ನಾಡೋಜ ಡಾ| ಕೃಷ್ಣ ಪ್ರಸಾದ್ ಕೂಡ್ಲು ರವರಿಗೆ ರಾಮಕ್ಷತ್ರಿಯ ರತ್ನ ಪ್ರಶಸ್ತಿ ಪುರಸ್ಕಾರ

ಉಡುಪಿಯ ನೀಲಾವರದಲ್ಲಿ ದಿನಾಂಕ 31-5-2026 ರಂದು “ರಾಮಕ್ಷತ್ರಿಯ ಜ್ಞಾನ- ಶಕ್ತಿ- ಅರ್ಥ ಸಮಾಗಮ” ಶೀರ್ಷಿಕೆಯ ಬೃಹತ್ ರಾಮಕ್ಷತ್ರಿಯ ಸಮಾಜದ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಪ್ರಮುಖ ಅಂಗವಾಗಿ “ರಾಜ್ಯಲಕ್ಷ್ಮಿ ವಿಜಯೋತ್ಸವ”, “ಕ್ಷತ್ರಿಯ ಹನುಮ ಧ್ವಜ” ಅನಾವರಣ ಹಾಗೂ “ಆರ್. ಕೆ. ಸಾಮ್ರಾಟ್” ರಾಮಕ್ಷತ್ರಿಯ ಡಿಜಿಟಲ್ ಸುದ್ದಿ ಮಾಧ್ಯಮ (E-Channel) ಲೋಕಾರ್ಪಣೆ ಮಾಡಲಾಯಿತು, ಹಾಗೂ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ, ರಾಜಕೀಯ ನೇತಾರರುಗಳಿಗೆ, ರಕ್ಷಣಾ ಇಲಾಖೆಯವರಿಗೆ (ಪೊಲೀಸ್ ಮತ್ತು ಮಿಲಿಟರಿ),…

Read More

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳ

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳವು ಜೂ.5ರಿಂದ 7ರ ತನಕ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ನವತೇಜ ಟ್ರಸ್ಟ್ ಪುತ್ತೂರು ಇವರ ನೇತೃತ್ವ ಮತ್ತು ‘ಮುಳಿಯ ಮ್ಯಾನೇಜ್ ಫಾರ್ಮ್ ಲ್ಯಾಂಡ್‌’ ಇವರ ಪ್ರಾಯೋಜಕತ್ವದಲ್ಲಿ ಈ ಮೇಳ ನಡೆಯಲಿದೆ. ನವತೇಜ ಟ್ರಸ್ಟ್‌ನ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಮತ್ತು ನವತೇಜ ಟ್ರಸ್ಟ್‌ನ ಟ್ರಸ್ಟಿ ಸುಹಾಸ್ ಮರಿಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 2014ರಲ್ಲಿ ನಾವು ಹಲಸಿನ ಮೇಳ ಆರಂಭಿಸಿದ್ದೇವು. ಇವತ್ತು 8ನೇ ಆವೃತ್ತಿಯಲ್ಲಿ ಹಲಸಿನ ಬೇಡಿಕೆ ಹೆಚ್ಚುತ್ತಿದೆ ಎಂದ ಅವರು…

Read More

ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮೈಸೂರು , ತಾಲೂಕು ಪಂಚಾಯಿತಿ ಹುಣಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ, ಮರಗಳ ನೆಡುವಿಕೆ, ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ…

Read More

ಸಂಸ್ಕಾರಯುತ ಶಿಕ್ಷಣ ಇಂದಿನ ಅಗತ್ಯ: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪುತ್ತೂರು, ಜೂನ್ 5: ಜಗತ್ತು ವೇಗವಾಗಿ ಬದಲಾಗುತ್ತಿದ್ದು, ಹೊಸ ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯವಾಗಿದೆ. ಶಿಕ್ಷಣದ ಮಾಧ್ಯಮಕ್ಕಿಂತಲೂ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಒಳಗೊಂಡ ಶಿಕ್ಷಣವೇ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಬನ್ನೂರು ಕೃಷ್ಣನಗರದ ಅಲುಂಬುಡ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ಗುಲಾಮಗಿರಿಯ ಮನೋಭಾವದಿಂದ ಹೊರಬರಲು ಹಾಗೂ…

Read More

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,:ಅಂಗಡಿಗಳು, ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಬೇಕು. ಜಿಲ್ಲಾ ಮತ್ತು…

Read More

ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಮಾನ್ಯ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಹಿರಿಯ ಮುತ್ಸದ್ದಿ ಮಾನ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಮಾನ್ಯ ಡಿ.ಕೆ. ಶಿವಕುಮಾರ್ ಅವರ ಅದ್ವಿತೀಯ ರಾಜಕೀಯ ಮುತ್ಸದ್ದಿತನ, ಸಂಘಟನಾ ಶಕ್ತಿ ಹಾಗೂ ಅಪಾರ…

Read More

ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ

ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಎದುರಿಸುತ್ತಿದ್ದ ಪ್ರಯಾಣ ವೆಚ್ಚದ ಸಮಸ್ಯೆಗೆ ಈ ಯೋಜನೆ ಪರಿಣಾಮಕಾರಿ ಪರಿಹಾರವಾಗಿದೆ…

Read More

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಮಹಿಳೆ – ಆಸ್ಪತ್ರೆಗೆ ದಾಖಲು

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ನಲ್ಲಿ ನಡೆದಿದೆ.ಟ್ರೈನ್ ನಂಬರ್ 16511ರಲ್ಲಿ ಬೆಂಗಳೂರಿಂದ ಹೊರಟು ತಲಚೇರಿಗೆ ಹೋಗುವ ಮಹಿಳೆಗೆ ರೈಲಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್ ಮೂಲಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.

Read More

ಭಾರತೀಯ ಮಜ್ದೂರ್ ಸಂಘದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜೂನ್ 7ರಂದು ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಅವರನ್ನು ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ…

Read More

ವಿಶ್ವ ಪರಿಸರ ದಿನಾಚರಣೆ: ‘ತಾಯಿಯ ಹೆಸರಲ್ಲಿ ಒಂದು ಗಿಡ’ ಕಾರ್ಯಕ್ಕೆ ಚಾಲನೆ…. !

ಮಂಗಳೂರು:ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮವನ್ನು ಗುರುವಾರ ಶಕ್ತಿನಗರದ ನಲ್ಯಪದವಿನ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ…

Read More
error: Content is protected !!