ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ

ಕಡಬ: ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕಡಬ ತಾಲೂಕು ಆಡಳಿತ ಕಚೇರಿ ಉಪತಹಶೀಲ್ದಾರ ಸಯ್ಯುದುಲ್ ಖಾನ್ ಮಾಹಿತಿ ನೀಡಿ, ಕಡಬದಲ್ಲಿ ಕೆ.ಎಸ್ ಆರ್ ಟಿಸಿ ಬಸ್ಸು ನಿಲ್ದಾಣಕ್ಕೆ ಗುರುತಿಸಲಾದ ಕೋಡಿಂಬಾಳ ಗ್ರಾಮದ ೧೪೩/೧ಎ ಸರ್ವೆ ನಂಬರಿನ ೨.೮೩ ಎಕ್ರೆ ಜಾಗಕ್ಕೆ ಉಚ್ಚ ನ್ಯಾಯಲಯದ ತಡೆಯಾಜ್ಞೆಯಿದೆ. ಅಲ್ಲದೆ ಈ ಜಾಗಕ್ಕೆ ಸಂಪರ್ಕ ರಸ್ತೆ ಕಿರಿದಾಗಿದೆ ಎಂದು ಕೆ…

Read More

ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮ: ಕಲಾವಿದರಿಗೆ ಸನ್ಮಾನ

ಮಂಗಳೂರು: ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸರಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮದರ್ಶಿ ಸುರೇಶ್ ಸಾಲಿಯನ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟಕ್ಕೆ ಸಮಸ್ತ ಕಲಾಭಿಮಾನಿಗಳು ಸಹಕಾರ ನೀಡಬೇಕು. ಧರ್ಮ ಪ್ರಜ್ಞೆಯನ್ನು ಬೆಳೆಸುವ ಹಾಗೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ…

Read More

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್‌ಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು, ಜೂನ್ 4: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿ.ಕೆ. ಹರಿಪ್ರಸಾದ್ ಹಾಗೂ ಪಿ.ವಿ. ಮೋಹನ್ ಅವರಿಗೆ ಅವಕಾಶ ನೀಡಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಧಾನ ಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಜೂನ್…

Read More

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಮಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪಕ್ಷದ ಜಯಘೋಷಗಳೊಂದಿಗೆ ಕಾರ್ಯಕರ್ತರು ಹೊಸ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದರು. ಸಂಭ್ರಮಾಚರಣೆಯಲ್ಲಿ ಮುಖಂಡರಾದ ಟಿ.ಕೆ. ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ. ಸುವರ್ಣ, ಯೋಗಿಶ್ ಕುಮಾರ್, ಉದಯ್ ಆಚಾರ್ಯ, ಹನೀಫ್…

Read More

ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮತ್ತಷ್ಟು ಬಲ

ಮಂಗಳೂರು, ಜೂನ್ 3: ನಗರದ ಸಾಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ (SCEM)ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ವಿಭಾಗದಲ್ಲಿ ಸೆಮಿಕಂಡಕ್ಟರ್‌ ಕೇಂದ್ರಿತ ಶಿಕ್ಷಣಕ್ಕೆ ಮಹತ್ವದ ಉತ್ತೇಜನ ದೊರೆತಿದೆ. ಮೇ 30ರಂದು ನಡೆದ ವಿಭಾಗದ 7ನೇ ಅಧ್ಯಯನ ಮಂಡಳಿ (Board of Studies) ಸಭೆಯಲ್ಲಿ ಈ ಕುರಿತು ಮಹತ್ವದ ಬೆಳವಣಿಗೆಗಳು ಚರ್ಚೆಗೆ ಬಂದವು. ಸಭೆಯನ್ನು ಉದ್ದೇಶಿಸಿ ಆನ್‌ಲೈನ್ ಮೂಲಕ ಮಾತನಾಡಿದ ಆರ್‌ವಿ ಸ್ಕಿಲ್ಸ್ ಡಿಸೈನ್ ಸೆಂಟರ್‌ (VLSI Design Centre of Excellence)ನ ಮುಖ್ಯ…

Read More

ಯೂನಿವರ್ಸಿಟಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪ್ರವೇಶಾತಿ ಪ್ರಕ್ರಿಯೆ ಆರಂಭ

