ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ -ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ – ಫಣೀಂದ್ರ ಕೆ

ಮಂಗಳೂರು: ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ,ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ.ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು…

Read More

ರೈತರೊಂದಿಗೆ ಉತ್ಪಾದಕ ಮೈತ್ರಿಗಳನ್ನು ರೂಪಿಸಲು KERA ಯೋಜನೆಯಡಿ ಕಂಪನಿಗಳಿಗೆ ಆಹ್ವಾನ….. !

ಮಂಗಳೂರು:ಕೇರಳ ಸರ್ಕಾರವು ವಿಶ್ವಬ್ಯಾಂಕ್‌ ಸಹಕಾರದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇರಳ ಹವಾಮಾನ ಸ್ಥಿತಿಸ್ತಾಪಕ ಕೃಷಿ-ಮೌಲ, ಸರಪಳಿ ಆಧುನೀಕರಣ (KERA)ಯೋಜನೆಯಡಿಯಲ್ಲಿ, ರೈತ ಉತ್ಪಾದಕ ಕಂಪನಿಗಳು (FPG) ಹಾಗೂ ಪ್ರಮುಖ ಕೃಷಿ ವ್ಯವಹಾರ ಸಂಸ್ಥೆಗಳ ನಡುವಿನ ಬಲಿಷ್ಠ , ಉತ್ಪಾದಕ ಮೈತ್ರಿಗಳನ್ನು ರೂಪಿಸುವ ಉದ್ದೇಶದಿಂದ ಒಂದು ಐತಿಹಾಸಿಕ ಉಪಕ್ರಮವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಸಂಬಂಧಿತ ಕೃಷಿ ಮತ್ತು ಕೃಷಿಯೇತರ ಸಂಸ್ಥೆಗಳು, ಸೂಪರ್‌ಮಾರ್ಕೆಟ್ ಸರವಳಿಗಳು, ರಫ್ತುದಾರರು ಹಾಗೂ ಇ-ಕಾಮರ್ಸ್ ವೇದಿಕೆಗಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಎಂದು KERA ಯೋಜನಾ ಇದರ ಉಪ ಕೃಷಿ ನಿರ್ದೇಶಕರಾದ…

Read More

ನಂತೂರು ವೃತ್ತದಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ,…

Read More

ಫೆ.12ರಂದು ಅಖಿಲ ಭಾರತ ಮಹಾಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ : ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆ.12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕೇಂದ್ರ…

Read More

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯದ ಪ್ರಕರಣವೊಂದರಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲ ನಿವಾಸಿ ಮಹಮ್ಮದ್‌ ಸಂಶೀರ್‌ ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಳ್ಳಾಲದ ಸಮೀಪ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ವರ್ಷಗಳ ಬಳಿಕ ಆರೋಪಿಯ ಬಂಧನವಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More

ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಕಂಕನಾಡಿ ಪೊಲೀಸರ ಬಲೆಗೆ

ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ…

Read More

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

ಮಂಗಳೂರು: ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ಇದರ ಮಂಗಳೂರು ವೃತ್ತ ಕಾರ್ಯಾಲಯ – ಮಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯಲ್ಲಿರು ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ ಕಾಸರಗೋಡು ಅವರನ್ನು ಶಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುರೇಶ ಕುಮಾರ್ ಕುರುಬ ಅಧ್ಯಕ್ಷತೆ ವಹಿಸಿ,ಸನ್ಮಾನಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕವಿ,ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೆನರಾ ಬ್ಯಾಂಕ್ ಎಂಪ್ಲಾಯಿಸ್…

Read More

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ

ಮಂಗಳೂರು: ಕನ್ನಡ ನಾಡು–ನುಡಿ ಹಾಗೂ ಕನ್ನಡ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ *‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’*ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಮತ್ತು ಸರ್ಕಾರಿ ಶಾಲೆಗಳ ಹಿತಸಂರಕ್ಷಣೆಯ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಮರ್ಪಕ ಸಹಕಾರ ಹಾಗೂ ಪರಿಣಾಮಕಾರಿ ಸಂವಹನ ಅಗತ್ಯವಿದ್ದು, ಸುದೇಶ್ ಕುಮಾರ್…

Read More

ಪುತ್ತೂರಿನ ಹಳೆ ನ್ಯಾಯಾಲಯ ಕಟ್ಟಡದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಸರ್ಕಾರಿ ಇಲಾಖೆಗಳ ಸ್ಥಳಾಂತರಕ್ಕೆ ಪುತ್ತೂರಿನ ಸಹಾಯಕ ಆಯುಕ್ತರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ.

ಪುತ್ತೂರು: ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾದ ಹಿನ್ನೆಲೆಯಲ್ಲಿ, ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ನ್ಯಾಯಾಲಯಗಳ ಕಾರ್ಯಚಟುವಟಿಕೆಗಳಿಗೆ ಅಗತ್ಯವಿರುವ ಸಮರ್ಪಕ ಕಟ್ಟಡ ಹಾಗೂ ಮೂಲಸೌಕರ್ಯಗಳು ಲಭ್ಯವಿರುವುದರಿಂದ, ಪುತ್ತೂರು ಹೃದಯ ಭಾಗದಲ್ಲಿರುವ ಕಿಲ್ಲೆ ಮೈದಾನದ ಹಳೆ ನ್ಯಾಯಾಲಯ ಕಟ್ಟಡವನ್ನು ಈಗಾಗಲೇ…

Read More

ರಸ್ತೆ ಅಪಘಾತಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಪುತ್ತೂರಿನ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ.

ಪುತ್ತೂರು: 2 ತಿಂಗಳ ಹಿಂದೆ ಬದಿಯಡ್ಕದಲ್ಲಿ ರಸ್ತೆ ಅಪಘಾತಗೊಂಡು ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲ ನಿವಾಸಿ ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲಕ ಗಣೇಶ್ ಗೌಡ ಫೆ.3ರಂದು ಬೆಳಗ್ಗೆ ನಿಧನರಾದರು. ಡಿ.6ರಂದು ಬದಿಯಡ್ಕದಲ್ಲಿ ಲೈಟಿಂಗ್ಸ್ ವಿಚಾರದಲ್ಲಿ ಹೋದ ಅವರು ಸ್ಕೂಟ‌ರ್ ಅಪಘಾತಗೊಂಡು ತೀವ್ರ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯರು ಸೇರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಫೆ.3ರಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರರಾದ ಪ್ರದೀಪ್…

Read More
error: Content is protected !!