ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ
ಉಡುಪಿ: ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ…