ಜ.23ರಿಂದ 26ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ : ದ.ಕ ಜಿಲ್ಲಾಪಂಚಾಯತ್ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜ.23ರಿಂದ 26ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ತಿಳಿಸಿದ್ದಾರೆ.ಕದ್ರಿ ಉದ್ಯಾನವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಅವರು, ಜ.23ರ ಸಂಜೆ 4 ಗಂಟೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರ ಉಪಸ್ಥಿತಿ…

Read More

ಯೂತ್ ವಿಂಗ್ – ‘YOUNG DEMOCRATS’ ಆರಂಭಿಸ ಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿರ್ಧಾರ : ಪಕ್ಷದ ರಾಷ್ಟ್ರೀಯಉಪಾಧ್ಯಕ್ಷ ಮುಹಮ್ಮದ್ ಶಫಿ

ಮಂಗಳೂರು:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ‘YOUNG DEMOCRATS’ ಆರಂಭಿಸುವ ನಿರ್ಧಾರವನ್ನು ಕೈಗೊಂಡಿದೆ ಎಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರಾದ ಮುಹಮ್ಮದ್ ಶಫಿ ತಿಳಿಸಿದ್ದಾರೆ.ಅವರು ನಗರದ ಎಕ್ಕೂರಿನ ಇಂಡಿಯಾನ್‌ ಸಭಾಂಗಣದಲ್ಲಿ ನಡೆದ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ , ಪಕ್ಷದ ಯುವ ಸಂಘಟನೆ ಆರಂಭಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಸಂಘಟನಾ ಸಮಿತಿ ಯನ್ನು ರಚಿಸಲಾಗಿದೆ…

Read More

ಕೊಡಿಯಾಲ್ ಬೈಲ್ 30ನೇ ವಾರ್ಡಿನ ಸಮಸ್ಯೆಗಳಿಗೆ ಪರಿಹಾರ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪಾಲಿಕೆ ಕಚೇರಿಯಲ್ಲಿ ಸಾರ್ವಜನಿಕ ಸಭೆ

ಮಂಗಳೂರು:ನಗರದ ಕೊಡಿಯಾಲ್ ಬೈಲ್ 30 ನೇ ವಾರ್ಡಿನ ಪ್ರಮುಖ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವ ಹಾಗೂ ದ.ಕ ಜಿಲ್ಲಾಧಿಕಾರಿ, ಮ.ನಪಾ ಆಡಳಿತಾಧಿಕಾರಿಯಾದ ದರ್ಶನ್ ಎಚ್.ವಿ ರವರ ಉಪಸ್ಥಿತಿಯಲ್ಲಿ ಸಾರ್ವಜನಿಕ ಸಭೆ ನಡೆಯಿತು. ಇಲ್ಲಿನ ಬಲ್ಲಾಳ್ ಬಾಗ್ ನಲ್ಲಿರುವ ಹಳೆಯ ಅವೈಜ್ಞಾನಿಕ ಬ್ರಿಡ್ಜ್ ನಲ್ಲಿ ಮಳೆಗಾಲದಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಾರಾಗವಾಗಿ ಹರಿಯದೇ, ಕೊಡಿಯಾಲ್ ಗುತ್ತು, ಭಾರತಿ ನಗರ, ಚಂದ್ರಿಕಾ ಬಡಾವಣೆ ಮೊದಲಾದ ಪ್ರದೇಶಗಳಲ್ಲಿ ಕೃತಕ ನೆರೆಯ ವಾತಾವರಣ ಸೃಷ್ಟಿಯಾಗಿ…

Read More

ನಾಡಗೀತೆ ಕಡ್ಡಾಯ ಆದೇಶ ಸಮರ್ಪವಲ್ಲ …. !

*ಮಂಗಳೂರು:ಕುವೆಂಪು ಅವರು ರಚಿಸಿರುವ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯ ಅವಧಿ ಅತಿ ಉದ್ದವಾಗಿದ್ದು, ಮಕ್ಕಳಿಗೆ ಹಾಡುವುದು ಕಷ್ಟಸಾಧ್ಯವಾಗಿದೆ. 2.30 ನಿಮಿಷ ಅವಧಿಯ ಈ ಹಾಡನ್ನು ಶಾಲೆಗಳಲ್ಲಿ ಬೆಳಗ್ಗಿನ ವೇಳೆ, ವಿಶೇಷ ಕಾರ್ಯಕ್ರಮಗಳಲ್ಲಿ, ಸರಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಹಾಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿರುವುದು ಆಸಮರ್ಪಕ ನಿರ್ಧಾರವಾಗಿದೆ ಎಂದು ಮಂಗಳೂರು ಮೂಲದ ಗಾಯಕ, ರಾಗ ಸಂಯೋಜಕ ಮಾಣಿಕ್ಯರಾಜ್ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ‘ಜಯ…