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಪ್ರಾಯೋಗಿಕ ತರಬೇತಿ ಹಾಗೂ ಉದ್ಯಮ ಸಂಪರ್ಕದೊಂದಿಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಸಂಯೋಜಿತ ಕೋರ್ಸ್‌ಗಳನ್ನು ಕಾಲೇಜು ನೀಡುತ್ತಿದೆ. ಪತ್ರಿಕೋದ್ಯಮ ವಿಭಾಗದಲ್ಲಿ ಇಂಗ್ಲಿಷ್ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಕನ್ನಡ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಹಿಂದಿ (ಐಚ್ಛಿಕ), ಪತ್ರಿಕೋದ್ಯಮ ಮತ್ತು ಅರ್ಥಶಾಸ್ತ್ರ; ಇತಿಹಾಸ, ಅರ್ಥಶಾಸ್ತ್ರ ಮತ್ತು ಪತ್ರಿಕೋದ್ಯಮ ಸೇರಿದಂತೆ ವಿವಿಧ ಸಂಯೋಜನೆಗಳ ಕೋರ್ಸ್‌ಗಳು ಲಭ್ಯವಿವೆ. ವಿದ್ಯಾರ್ಥಿಗಳಿಗೆ ಅನುಭವಿ ಬೋಧಕ ವರ್ಗ, ಪ್ರಾಯೋಗಿಕ ತರಬೇತಿ, ಆಧುನಿಕ ನ್ಯೂಸ್‌ರೂಂ…

Read More

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಉಡುಪಿ ಜಿಲ್ಲೆಯ ತೆಕ್ಕಟ್ಟೆ ಪ್ರಮುಖ ಸರ್ಕಲ್ ಬಳಿ ನಡೆದಿದೆ. ಮೃತರನ್ನು ಮಣೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಅವರು ಕೋಟಿ ಪೂಜಾರಿ ಅವರ ಪುತ್ರರಾಗಿದ್ದಾರೆ. ಮಂಗಳವಾರ ರಾತ್ರಿ ಸುಮಾರು 9.47ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಣೇಶ್ ಅವರ ಬೈಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು…

Read More

ಡಿ.ಕೆ. ಶಿವಕುಮಾರ್ ಇಂದು ಸಿಎಂ ಪ್ರಮಾಣವಚನ: 13 ಸಚಿವರ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಹಿರಿಯ ಹಾಗೂ ಪ್ರಭಾವಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಭರದ ಸಿದ್ಧತೆಗಳು ನಡೆದಿವೆ. ವೇದಿಕೆಯಲ್ಲಿ 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸರ್ವಧರ್ಮ ಸಮಭಾವದ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಧರ್ಮಗಳ 55 ಮಂದಿ ಸ್ವಾಮೀಜಿಗಳು, ಫಾದರ್‌ಗಳು ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದೆ. ಅವರ ಸಮ್ಮುಖದಲ್ಲೇ…

Read More

ಬೀದಿ ಬದಿ ವ್ಯಾಪಾರಿಗಳ ವಿಚಾರದಲ್ಲಿ ಪಾಲಿಕೆ ವೈಫಲ್ಯ: ಎಎಪಿ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು ಗುರುತಿಸಲು ವಿಫಲವಾಗಿರುವ ಪಾಲಿಕೆಯ ಕ್ರಮವನ್ನು ಆಮ್ ಆದ್ಮಿ ಪಾರ್ಟಿ (ಎಎಪಿ) ತೀವ್ರವಾಗಿ ಖಂಡಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಪುರಭವನದ ಸಮೀಪ ಅನಧಿಕೃತ ಬೀದಿ ಬದಿ ವ್ಯಾಪಾರಿಗಳ ವಿಚಾರವಾಗಿ ಇತ್ತೀಚೆಗೆ ಸಾರ್ವಜನಿಕರಲ್ಲಿ ವ್ಯಕ್ತವಾದ ಆಕ್ರೋಶವು ಪಾಲಿಕೆಯ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದರು. ನೈರ್ಮಲ್ಯದ ಕೊರತೆ, ಕಾಲುದಾರಿ ಅತಿಕ್ರಮಣ ಹಾಗೂ ಮಹಿಳೆಯರ ಸುರಕ್ಷತೆಗೆ…

Read More

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಜೂನ್ 7ರಿಂದ ಜ್ಞಾನೇಶ್ವರಿ ಪಾರಾಯಣ, ಹರಿನಾಮ ಸಪ್ತಾಹ

ಅಧಿಕ ಮಾಸದ ಅಂಗವಾಗಿ ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ಜೂನ್ 7ರಿಂದ 13ರವರೆಗೆ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ್ ಮಹಾರಾಜ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಪ್ರಸಿದ್ಧ ಪುಣ್ಯಕ್ಷೇತ್ರ ಪಂಢರಪುರ, ಶ್ರೀ ಚೈತನ್ಯ ಸದ್ಗುರು ಹರದಾಸ್ವಾಮಿ ಹ. ಹಿರೇಹರಕರ ಬಹುಉದ್ದೇಶೀಯ ಸಂಸ್ಥೆ ಹಾಗೂ ಪಂಢರಪುರದ ಸಹಯೋಗದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…

Read More
error: Content is protected !!