ಲ. ಪಶ್ಚಿಮ ಬಂಗಾಳದ ಮೂಲಕ ಬರಬೇಕು. ಅಲ್ಲಿ ಗಡಿ ಕಾಯುವವರು ಕರ್ನಾಟಕದವರಲ್ಲ‌. ಬದಲಾಗಿ ಕೇಂದ್ರ ಸರ್ಕಾರದಿಂದ ನಿಯೋಜಿಗೊಂಡ ಭದ್ರತಾ ಕಡೆಯವರು ಎಂದು ಎಸ್ ಡಿಪಿಐ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರ್…

Read More

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕಾರ್ಮಿನ್ ಪಿರೇರಾ ಕುಟುಂಬಕ್ಕೆ ವ್ಯಾಪಕ ಪ್ರಶಂಸೆ

ದೇರಳಕಟ್ಟೆ: “ಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕ” ಎಂಬ ಸಂದೇಶವನ್ನು ಬೆಳ್ತಂಗಡಿ ತಾಲೂಕಿನ ಆರ್ವ ನಿವಾಸಿಗಳಾದ ದಿವಂಗತ ಕಾರ್ಮಿನ್ ಪಿರೇರಾ (70) ಅವರ ಕುಟುಂಬ ತಮ್ಮ ಆದರ್ಶ ನಿರ್ಧಾರದ ಮೂಲಕ ಸಾಕಾರಗೊಳಿಸಿದೆ. ತಮ್ಮ ನಿಧನದ ಬಳಿಕ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ತಮ್ಮ ಮೃತದೇಹವನ್ನು ದಾನ ಮಾಡುವ ಮೂಲಕ ಕಾರ್ಮಿನ್ ಪಿರೇರಾ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇತ್ತೀಚೆಗೆ ನಿಧನರಾದ ಕಾರ್ಮಿನ್ ಪಿರೇರಾ ಅವರ ಮೃತದೇಹವನ್ನು ಅವರ ಕುಟುಂಬದವರು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜುಗೆ ದಾನವಾಗಿ…

Read More

SIR ಸಮೀಕ್ಷೆ ವೇಳೆ ದಾಖಲೆ ಹುಡುಕಾಟದ ನಡುವೆ ಹೃದಯಾಘಾತ; ವ್ಯಕ್ತಿ ಸಾವು

ಉಳ್ಳಾಲ: SIR ಸಮೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಹುಡುಕುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಮಾಡೂರು ಶಾಲೆಯಲ್ಲಿ ಭಾನುವಾರ ಸಂಭವಿಸಿದೆ.ಮೃತರನ್ನು ಕೊಲ್ಯ ನಿವಾಸಿ ಹರೀಶ್ ಗಟ್ಟಿ ಎಂದು ಗುರುತಿಸಲಾಗಿದೆ. SIR ಸಮೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಮಾಡೂರು ಶಾಲೆಯಲ್ಲಿ ಪರಿಶೀಲಿಸಿ, ಅಗತ್ಯ ದಾಖಲೆಗಳನ್ನು ಹುಡುಕುತ್ತಿದ್ದ ಸಂದರ್ಭ ಹರೀಶ್ ಗಟ್ಟಿ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ನೆರವು ನೀಡಲು ಪ್ರಯತ್ನಿಸಿದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಕೌನ್ಸಿಲರ್ ಸುಜಿತ್ ಮಾಡೂರು, ತಹಶೀಲ್ದಾರ್ ಹಾಗೂ ಸಂಬಂಧಪಟ್ಟ…

Read More
error: Content is protected !!