ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ  ಸಂಘಕ್ಕೆ ರೂ.1.07 ಕೋಟಿ ಲಾಭ,ಸದಸ್ಯರಿಗೆ ಶೇ.22 ಡಿವಿಡೆಂಡ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ದಕ್ಷಿಣ ಕನ್ನಡ ಸಹಕಾರಿ  ನೌಕರರ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ರೂ.1.07 ಕೋಟಿ ಲಾಭ ಗಳಿಸಿ, ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ  ಅಂಚನ್ ತಿಳಿಸಿದ್ದಾರೆ. ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯ ಸಪ್ತವರ್ಣ ಸಭಾಂಗಣದಲ್ಲಿ ಶನಿವಾರ ನಡೆದ 95ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು. “ಸಂಘದ ನೌಕರ ಸದಸ್ಯರೇ ಸಂಘದ ಜೀವಾಳ.ಸದಸ್ಯರ ನಿರಂತರ ಬೆಂಬಲ ಮತ್ತು  ಪ್ರೋತ್ಸಾಹ, ಆಡಳಿತ ಮಂಡಳಿಯ ನಿರ್ದೇಶಕರ ಸಂಘಟಿತ ಕಾರ್ಯನಿರ್ವಹಣೆ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯಿಂದ ಸಂಘವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ,” ಎಂದು ಅವರು ಹೇಳಿದರು. ರೂ.199.75 ಕೋಟಿ ವ್ಯವಹಾರ :ಸಹಕಾರ ಸಂಘಗಳ ನೌಕರ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಹಾಗೂ ಠೇವಣಿಗಳಿಗೆ ಆಕರ್ಷಕ ಬಡ್ಡಿ ನೀಡುವ ಮೂಲಕವೂ  ಸಂಘವು ವರದಿ ವರ್ಷದಲ್ಲಿ ಕೋಟಿಗೂ ಮಿಕ್ಕಿ ಲಾಭ ಗಳಿಸಿ ಸಾರ್ವಕಾಲಿಕ ಸಾಧನೆಗೈದಿದೆ. ಸಂಘವು  ರೂ.29.16 ಲಕ್ಷ ಪಾಲು ಬಂಡವಾಳ ಹಾಗೂ ರೂ.7.94 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ. ಠೇವಣಿ ಸಂಗ್ರಹಣೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಿರುವ ಸಂಘದ ಠೇವಣಿ ಮೊತ್ತವು ಹಿಂದಿನ ಸಾಲಿನ ಅಂತ್ಯದಲ್ಲಿದ್ದ ರೂ.94.33 ಕೋಟಿಯಿಂದ ರೂ.108.08 ಕೋಟಿಗೆ ಏರಿಕೆಯಾಗಿದೆ. ಸಾಲ ಮುಂಗಡ ಮೊತ್ತವೂ ರೂ.82.90 ಕೋಟಿಯಿಂದ ರೂ.91.67 ಕೋಟಿಗೆ ಹೆಚ್ಚಳವಾಗಿದೆ.ಇದರೊಂದಿಗೆ ಸಂಘದಒಟ್ಟು ವ್ಯವಹಾರವು ಹಿಂದಿನ ಸಾಲಿನ ರೂ.177.23 ಕೋಟಿಯಿಂದ ರೂ.199.75 ಕೋಟಿಗೆ ಏರಿಕೆಯಾಗಿದೆ ಎಂದು ಎಸ್.ಜಗದೀಶ್ಚಂದ್ರ  ಅಂಚನ್  ತಿಳಿಸಿದರು. ತಾಲೂಕುವಾರು ಶಾಖೆ : ಸಂಘವು ಪ್ರಸ್ತುತ ನಾಲ್ಕು ಶಾಖೆಗಳನ್ನು  ಹೊಂದಿದ್ದು, ಮಂಗಳೂರಿನಲ್ಲಿ ಎರಡು,  ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸದಸ್ಯರ  ಸಹಕಾರ ಹಾಗೂ ಸಿಬ್ಬಂದಿಯ ಪ್ರಾಮಾಣಿಕ  ಸೇವೆಯಿಂದ ಎಲ್ಲಾ ಶಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ.ಮುಂದಿನ ದಿನಗಳಲ್ಲಿ ಸದಸ್ಯರಿಗೆ ಇನ್ನಷ್ಟು ಹತ್ತಿರವಾಗುವ ಉದ್ದೇಶದಿಂದ ತಾಲೂಕುವಾರು ಶಾಖೆಗಳನ್ನು ತೆರೆಯುವ ಯೋಜನೆ ರೂಪಿಸಲಾಗಿದೆ ಎಂದು ಅವರು  ತಿಳಿಸಿದರು. ಸತತ 9 ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ:ಸಂಘದ ಪ್ರಗತಿಯನ್ನು ಗುರುತಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್, ಕಳೆದ ಎಂಟು ವರ್ಷಗಳಿಂದ ಸತತವಾಗಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.  2017-18ರಿಂದ 2024 -25ರವರೆಗೆ ಸತತ  ಎಂಟು ಬಾರಿ ಪ್ರಶಸ್ತಿ ಪಡೆದಿರುವ ಸಂಘವು  2025-26ನೇ ಸಾಲಿನಲ್ಲೂ ಎಸ್‌ಸಿಡಿಸಿಸಿ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ. ಇದರೊಂದಿಗೆ ಸಂಘವು ಪ್ರತಿಷ್ಠಿತ ಸಾಧನಾ  ಪ್ರಶಸ್ತಿಯನ್ನು ಸತತ 9ನೇ ಬಾರಿಗೆ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಗದೀಶ್ಚಂದ್ರ ಅಂಚನ್ ತಿಳಿಸಿದರು. ‘ಸಹಕಾರ ರತ್ನ’ ಡಾ.ಎಂ.ಎನ್.ಆರ್. ಮಾರ್ಗದರ್ಶನ : ಸಂಘವು ನಿರಂತರವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಸಹಕಾರ ರಂಗದ ಅಗ್ರಗಣ್ಯ ನಾಯಕರಾದ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರ ಸೂಕ್ತ ಸಲಹೆ, ಮಾರ್ಗದರ್ಶನ ಹಾಗೂ ಪ್ರೋತ್ಸಾಹವೇ ಪ್ರಮುಖ ಕಾರಣವಾಗಿದೆ. ಅವರ ದೂರದೃಷ್ಟಿಯ ನಾಯಕತ್ವದ ಫಲವಾಗಿ …

