ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ – ಯು.ಟಿ. ಖಾದರ್

ಮಂಗಳೂರು, ಜು.22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಸಂಬಂಧಪಟ್ಟ ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಆಗ್ರಹಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಸಾವಿರಾರು ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಬೆಳವಣಿಗೆ ಎಂದು ಹೇಳಿದರು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆಸಿರುವುದು…

Read More

ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅಧಿಕಾರ ಸ್ವೀಕಾರ

ಮಂಗಳೂರು, ಜು.22: ತ್ಯಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹುದ್ದೆಗೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. 1966ರ ಮೇ 2ರಂದು ಕೇರಳದ ಮಲಪ್ಪುರಂ ಜಿಲ್ಲೆಯ ಪಾಣಕ್ಕಾಡ್ ಸಮೀಪದ ಪೂವಾಡ್‌ನಲ್ಲಿ ಜನಿಸಿದ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಓತುಪಲ್ಲಿಯಲ್ಲಿ ಪ್ರಾಥಮಿಕ ಧಾರ್ಮಿಕ ಶಿಕ್ಷಣ ಆರಂಭಿಸಿ, ಬಳಿಕ ಪಲ್ಲಿದರ್ಸ್‌ನಲ್ಲಿ 13 ವರ್ಷಗಳ ಕಾಲ ಇಸ್ಲಾಮಿಕ್ ಶಿಕ್ಷಣ ಪಡೆದರು. ಪ್ರವಾದಿ…

Read More

ಯುವ ಕಾಂಗ್ರೆಸ್ ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಇವರ ಅನುಮೋದನೆಯೊಂದಿಗೆ ಆಯಿಷಾ.ಪಿ, ಇವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕರ್ನಾಟಕ…

Read More

ಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ”ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ

ಆ ಪೋಸ್ಟರೇ ಹೊಸತನವನ್ನು ತುಂಬಿಕೊಂಡಿದೆ, ತಬ್ಬಿಕೊಂಡಿದೆ. “ಶ್ರೀಮತಿ ಸತ್ಯಭಾಮ” ಟೈಟಲ್ ಅನ್ನೇ ಆಭರಣ, ಸೀರೆಯಿಂದ ಅಲಂಕರಿಸಲಾಗಿದೆ. Born to Rule ಎಂಬ ಅಡಿಬರಹ ಹಾಗೂ ಸತ್ಯಭಾಮ ನಿಂತ ಭಂಗಿಯು ಆಕೆಯ ಪಾತ್ರ ಎಂಥದ್ದು ಎಂಬುದನ್ನೂ ಸೂಚಿಸುತ್ತದೆ. ಅವೆಲ್ಲವುಗಳಿಂದ ಮುಖ್ಯವಾಗಿ – ಕೈಲಾಸ – ವೈಕುಂಠ ತಿರ್ಗ್ದ್ ಕಲಾಸಂಗಮ ಕುಡ ಭೂಲೋಕೊಗು ಎಂಬ ಒಂದು ವಾಕ್ಯದ ಮೂಲಕ ಈ ತಂಡವು ಪೌರಾಣಿಕ ಕಥೆಗಳ ಬಳಿಕ ಮತ್ತೆ ಸಾಮಾಜಿಕ ಕಥೆಗೆ ಹೊರಳಿದೆ ಎಂಬುದನ್ನು ವಿಭಿನ್ನವಾಗಿ ತಿಳಿಸುವ ಪ್ರಯತ್ನ ಮಾಡಿದೆ. ತುಳು…

Read More

ತುಮಕೂರಿನಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ: 20 ವರ್ಷಗಳಿಂದ ಜೀತದಾಳುಗಳಾಗಿದ್ದ 12 ಕಾರ್ಮಿಕರ ರಕ್ಷಣೆ

ಜು. 22: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಪಾವಸಂದ್ರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿದೆ ಎನ್ನಲಾದ 12 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಭಾಗದ ಕಾರ್ಮಿಕರಿಗೆ ಮುಂಗಡ ಹಣ ನೀಡಿ, ಸುಮಾರು 20 ವರ್ಷಗಳಿಂದ ಜೀತದಾಳುಗಳಾಗಿ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ‘ಮುಕ್ತಿ’ ಸ್ವಯಂಸೇವಾ ಸಂಸ್ಥೆ ನೀಡಿದ ದೂರಿನ ಮೇರೆಗೆ ತುಮಕೂರು ಉಪವಿಭಾಗಾಧಿಕಾರಿ…

