ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ: ಆರೋಪಿ ಬಂಧನ

ಮಂಗಳೂರು : ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ…

Read More

ಡಿಬಿಎಲ್ ಕಳಪೆ ಕಾಮಗಾರಿಗೆ ಮಂಗಳೂರು–ಮೂಡುಬಿದಿರೆ ಹೆದ್ದಾರಿ ಬಲಿ? ಮಿಜಾರಿನಲ್ಲಿ ಮಳೆಗೆ ರಸ್ತೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ

ಮೂಡುಬಿದಿರೆ, ಜೂನ್ 6:ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಗುತ್ತಿಗೆದಾರ ಸಂಸ್ಥೆ ಡಿಬಿಎಲ್ (DBL) ಕೈಗೊಂಡಿರುವ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದಾಗಿ ಮಿಜಾರು ಸಮೀಪ ಹೆದ್ದಾರಿಯ ಒಂದು ಭಾಗ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರ ಆರೋಪದ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೂ ಮುನ್ನ ವೈಜ್ಞಾನಿಕ ರೀತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೇ, ನೀರು ಹರಿಯುವ ದೊಡ್ಡ ಸೇತುವೆ ಅಗತ್ಯವಿದ್ದ ಸ್ಥಳದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಲಾಗಿದೆ. ಇದರ ಪರಿಣಾಮ ಮಳೆನೀರು ಸರಾಗವಾಗಿ ಹರಿಯದೆ ರಸ್ತೆಯ…

Read More

ಬೆಂಗ್ರೆ ಜಲಮೂಲದಲ್ಲಿ ಮೀನುಗಳ ಸಾಮೂಹಿಕ ಸಾವು: ಸ್ಥಳೀಯರಲ್ಲಿ ಆತಂಕ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದ ಜಲಮೂಲದಲ್ಲಿ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಮಾಲಿನ್ಯ ಹಾಗೂ ನೀರಿನಲ್ಲಿನ ಆಮ್ಲಜನಕದ ಕೊರತೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗಿದೆ. ಸಂಸ್ಕರಿಸದ ಕೊಳಚೆ ನೀರು ನೇರವಾಗಿ ಜಲಮೂಲಕ್ಕೆ ಸೇರುತ್ತಿರುವುದು ಮತ್ತು ಹತ್ತಿರದ ಪ್ರದೇಶಗಳಿಂದ ರಾಸಾಯನಿಕ ತ್ಯಾಜ್ಯಗಳು ನೀರಿನಲ್ಲಿ ಬೆರೆಯುತ್ತಿರುವುದೇ ಮೀನುಗಳ ಸಾವಿಗೆ ಪ್ರಮುಖ ಕಾರಣಗಳಾಗಿವೆ. ಇದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದ್ದು, ಪರಿಸರ ಸಮತೋಲನಕ್ಕೂ ಧಕ್ಕೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು…

Read More

ಶಿರ್ವದಲ್ಲಿ ಜಾನುವಾರು ವಧೆ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ

ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ಹೊಳೆಯಲ್ಲಿ ಜಾನುವಾರದ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ಅವರು ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಜಾನುವಾರದ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ…

Read More

ಮಂಗಳೂರಿನಲ್ಲಿ ‘ಉದ್ಗಮ್-2026’ ರಾಷ್ಟ್ರೀಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಗಳೂರು, ಜೂನ್ 5: ದಕ್ಷಿಣ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ವಿದ್ಯಾರ್ಥಿಗಳ ಸಂಘ (SICASA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ‘ಉದ್ಗಮ್-2026’ ಗುರುವಾರ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಸಮ್ಮೇಳನ ಜ್ಞಾನ ವಿನಿಮಯ, ವೃತ್ತಿಪರ ಮಾರ್ಗದರ್ಶನ ಮತ್ತು ನೆಟ್‌ವರ್ಕಿಂಗ್‌ಗೆ ಅವಕಾಶ ಕಲ್ಪಿಸಿತು. ಸೆಬಿ ನೋಂದಾಯಿತ ಸಂಶೋಧನಾ ವಿಶ್ಲೇಷಕ ಹಾಗೂ ಸ್ಪೇಡ್ ಕ್ಯಾಪಿಟಲ್ ಅಡ್ವೈಸರ್ಸ್ ಸಂಸ್ಥಾಪಕ ಶ್ರೇಯಸ್…

Read More

ಮಂಗಳೂರಿನಲ್ಲಿ ದೀಪಾ ಭಸ್ತಿ ವಿಶೇಷ ಉಪನ್ಯಾಸ: ಭಾಷೆ ಮತ್ತು ಸಂಸ್ಕೃತಿ ಕುರಿತು ಚಿಂತನೆ

ಮಂಗಳೂರು: ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್ (ರಿ.), ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

Read More

ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 23ರಂದು ಬೆಳಿಗ್ಗೆ 11.47ರಿಂದ ರಾತ್ರಿ 9.10 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದರು. ಈ ಸಂಬಂಧ ಕುಂದಾಪುರ ಗ್ರಾಮಾಂತರ…

Read More

ಜಲಜೀವನ್ ಮಿಷನ್ ಕಾಮಗಾರಿ ಅವ್ಯವಸ್ಥೆ: ಕೃಷಿಕರ ತೋಟಕ್ಕೆ ನುಗ್ಗಿದ ಮಳೆನೀರು

ಉಡುಪಿ: ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಕಾಮಗಾರಿ ವೇಳೆ ರಸ್ತೆ ಬದಿಯ ಚರಂಡಿಯನ್ನು ಮುಚ್ಚಿರುವ ಪರಿಣಾಮ ಮೊದಲ ಮಳೆಯಲ್ಲೇ ನೀರು ಕೃಷಿ ಭೂಮಿಗೆ ನುಗ್ಗಿ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಕೃಷಿಕ ಮಾಧವ ಭಂಡಾರಿ ಅವರ ತೋಟಕ್ಕೆ ಮಳೆನೀರು ಹರಿದು ಬಂದು ಭೂಮಿ ಜಲಾವೃತಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ. ರಸ್ತೆ…

Read More

ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್‌ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಪೂರ್ವತಯಾರಿ, ತರಬೇತಿ ಹಾಗೂ ಮುದ್ರಣ ಪ್ರಕ್ರಿಯೆಗಳು…

Read More

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

ಮಂಗಳೂರು:ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ರಕ್ಷಿಸಿದರೆ ಸಮಾಜ ತನ್ನಿಂತಾನೆ ಉತ್ತಮ ಪರಿಸರವನ್ನು ಹೊಂದುತ್ತದೆ….

Read More
error: Content is protected !!