ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ; ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರುದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ಕರೆಯಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರ ‘ಸಮ್ಮೇಳನ ಸಭಾಂಗಣ’ದಲ್ಲಿ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…

Read More

ಪುತ್ತೂರು; ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಸಚಿವ ಸ್ಥಾನಕ್ಕಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಅಕ್ರಮ ಸಮಿತಿ ಸದಸ್ಯರು ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ನ ಎಸ್ ಸಿ ಘಟಕದ ಅಧ್ಯಕ್ಷರು ಆಗಿರುವ ರಾಮಣ್ಣ ಪಿಲಿಂಜ ಇವರು ಇಂದು ಪುತ್ತೂರು ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ , ಪುತ್ತೂರು ಶಾಸಕರಿಗೆ ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿ ಎಂದು ವಿಶೇಷ ಪ್ರಾರ್ಥನೆ ಮಾಡಿದರು. ನಮ್ಮಂತ…

Read More

ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ದುರ್ಬಲೀಕರಣ ವಿರೋಧಿಸಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬಂಟ್ವಾಳ: ಕೇಂದ್ರ ಸರಕಾರವು ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿರುವ ನೀತಿ ಹಾಗೂ ವಿವಿಧ ಜನವಿರೋಧಿ ವೈಫಲ್ಯಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ ಈ ಪ್ರತಿಭಟನೆ ಆಯೋಜಿಸಲಾಗಿದೆ. ಹಿರಿಯ ನಾಯಕರೂ ಮಾಜಿ ಸಚಿವರಾದ ಬಿ. ರಮನಾಥ ರೈ ಅವರ ಮಾರ್ಗದರ್ಶನದಲ್ಲಿ ದಿನಾಂಕ 30/05/2026ರ ಶನಿವಾರ ಬೆಳಿಗ್ಗೆ 10:30ಕ್ಕೆ…

Read More

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ಮಂಗಳೂರು ದಕ್ಷಿಣ ಪೊಲೀಸರ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಪೊಲೀಸರು ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಹಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್ ಸಮೀರ್ ಎಂದು ಗುರುತಿಸಲಾಗಿದ್ದು, ಅವರು ಬೆಳ್ತಂಗಡಿ ತಾಲೂಕಿನ ಅಜಿಲಮೊಗರು ಮಾವಿನಕಟ್ಟೆ ನಿವಾಸಿಯಾಗಿದ್ದಾರೆ. ಆರೋಪಿಯನ್ನು ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಅಶ್ರಫ್ ವಿರುದ್ಧ ಪಾಂಡೇಶ್ವರ, ಸುರತ್ಕಲ್, ಬಂಟ್ವಾಳ, ಉಪ್ಪಿನಂಗಡಿ ಹಾಗೂ ಪುತ್ತೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ದರೋಡೆ ಹಾಗೂ ಮನೆ…

Read More

ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಮರುಚಿಂತನೆ ಮಾಡಲು ಮಾನವಕುಲಕ್ಕೆ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಈಶ್ವರ್ ಭಟ್ ರಾಕೋಡಿ

ಈಶ್ವರ್ ಭಟ್ ರಾಕೋಡಿ ಬೋಳಂತ್ತೂರು ಪ್ರದೇಶದಲ್ಲಿ ಸುಮಾರು 50 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಸಾಮಾಜಿಕ ಮುಖಂಡರಾಗಿ ಗುರುತಿಸಿಕೊಂಡಿದ್ದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು, ಬೋಳಂತ್ತೂರಿನ ಹಲವು ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬಡವರ ಬಗ್ಗೆ ಕಾಳಜಿ, ನೇರ ನಡೆ-ನುಡಿ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ ಸ್ಥಳೀಯವಾಗಿ ಗೌರವ ಪಡೆದಿದ್ದರು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಸೂಕ್ತ ಗೌರವ…

Read More

ರಾಜ್ಯ ಕಂದಾಯ ಇಲಾಖೆಯಲ್ಲಿ ಭಾರೀ ವರ್ಗಾವಣೆ; ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ವರ್ಗಾವಣೆ

