ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ‘ಫಿಲೋ ಆರಂಭ’ ಕಾರ್ಯಕ್ರಮ

2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವಕ್ಕೆ ಚಾಲನೆ ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮ ಮೇ 25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಅವರು ಪ್ರಥಮ ಪಿಯುಸಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. “ಹತ್ತನೇ ತರಗತಿಯ ನಂತರ ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂತ ಫಿಲೋಮಿನಾ ಪದವಿ ಪೂರ್ವ…

Read More

ಬದ್ರಿಯಾ ವೆಲ್ಫೇರ್ ಸೊಸೈಟಿಯ 40ನೇ ವರ್ಷಾಚರಣೆ ಸಮಾರೋಪ

ಮಾದಕ ವ್ಯಸನ ವಿರೋಧಿ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಅಜ್ಜಿನಡ್ಕ: ಬದ್ರಿಯಾ ವೆಲ್ಫೇರ್ ಸೊಸೈಟಿ ಇದರ 40ನೇ ವರ್ಷದ ಸಮಾರೋಪ ಸಮಾರಂಭ ಹಾಗೂ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕಾಂತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮಾದಕ ವ್ಯಸನ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಸಂಘ-ಸಂಸ್ಥೆಗಳು ಕ್ರೀಡೆ, ಸಾಮಾಜಿಕ ಹಾಗೂ…

Read More

ಸೋಮಂತಡ್ಕ ಬಳಿ ಕಾರು-ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಫೋಟೋಗ್ರಾಫರ್ ಸಂಘದ ಸದಸ್ಯ ಗಣೇಶ್ ನಿಧನಕ್ಕೆ ಸಂತಾಪ ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ಸಂಭವಿಸಿದ ಕಾರು ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಯರ್ತಡ್ಕ ನಿವಾಸಿ ಗಣೇಶ್ (36) ಮೃತರು. ಅವರು ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು…

Read More

ಕಡಬದಲ್ಲಿ ನದಿಗೆ ಸ್ನಾನಕ್ಕೆ ಹೋದ ವೃದ್ಧ ನೀರಿನಲ್ಲಿ ಮುಳುಗಿ ಸಾವು

ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ನದಿಗೆ ಸ್ನಾನಕ್ಕೆ ತೆರಳಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತರನ್ನು ಮರ್ದಾಳ ಸಮೀಪದ ಕೊಣಾಜೆ ಗ್ರಾಮದ ಸುಬ್ರಮಣ್ಯ (70) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಕಡಬದ ಮರ್ದಾಳ ವಿವಿಧ ಹೋಟೆಲ್ಗಲ್ಲಿ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಸುಬ್ರಮಣ್ಯ ಅವರು ಪ್ರತಿದಿನದ ಅಭ್ಯಾಸದಂತೆ ಸಂಜೆ ವೇಳೆಗೆ ಮನೆಯ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದರು. ಆದರೆ ಸಾಕಷ್ಟು ಸಮಯವಾದರೂ ಮನೆಗೆ ಮರಳಿ…

Read More

ಸುಳ್ಯದಲ್ಲಿ ಮರಿ ಆನೆ ಮೃತದೇಹ ಪತ್ತೆ

ದಂತದಿಂದ ತಿವಿದ ಪರಿಣಾಮ ಸಾವಿನ ಶಂಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಸಮೀಪದ ಅಡ್ತಲೆ ಪ್ರದೇಶದ ಕೃಷಿ ತೋಟವೊಂದರಲ್ಲಿ ಮರಿ ಆನೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಮರಿ ಆನೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಧಿಕಾರಿಗಳು ಸುಳ್ಯ ಎಸಿಎಫ್ ಪ್ರಶಾಂತ್ ಪೈ ಅವರ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್…

Read More

ಮಂಗಳೂರಿನಲ್ಲಿ ಎಸ್‌ಡಿಪಿಐ ಆಕ್ರೋಶ: ಸರ್ಕಾರ ಗಲಭೆಕೋರರಿಗೆ ಬೆಂಬಲ ನೀಡುತ್ತಿದೆ

ಮಂಗಳೂರು: ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸಮಾಜದಲ್ಲಿ…

Read More

ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಮುಖಂಡರ ಭೇಟಿ ಬಕ್ರೀದ್ ಸಂದರ್ಭದಲ್ಲಿ ಕುರ್ಬನಿ ಹೆಸರಿನಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಮುಖಂಡರು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ತಕ್ಷಣ ಮುಚ್ಚುವಂತೆ ಕೂಡ ಅವರು ಆಗ್ರಹಿಸಿದರು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ…

Read More

ಕುದುರೆಮುಖ ಸಂಸ್ಥೆ ಎನ್‌ಎಂಡಿಸಿಗೆ ವಿಲೀನಗೊಳಿಸಿ: ಕೇಂದ್ರಕ್ಕೆ ಶಾಸಕ ಭರತ್ ಶೆಟ್ಟಿ ಮನವಿ

ಮಂಗಳೂರು : ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜೊತೆ ವಿಲೀನಗೊಳಿಸಬೇಕು ಹಾಗೂ ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ…

Read More

ಕದ್ರಿಗುಡ್ಡೆಯಲ್ಲಿ ₹30 ಲಕ್ಷ ರಸ್ತೆ ಅಭಿವೃದ್ಧಿಗೆ ಚಾಲನೆ

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಗುದ್ದಲಿ ಪೂಜೆ ಮಂಗಳೂರು ಮಹಾನಗರ ಪಾಲಿಕೆಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹30 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಬಳಿಕ ಮಾತನಾಡಿದ ಶಾಸಕರು, ರಸ್ತೆ ಅಭಿವೃದ್ಧಿಯ ಅಗತ್ಯತೆ ಕುರಿತು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅಗತ್ಯ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಇಂಗ್ಲಿಷ್ ಐಚ್ಛಿಕ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭ .

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಯೂನಿವರ್ಸಿಟಿ ಕಾಲೇಜು ಮಂಗಳೂರು ನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬಿಎ ಇಂಗ್ಲಿಷ್ ಐಚ್ಛಿಕ (English Optional) ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಎನ್‌ಎಎಸಿ ‘ಎ’ ಗ್ರೇಡ್ ಮಾನ್ಯತೆ ಹಾಗೂ “College with Potential for Excellence” ಗೌರವ ಪಡೆದಿರುವ ಕಾಲೇಜು, ವಿದ್ಯಾರ್ಥಿಗಳಿಗೆ ಭಾಷೆ, ಸಾಹಿತ್ಯ ಹಾಗೂ ಸಂವಹನ ಕೌಶಲ್ಯಗಳನ್ನು ಬೆಳೆಸುವ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಕಾಲೇಜಿನಲ್ಲಿ ಬಿಎ ವಿಭಾಗದಲ್ಲಿ ಇಂಗ್ಲಿಷ್ ಐಚ್ಛಿಕ ಕೋರ್ಸ್‌ನಡಿ ವಿವಿಧ ಸಂಯೋಜನೆಗಳು ಲಭ್ಯವಿದ್ದು, ಇಂಗ್ಲಿಷ್-ಅರ್ಥಶಾಸ್ತ್ರ-ಇತಿಹಾಸ (EEH), ಇಂಗ್ಲಿಷ್-ಇತಿಹಾಸ-ಸಮಾಜಶಾಸ್ತ್ರ…

Read More
error: Content is protected !!