Read More

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ: ಪಿಎಂ ಮಾಲತೇಶ್

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಮತ್ತು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025 26ನೇ ಸಾಲಿನಲ್ಲಿ ಪ್ರಾರಂಭವಾಗಿದ್ದು 31 /8 /2018 26ರಂದು ಕೊನೆ ದಿನಾಂಕ ಆಗಿರುತ್ತದೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರದೊಂದಿಗೆ ವೆಬ್ಸೈಟ್ www. Ksbdb.gov.in ಇಲ್ಲಿ ಅರ್ಜಿ ಸಲ್ಲಿಸಬಹುದದಾಗಿದೆ ಈ ಯೋಜನೆಯಲ್ಲಿ ಶೇಕಡಾ 33 ರಷ್ಟು ಮಹಿಳೆಯರಿಗೆ ಹಾಗೂ ದಿವ್ಯಂಗರಿಗೆ…

Read More

ಕುಪ್ಪೆಪದವಿನಲ್ಲಿ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶ; ಪಿಂಚಣಿ ಹೆಚ್ಚಳಕ್ಕೆ ಆಗ್ರಹ

ಬೀಡಿ ಕಾರ್ಮಿಕರಾಗಿ ನಿವೃತ್ತರಾದ ಕುಪ್ಪೆಪದವು ವ್ಯಾಪ್ತಿಯ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶವು ಕುಪ್ಪೆಪದವು ಅನಂತರಾಜ ಸಭಾ ಭವನದಲ್ಲಿ ನಡೆಯಿತು. ಭವಿಷ್ಯ ನಿಧಿ ಪಿಂಚಣಿದಾರರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಸುಕುಮಾರ್ ತೊಕ್ಕೊಟ್ಟು ಸಮಾವೇಶವನ್ನು ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಬೀಡಿ ಮತ್ತಿತರ ಅಸಂಘಟಿತ ವಲಯದಲ್ಲಿ ಕಾರ್ಮಿಕರಾಗಿ ದುಡಿದು ನಿವೃತ್ತರಾದವರಿಗೆ ಭವಿಷ್ಯ ನಿಧಿ ಪಿಂಚಣಿ ವೃದ್ಧಾಪ್ಯದಲ್ಲಿ ಸಣ್ಣ ಆಸರೆಯಾಗಿದೆ. ಅವರ ಔಷಧಿ, ಚಕಿತ್ಸೆ ಮುಂತಾದ ಅಗತ್ಯಗಳಿಗೆ ಈ ಪಿಂಚಣಿಯ ಹಣವನ್ನೆ ಆಶ್ರಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಬೀಡಿ ಕಾರ್ಮಿಕರು…

Read More

ವಿಶ್ವ ಹಿಂದೂ ಪರಿಷತ್ ಮುಖಂಡ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಗಲಿಕೆಗೆ ಆಳವಾದ ಕಂಬನಿ: ವಿಶ್ವ ಹಿಂದೂ ಪರಿಷದ್ ಸಂತಾಪ

ವಿಶ್ವ ಹಿಂದೂ ಪರಿಷತ್ ಉರ್ವಾ ಖಂಡ ಸಮಿತಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ಜವಾಬ್ದಾರಿ ನಿರ್ವಹಿಸಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಕಾಲಿಕ ಮರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರವಿಚಂದ್ರ ಶೆಟ್ಟಿ ಅವರು ಸನಾತನ ಧರ್ಮದ ಮೇಲಿನ ಅಪಾರ ನಿಷ್ಠೆ, ಅನನ್ಯ ಸೇವಾ ಮನೋಭಾವನೆ ಹಾಗೂ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದವರು. ಎಲ್ಲಾಕಾರ್ಯಕರ್ತರೊಡನೆ ಆತ್ಮೀಯರಾಗಿದ್ದ ಸರಳ ವ್ಯಕ್ತಿತ್ವ, ಸಂಘಟನೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ಸೇವಕ….

Read More

ಉಡುಪಿ: ಜುಲೈ 25ರಂದು ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿ ಬಿಡುಗಡೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು.ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಪುಸ್ತಕವನ್ನು ಬಿಡುಗಡೆ…

Read More

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9 ರಂದು ಮಂಗಳೂರಿನ ವೆಲೆನ್ಸಿಯಾ ಜೆಪ್ಪು ಎಂಬಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ ನಡೆಯಲಿದೆ. ಉತ್ತಮ ಗುಣಮಟ್ಟದ ಹಗುರ ಗಾತ್ರದ ಜೈಪುರ್ ಲಿಂಬ್ ನ್ನು ಉಚಿತವಾಗಿ ಶಿಬಿರ…

Read More
error: Content is protected !!