ಮಂಗಳೂರಿನಲ್ಲಿ ‘Mangalore IAS’ ಶುಭಾರಂಭ: ನಾಗರಿಕ ಸೇವಾ ಕನಸಿಗೆ ಹೊಸ ವೇದಿಕೆ
ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ‘Mangalore IAS – A School for Civil Services’ ಸಂಸ್ಥೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಡಾ. ಹೆನ್ರಿ ಡಿಸೋಜಾ ಅವರು ರಿಬ್ಬನ್ ಕತ್ತರಿಸುವ ಮೂಲಕ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವದಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ಅವರು ದೀಪ…