Read More

ಕಸ್ತೂರಿರಂಗನ್ ವರದಿ ಜಾರಿಗೆ ಆಕ್ಷೇಪ: 3 ದಿನಗಳ ವಿಶೇಷ ಅಧಿವೇಶನ ಹಾಗೂ ದ.ಕ., ಉಡುಪಿಯಲ್ಲಿ ಶೀಘ್ರವೇ ಭಾಗಿದಾರರ ಸಭೆ – ಎಂಎಲ್‌ಸಿ ಐವನ್ ಡಿಸೋಜ

ಮಂಗಳೂರು: ಪಶ್ಚಿಮಘಟ್ಟ ಸಂರಕ್ಷಣೆ ನೆಪದಲ್ಲಿ ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿರುವುದು ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅಭಿವೃದ್ಧಿಗೆ ಮಾರಕವಾಗಲಿದೆ. ಈ ಕುರಿತು ವಿಸ್ತೃತವಾಗಿ ಚರ್ಚಿಸಲು ಸೆಪ್ಟೆಂಬರ್ 21, 22 ಮತ್ತು 23ರಂದು ಬೆಂಗಳೂರಿನಲ್ಲಿ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಅದಕ್ಕೂ ಮುನ್ನ ದ.ಕ., ಉಡುಪಿಯಲ್ಲಿ ಸಂತ್ರಸ್ತ ಭಾಗಿದಾರರ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ…

Read More

“ಕಾಂಗ್ರೆಸ್‌ಗೆ ಕ್ರೈಸ್ತರು ಕೇವಲ ವೋಟ್ ಬ್ಯಾಂಕ್‌ವೇ?” – ಆಲ್ವಿನ್ ಡಿಸೋಜ ಪಾನೀರ್ ಪ್ರಶ್ನೆ

ಮಂಗಳೂರು: ಕಾಂಗ್ರೆಸ್ ಪಕ್ಷವು ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತಿದ್ದರೂ, ಪಕ್ಷದ ಸಂಘಟನೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲಾಗುತ್ತಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟದ (AICU) ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳ (DCC) ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಒಬ್ಬ ಕ್ರೈಸ್ತ ನಾಯಕನಿಗೂ ಅವಕಾಶ ನೀಡದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ. “ಕಾಂಗ್ರೆಸ್…

