ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ
ಬಂಟ್ವಾಳ:ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ ಹಾಕಲಾದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡು ಹೋಗಲು ಸಾಧ್ಯವಾಗದೆ ಒದ್ದಾಡುತ್ತಿದ್ದ ಚಿರತೆಯ ನೋಡಿದ ಗ್ರಾಮಸ್ಥರು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು ಪಿಲಿಕುಲದ ವೈದ್ಯಾಧಿಕಾರಿ ಯಶಸ್ವಿ ನಾರವಿ ಅವರು ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದು, ಬಳಿಕ…