11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಬಂಧನ
ಮಂಗಳೂರು, ಜುಲೈ 14: ಮಂಗಳೂರಿನ ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯ ಈಗಾಗಲೇ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಶಾಹುಲ್ ಹಮೀದ್ ವಿರುದ್ಧ ಅಪಹರಣ, ಸುಲಿಗೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ…