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮುಖವಾಡ ತಯಾರಿ ಮತ್ತು ಮುಖವರ್ಣಿಕಾ ಕಾರ್ಯಾಗಾರ

ಇಂಟಾಕ್ ಮಂಗಳೂರು ಅಧ್ಯಾಯ, ಎಚ್.ಇ.ಸಿ.ಎಸ್, ಇಂಟಾಕ್ ಮತ್ತು ಮಂಚಿ ಕೊಳ್ನಾಡು ಪ್ರೌಢಶಾಲೆಯ ಇಂಟಾಕ್ ಹೆರಿಟೇಜ್ ಕ್ಲಬ್, ಸಹಯೋಗದೊಂದಿಗೆ ಮಂಚಿ – ಕೊಳ್ನಾಡು ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಮುಖವಾಡ ತಯಾರಿ ಮತ್ತು ಮುಖವರ್ಣಿಕೆಯ ಬಗ್ಗೆ ಕಾರ್ಯಕ್ರಮವನ್ನು ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 12.09.2026 ನೇ ಶನಿವಾರ ಆಯೋಜಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಇಂಟಾಕ್ ಮಂಗಳೂರು ಅಧ್ಯಾಯದ ಸಂಚಾಲಕರು ಸುಭಾಷ್ ಚಂದ್ರ ಬಸು ಮಾತನಾಡಿ, ನಮ್ಮ ನಾಡಿನ ಸಾಂಪ್ರದಾಯಿಕ ಕಲೆ ಪರಂಪರೆಗಳನ್ನು ಉಳಿಸುವ ಜವಾಬ್ದಾರಿ ನಮ್ಮ…

Read More

​ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ: ‘ಗೋಸಮ್ಮಾನ್’ ಸಹಿ ಸಂಗ್ರಹ ಅಭಿಯಾನಕ್ಕೆ ಅಧಿಕೃತ ಚಾಲನೆ

​ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು. ಇದೇ ಸಂದರ್ಭದಲ್ಲಿ ‘ಗೋಸಮ್ಮಾನ್ ಅಭಿಯಾನ’ದ ದಕ್ಷಿಣ ಕನ್ನಡ ಜಿಲ್ಲಾ ಸಹ-ಪ್ರಭಾರಿ ಅಶೋಕ್ ಇಳಂತಿಲ ಅವರು ಮಾತನಾಡಿ, ಗೋವಿಗೆ ರಾಷ್ಟ್ರೀಯ ಸ್ಥಾನಮಾನ ದೊರೆಯಬೇಕು, ದೇಶದಲ್ಲಿ ಸಂಪೂರ್ಣ ಗೋಹತ್ಯೆ ನಿಲ್ಲಬೇಕು, ದೇಸೀ ತಳಿಗಳ ಸಂರಕ್ಷಣೆಗಾಗಿ ಪ್ರತ್ಯೇಕ ‘ಗೋಸೇವಾ ಸಚಿವಾಲಯ’ ಸ್ಥಾಪನೆಯಾಗಬೇಕು ಹಾಗೂ ಕಟ್ಟುನಿಟ್ಟಿನ ಗೋಹತ್ಯೆ ನಿಷೇಧ ಕಾನೂನು ಜಾರಿಗೆ…

Read More

ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಎಸ್‌ಐಆರ್ ನೋಟಿಸ್

ಮಂಗಳೂರು:ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡದ ನಿವೃತ್ತ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂಗೆ ಎಸ್‌ಐಆ‌ರ್ ನೋಟಿಸ್‌ ನೀಡಿದೆ. ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಹೆಸರಿನಲ್ಲಿ ತಪ್ಪಿದೆ ಎಂದು ನೋಟಿಸ್‌ ನೀಡಿದ್ದು ಸೆ.29ರಂದು ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆದರೆ ಇಬ್ರಾಹಿಂ ಅವರು ತನಗೆ ನೋಟಿಸ್ ನೀಡಿರುವುದನ್ನು ಆಕ್ಷೇಪಿಸಿ, ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನರಸಿಂಹರಾಜಪುರ ವಿಧಾನಸಭಾ ಕ್ಷೇತ್ರದ ಮತದಾರರಾಗಿರುವ ಅವರ ಹೆಸರಿನಲ್ಲಿ ಮತದಾರರ…