Read More

ಮನ್‌ರೇಗಾ ಮಾರ್ಪಾಡು ಬಡವರಿಗೆ ಅನ್ಯಾಯ: ಮೋದಿ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಮಂಗಳೂರು:ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಮುಖ್ಯವಾಗಿ ಬಡವರಿಗೆ ತೊಂದರೆ ಆಗಿಲ್ಲ ಆದರೆ ನಮ್ಮ ಪಕ್ಷದಿಂದ ಜಮೀನ್ದಾರರಿಗಳಿಗೆ ಬಂಡವಾಳ ಶಾಹಿಗಳಿಗೆ, ಭೂಮಾಲಕರಿಗೆ ತೊಂದರೆ ಆಗಿದೆ. ಆದರೆ ಬಿಜೆಪಿಯಿಂದ ಎಲ್ಲರಿಗೂ ತೊಂದರೆ ಆಗಿದೆ. ಕೇಂದ್ರದ ಮೋದಿ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾರ್ಪಾಡು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.ಮನ್‌ರೇಗಾ ಯೋಜನೆಯ ಹೆಸರನ್ನು ತಿದ್ದುವಡಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಟೋಪಿ…

Read More

ಮಂಗಳೂರಿನಲ್ಲಿ ಜನವರಿ 24–25ರಂದು ತುಳುನಾಡು ಪ್ರೀಮಿಯರ್ ಲೀಗ್ (TNPL) ಬ್ಯಾಡ್ಮಿಂಟನ್ ಸೀಸನ್–1

ಮಂಗಳೂರು: ತುಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್(TNPL)) – ಸೀಸನ್ 1 ಓಪನ್ ರಾಜ್ಯ ಆಮಂತ್ರಣ ಬ್ಯಾಡ್ಮಿಂಟನ್ ಲೀಗ್ ಆಗಿದ್ದು, ಜನವರಿ 24 ಮತ್ತು 25ರಂದು ಮಂಗಳೂರಿನ ಉರ್ವಾ ಇಂಡೋರ್ ಬ್ಯಾಡ್ಮಿಂಟನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ. ಈ ಲೀಗ್‌ನಲ್ಲಿ ಭಾರತದ ವಿವಿಧ ಭಾಗಗಳಿಂದ 10 ಫ್ರಾಂಚೈಸ್ ತಂಡಗಳು ಭಾಗವಹಿಸಲಿದ್ದು, ಏಳು ಸ್ಪರ್ಧಾತ್ಮಕ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳನ್ನು ಹಾಗೂ ಭಾರತವನ್ನು ಪ್ರತಿನಿಧಿಸಿದ ವೃತ್ತಿಪರ ಬ್ಯಾಡ್ಮಿಂಟನ್ ಆಟಗಾರರು ಈ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು TNPL ಸ್ಥಾಪಕ ಹಾಗೂ…

Read More

ಅಂತರ್ ರಾಜ್ಯ ಪ್ರತಿಷ್ಠಿತ ‘ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026” ಮುಡಿಗೇರಿಸಿಕೊಂಡ ಖ್ಯಾತ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್

ಮಂಗಳೂರು:ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಖ್ಯಾತ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಕಾಸರಗೋಡು ನುಳ್ಳಿಪ್ಪಾಡಿಯಲ್ಲಿ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಕೆ.ವಾಮನ್ ರಾವ್, ನಿರ್ದೇಶಕ ಕೆ.ಎನ್.ವೆಂಕಟ್ರಮಣ ಹೊಳ್ಳ, ಕರ್ನಾಟಕ ಬ್ಯಾರಿ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ, ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ,…

Read More

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ : ರಾಜೇಶ್ ಶೆಟ್ಟಿ

ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ ಚಾತುರ್ಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಕಾಲೇಜು ಹಂತದಲ್ಲಿ ವಿವಿಧ ತುಳು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕ್ರತಿ ಬಗ್ಗೆ ವಿಚಾರಗಳನ್ನು…

Read More

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿದರೆ ಲೈಸನ್ಸ್ ರದ್ದು- ಡಿ.ಸಿ ಸೂಚನೆ

ಮಂಗಳೂರು:18 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಅಥವಾ ಕಿಶೋರ ಕಾರ್ಮಿಕರನ್ನಾಗಿ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಸಂಸ್ಥೆಯ ಪರವಾನಿಗೆಯನ್ನು ರದ್ದುಗೊಳಿಸಲು ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆ, ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಮಿಕ ಇಲಾಖೆ ವತಿಯಿಂದ ಬಾಲಕಾರ್ಮಿಕರು…

Read More

ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಆಯ್ಕೆ …. !

ಮಂಗಳೂರು:ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು ಹುಟ್ಟಿಕೊಂಡ ಸಂಘಟನೆಯಾಗಿದ್ದು ವಿವಿಧ ಸಾಹಿತ್ಯ ಕಾರ್ಯಕ್ರಮ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ . 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಇವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ಬಜ್ಜೋಡಿಯ ಸಂದೇಶ ಪ್ರತಿಷ್ಠಾನದಲ್ಲಿ ಫೆಬ್ರವರಿ 07 ಸಂಜೆ 6.30 ಕ್ಕೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕರಾದ ರಿಚರ್ಡ್ ಮೊರಾಸ್ ತಿಳಿಸಿದರು…

Read More
error: Content is protected !!