ಕರ್ನಾಟಕ ಸರ್ಕಾರ ರಾಜ್ಯ ಕಂದಾಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 27 ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಈ ಕುರಿತು ಬುಧವಾರ ರಾತ್ರಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಡಬ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಭಾಕರ ಖಜೂರೆ ಅವರನ್ನು ಕಮಲಾಪುರ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ. ಕಮಲಾಪುರ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹ್ಮದ್ ಮೊಹಸೀನ್ ಅವರ ಸ್ಥಾನಕ್ಕೆ ಪ್ರಭಾಕರ…

Read More

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿರುವುದಾಗಿ ಅವರು ಹೇಳಿದರು. ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ರಾಜ್ಯಪಾಲರು ತಮ್ಮ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. “ಹೈಕಮಾಂಡ್ ಸೂಚಿಸಿದಾಗ ರಾಜೀನಾಮೆ ನೀಡುತ್ತೇನೆ ಎಂದು ನಾನು ಹಿಂದೆಯೇ ಹೇಳಿದ್ದೆ. ಎರಡು ದಿನಗಳ ಹಿಂದೆ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಅದರಂತೆ ಇಂದು ನಾನು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದೇನೆ”…

Read More

ಬದ್ರಿಯಾ ಜುಮಾ ಮಸೀದಿ ಮತ್ತು ಹಯತುಲ್ ಇಸ್ಲಾಂ ಮದರಸ ಬಜಾಲ್ ನಂತೂರ್ ಈದುಲ್ ಅಳ್ಹಾ (ಬಕ್ರೀದ್)ಆಚರಣೆ

ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಆಚರಣೆ ನಡೆಯಿತು.ಖತೀಬರಾದ ಅಬ್ದುಲ್ ನಾಸಿರ್ ಸಅದಿ ಈದ್ ಆಶಂಸ ಭಾಷಣ ಮಾಡಿದರು .ತನ್ನ ಭಾಷಣದಲ್ಲಿ ಯಾರೂ ಯಾರೊಂದಿಗೂ ದ್ವೇಷಿಸದೆ ಪರಸ್ಪರ ಕಚ್ಛಾಟದೆ ಒಗ್ಗಟ್ಟಿನಿಂದ ಬಾಳಿರಿ ಯಾವುದೇ ಪ್ರತಿಸಂದಿ ನೇರಿಟ್ಟರೂ ಅಲ್ಲಾಹನು ನೀಡಿದ ಅನುಗ್ರಹಗಳನ್ನು ಮರೆಯದೆ ಅದಕ್ಕೆ ಕೃತಜ್ಞತೆ ಸಲ್ಲಿಸಿ, ಸದಾ ಸಮಯ ಅಲ್ಲಾಹನಿಗೆ ತಲೆಬಾಗಿ ಇಹಪರ ವಿಜಯಿಗಳಾಗಲು ಪ್ರಯತ್ನಿಸಿರಿ ಎಂಬ ಹಿತವಚನ ನೀಡಿದರು‌ ನಂತರ ಸದರ್ ಮುಅಲ್ಲಿಮರಾದ ಅಬ್ದುಲ್ ಹಕೀಂ ಮದನಿ ಈದ್ ನಮಾಜು ಹಾಗೂ ಖುತುಬಾ ನಿರ್ವಹಿಸಿದರು….

Read More

ವಾರದೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ನಗರಸಭೆಗೆ ಮುತ್ತಿಗೆ: ದಿನೇಶ್ ಅಮೀನ್

ಉಡುಪಿ: ಮಳೆಗಾಲದ ಪೂರ್ವ ತಯಾರಿ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳುವಲ್ಲಿ ಉಡುಪಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಆರೋಪಿಸಿದರು.ಉಡುಪಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ರಾಜಕಾಲುವೆ, ಸಣ್ಣ ಕಾಲುವೆ ಹಾಗೂ ಮಳೆ ನೀರು ಹರಿಯುವ ಚರಂಡಿಗಳ ಹೂಳೆತ್ತುವ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಮಳೆ ಆರಂಭವಾದರೆ ನಗರದಲ್ಲಿ ನೀರು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಇದೆ ಎಂದು ಹೇಳಿದರು. ಬನ್ನಂಜೆ ಪ್ರದೇಶದಲ್ಲಿಯೂ ಚರಂಡಿ ಸ್ವಚ್ಛತಾ ಕಾರ್ಯ ಪ್ರಾರಂಭವಾಗಿಲ್ಲ. ವಾರದೊಳಗೆ…

Read More
error: Content is protected !!