ಇಂದಿನಿಂದ 61 ದಿನ ಮತ್ಸ್ಯ ಗಾರಿಕೆಗೆ ಬ್ರೇಕ್: ಯಾಂತ್ರೀಕೃತ ಬೋಟ್‌ಗಳ ಸಂಚಾರ ಸ್ಥಗಿತ
ಮಂಗಳೂರು:ಪಶ್ಚಿಮ ಕರಾವಳಿಯುದ್ದಕ್ಕೂ ಇಂದಿನಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಜಾರಿಯಾಗಿದ್ದು, ಇದರೊಂದಿಗೆ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ಸ್ಥಗಿತಗೊಳ್ಳಲಿವೆ. ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ನಿರ್ಬಂಧವನ್ನು ಜಾರಿಗೊಳಿಸಿದೆ. ಮಳೆಗಾಲವು ಹೆಚ್ಚಿನ ಕಡಲ ಪ್ರಭೇದಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವಾಗಿದ್ದು, ಈ ಅವಧಿಯಲ್ಲಿ ಯಾಂತ್ರೀಕೃತ ಬೋಟ್‌ಗಳ ಕಾರ್ಯಾಚರಣೆಯಿಂದ ಮೀನುಗಳ ಮೊಟ್ಟೆ ಇಡುವಿಕೆ ಹಾಗೂ ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಇದರಿಂದ ಭವಿಷ್ಯದ ಮೀನು ಸಂಪತ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಸರ್ಕಾರ…
