ಪಾಲಿಕೆಯಲ್ಲಿ ಜನನ-ಮರಣ ಅರ್ಜಿ ಸ್ವೀಕಾರ, ಭೂಪರಿವರ್ತನೆ ಪ್ರಕ್ರಿಯೆ ಅವ್ಯವಸ್ಥೆ: ಶಾಸಕ ವೇದವ್ಯಾಸ ಕಾಮತ್ ಆರೋಪ
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಸ್ಥಗಿತಗೊಳಿಸಿರುವುದು ಹಾಗೂ ನಗರ ವ್ಯಾಪ್ತಿಯ ಭೂಪರಿವರ್ತನೆ (ಕನ್ವರ್ಷನ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಕರ್ತವ್ಯಕ್ಕೆ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಿರುವ ಕಾರಣ ಒಂದು ತಿಂಗಳ ಕಾಲ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಅರ್ಜಿ ಸ್ವೀಕಾರ ಸ್ಥಗಿತಗೊಳಿಸಲಾಗಿದೆ…