Read More

ಎಸ್‌ಐಆರ್ ನೋಟೀಸ್: ಕುಟುಂಬದ ವಯಸ್ಕ ಸದಸ್ಯರ ಹಾಜರಾತಿಗೆ ಅವಕಾಶ – ಐವನ್ ಡಿ’ಸೋಜಾ

ಮಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ನೀಡಲಾಗಿರುವ ನೋಟೀಸ್‌ಗಳ ವಿಚಾರಣೆಯಲ್ಲಿ ಅನಿವಾಸಿ ಮತದಾರರು, ಹಿರಿಯ ನಾಗರಿಕರು, ಅನಾರೋಗ್ಯಪೀಡಿತರು, ಅಂಗವಿಕಲರು ಹಾಗೂ ಇತರ ಕಾರಣಗಳಿಂದ ಖುದ್ದಾಗಿ ಹಾಜರಾಗಲು ಸಾಧ್ಯವಾಗದವರಿಗೆ ವಿನಾಯಿತಿ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆಗ್ರಹಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗವು ಇತ್ತೀಚೆಗೆ ಹೊರಡಿಸಿರುವ ಆದೇಶದಲ್ಲಿ, ಸಂಬಂಧಪಟ್ಟ ಮತದಾರರ ಪರವಾಗಿ ಕುಟುಂಬದ ಯಾವುದೇ ವಯಸ್ಕ ಸದಸ್ಯರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಲು ಅವಕಾಶ…

Read More

ಮಂಗಳೂರು ಜೈಲು ಜಾಮರ್ ಸಮಸ್ಯೆ: ವೈಜ್ಞಾನಿಕ ಪರಿಹಾರಕ್ಕೆ ವಕೀಲರ ಒತ್ತಾಯ

ಮಂಗಳೂರು :ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ.ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಮಂಗಳೂರು ವಕೀಲರ ಸಂಘ ಒತ್ತಾಯಿಸಿದೆ. ಮೊಬೈಲ್‌ ಜಾಮರ್‌ನ ಪರಿಣಾಮವಾಗಿ ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತ ಮೊಬೈಲ್ ಸಂಪರ್ಕ ಸರಿಯಾಗಿ ಲಭ್ಯವಾಗದ ಕಾರಣ ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಲವು ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ….

Read More

ಮಂಗಳೂರಿನಲ್ಲಿ ಗೋಹತ್ಯೆ ನಿಷೇಧಕ್ಕೆ ಬೃಹತ್ ಸಹಿ ಸಂಗ್ರಹ ಅಭಿಯಾನ

ಮಂಗಳೂರು: ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಕ್ಯಾಂಪ್ಕೋ ಸಂಸ್ಥೆಯ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ವಿಶೇಷ ಸಹಿ ಸಂಗ್ರಹ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಶ್ರೀಮತಿ ಕಮಲಾ ಪ್ರಭಾಕರ್ ಭಟ್, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ ಚಂದ್ರ ಸೇರಿದಂತೆ ಸುಮಾರು 2,500ಕ್ಕೂ ಅಧಿಕ ಗೋಭಕ್ತರು ಹಾಗೂ ಕೃಷಿಕರು ಭಾಗವಹಿಸಿ ಸಹಿ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ…

Read More

ಮಂಗಳೂರಿನಲ್ಲಿ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಏಥೀರಿಯಾ 2026ಕ್ಕೆ ಚಾಲನೆ

ಮಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆ ಆಯೋಜಿಸಿರುವ ಮಾಧ್ಯಮ, ವಿನ್ಯಾಸ ಮತ್ತು ಕಲಾ ಉತ್ಸವ ‘ಏಥೀರಿಯಾ 2026’ಕ್ಕೆ ಗುರುವಾರ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕನ್ನಡ ಚಿತ್ರರಂಗದ ನಟರಾದ ನಿರೂಪ್ ಭಂಡಾರಿ ಹಾಗೂ ಶಾನ್ವಿ ಶ್ರೀವಾಸ್ತವ ಅವರು ಉತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರ್ಟಿಸ್ಟಿಕಾ, ಅಲ್ಯೂರಾ ಹಾಗೂ ರಶಸ್ ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೂ ಚಾಲನೆ ನೀಡಲಾಯಿತು. ನಟರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಚಿತ್ರರಂಗದಲ್ಲಿನ ತಮ್ಮ ಅನುಭವ ಹಾಗೂ ಪಯಣವನ್ನು ಹಂಚಿಕೊಂಡರು….

Read More
error: Content is protected !!