ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು:”ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ…

Read More

ಆಸ್ತಿ ತೆರಿಗೆ ವಸೂಲಾತಿ ಅಭಿಯಾನಕ್ಕೆ ಚಾಲನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿಯನ್ನು ಚುರುಕುಗೊಳಿಸುವ ಸಲುವಾಗಿ ನಗರದಾದ್ಯಂತ ವಸೂಲಾತಿ ಆಂದೋಲನವನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಹಾನಗರಪಾಲಿಕೆ ಆವರಣದಲ್ಲಿ ಆಯುಕ್ತ ರವಿಚಂದ್ರ ನಾಯಕ್ ಹಸಿರು ನಿಶಾನೆ ತೋರಿಸುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕೃಷ್ಣ ನಗರದ ಸಾರ್ವಜನಿಕ ಮೈದಾನವನ್ನು ಯಥಾಸ್ಥಿತಿಯಲ್ಲಿ ಉಳಿಸುವಂತೆ ಸಾರ್ವಜನಿಕರು ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ … !

ಮಂಗಳೂರು:ಮಂಗಳೂರಿನ ಬೊಂದೇಲ್ ಸಮೀಪದ ಕೃಷ್ಣ ನಗರದಲ್ಲಿ ಕಳೆದ 30 ವರ್ಷಗಳಿಂದ ಸಾಂಸ್ಕೃತಿಕ,ಧಾರ್ಮಿಕ ಚಟುವಟಿಕೆಗಳಿಗೆ ಮತ್ತು ಸ್ಥಳೀಯ ನಿವಾಸಿಗಳ ಮಕ್ಕಳು ಹಾಗೂ ಯುವಕರು ಆಟವಾಡುತ್ತಿರುವ ಸಾರ್ವಜನಿಕ ಮೈದಾನದ ಜಾಗವನ್ನು ಸರಕಾರವು ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಬಿಟ್ಟು ಕೊಟ್ಟಿದ್ದು ಆ ಜಾಗವನ್ನು ಸಾರ್ವಜನಿಕ ಮೈದಾನ ವಾಗಿ ಯಥಾಸ್ಥಿತಿ ಯಾಗಿ ಕಾದಿರಿಸುವಂತೆ ಊರಿನ ಸರ್ವ ನಾಗರೀಕರ ಪ್ರತಿಭಟನಾ ಸಭೆಯು ಹೋರಾಟ ಸಮಿತಿಯ ಅದ್ಯಕ್ಷರಾದ ಶ್ರೀನಿವಾಸ ಸಾಲಿಯಾನ್ ರವರ ನೇತೃತ್ವದಲ್ಲಿ ಜರುಗಿತು. ಹೋರಾಟ ಸಮಿತಿಯ ಅದ್ಯಕ್ಷರಾದ ಶ್ರೀನಿವಾಸ ಸಾಲಿಯಾನ್ ಮಾತನಾಡಿ , ಈ…

Read More

ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್

ಪುತ್ತೂರು:”ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಇದರ ದಿನಾಂಕ ತಿಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಪುತ್ತೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಶುಕ್ರವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. “ರಾಜ್ಯದಾದ್ಯಂತ ಎಲ್ಲೆಲ್ಲಿ ಕಾಂಗ್ರೆಸ್ ಭವನಗಳಿಗೆ ನಿವೇಶನಗಳು ಸಿದ್ಧವಿದೆಯೋ ಅವರೆಲ್ಲರಿಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳಿ ಎಂದು ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ. ಪವಿತ್ರವಾದ ದಿನದಂದು ಪುತ್ತೂರಿನ ಕಾಂಗ್ರೆಸ್ ಭವನಕ್ಕೆ ಶಿಲಾನ್ಯಾಸ…

Read More

ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ ನಡೆದಿದೆ:ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್‌.ವಿ

ಮಂಗಳೂರು:ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ ನಡೆದಿದೆ ಎಂದು ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್‌.ವಿ ಹೇಳಿದ್ದಾರೆ.ಮಂಗಳೂರು ನಗರದಲ್ಲಿ ಹೆಲಿಕಾಪ್ಟರ್‌ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಅವರು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದರು. ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ, ವಿಐಪಿ ಗಳಿಗೆ, ಹೆಲಿಟ್ಯೂರಿಸಮ್‌ಗೆ ಹೆಲಿಪ್ಯಾಡ್ ಅಗತ್ಯವಿದೆ.ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು…

Read More

ಸುರತ್ಕಲ್ ಬಳಿ ಕಾರು–ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಸುರತ್ಕಲ್ ಸಮೀಪ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಕಾರಿನ ರಭಸಕ್ಕೆ ಬೈಕ್‌ನಲ್ಲಿದ್ದ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಗಾಯಗೊಂಡ ಉಳಿದ ಇಬ್ಬರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನ ಗರ್ಭಾವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ ಕಬಕ ನಿವಾಸಿವ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

Read More

ನೇಪಾಳದಿಂದ ಕುಳಿತು ಹೂಡಿಕೆ ವಂಚನೆ: 11 ಮಂದಿಯನ್ನು ಬಂಧಿಸಿದ ಮಂಗಳೂರು ಸೆನ್ ಕ್ರೈಂ ಪೊಲೀಸ್‌ಗಳು

ಮಂಗಳೂರು: ನೇಪಾಳದಲ್ಲಿ‌ ಕುಳಿತು ವಂಚನೆ ನಡೆಸುತ್ತಿದ್ದ 11 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ಸೆನ್ ಕ್ರೈಂ ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಇವರು ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿಕೊಂಡು ಭಾರಿ ಮೊತ್ತದ ಹೂಡಿಕೆ ವಂಚನೆ ನಡೆಸುತ್ತಿದ್ದರು. ಈ ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ವಂಚಕರ ಜಾಲವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಬೇಧಿಸಿದ್ದು, ಒಟ್ಟು 11 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಈ ವಂಚಕರ ತಂಡದಲ್ಲಿ 16…

Read More

ನೇಪಾಳದಿಂದ ಭಾರತದ ಮೇಲೆ ಸೈಬರ್ ದಾಳಿ: ನೂರಾರು ಕೋಟಿ ವಂಚನೆ ಪ್ರಕರಣ – ಮಂಗಳೂರಿನಲ್ಲಿ 11 ಆರೋಪಿಗಳ ಬಂಧನ

ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಪೋಲಿಸರು ದಸ್ತಗಿರಿ ಮಾಡಿದ್ದಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624…

Read More

ನಂತೂರು ಅಪಘಾತ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಶವವಿಟ್ಟು ರಸ್ತೆ ತಡೆ, ಸ್ಥಳೀಯರ ಆಕ್ರೋಶ

ನಂತೂರು:ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತ ಯುವತಿಯ ಶವವನ್ನು ಸ್ಥಳಕ್ಕೆ ತಂದು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಗರದ ನಂತೂರು ವೃತ್ತದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ…

Read More
error: Content is protected !!