ಉಳ್ಳಾಲ ಪೊಲೀಸ್ ಠಾಣೆ ಪ್ರಕರಣ: ವಾರಂಟ್ ಆರೋಪಿ ಲಕ್ಷ್ಮೀಶ ಬಾಬು ಬಂಧನ

ಮಂಗಳೂರು: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಲಂ 405, 420, 406 ಹಾಗೂ 120(ಬಿ) ಐಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಕ್ಷ್ಮೀಶ ಬಾಬು (48 ವರ್ಷ) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದೆ. ಬಂಧನದ ಬಳಿಕ ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ…

Read More

ಸುರತ್ಕಲ್ ಬಳಿ ಕಾರು–ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಸುರತ್ಕಲ್ ಸಮೀಪ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಕಾರಿನ ರಭಸಕ್ಕೆ ಬೈಕ್‌ನಲ್ಲಿದ್ದ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಗಾಯಗೊಂಡ ಉಳಿದ ಇಬ್ಬರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ: ಯುವತಿ ಸಾವು – ನ್ಯಾಯಕ್ಕಾಗಿ ಮಂಗಳೂರಲ್ಲಿ ಪ್ರತಿಭಟನೆ

ಮಂಗಳೂರು: ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಯುವತಿಯ ಮೃತದೇಹವನ್ನು ತಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಸ್ಥಳೀಯರು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರು ನಗರದ ನಂತೂರು ವೃತ್ತದ ಬಳಿ ಮೊನ್ನೆ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ…

Read More

ಅಕ್ರಮ ಸ್ಪೋಟಕ ಬಳಸಿ ಕಲ್ಲುಬಂಡೆ ಸ್ಪೋಟ- ಇಬ್ಬರ ಬಂಧನ

ಉಡುಪಿ: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ನಿವಾಸಿ ಟಿ.ರವಿಚಂದ್ರ (55 ) ಹಾಗೂ ಆತನ ಮಗ ಪವನ್ ಕುಮಾರ್(31) ಬಂಧಿತ ಆರೋಪಿಗಳು. ಇವರು ಜ.21ರಂದು ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಕುರಿತ ಮಾಹಿತಿಯಂತೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸೀನ್ ಆಫ್ ಕ್ರೈಮ್…

Read More

ಹಿಂದೂ ಮಹಿಳೆ- ಮುಸ್ಲಿಂ ಯುವಕನ ಕುರಿತು ಪೋಸ್ಟ್: ಇಬ್ಬರ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಿತೇಶ್ (20) ಮತ್ತು ಹಿತೇಶ್ (19) ಬಂಧಿತರು. ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.

Read More

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನ ಗರ್ಭಾವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ ಕಬಕ ನಿವಾಸಿವ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

Read More

ಆನ್ ಲೈನ್ ಹೂಡಿಕೆ ಹೆಸರಲ್ಲಿ ವಂಚನೆ ಮಾಡಿದವರು ಜೈಲಿಗೆ!

ಆನ್‌ಲೈನ್ ಹೂಡಿಕೆ ಹೆಸರಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು ಹರ್ಷ ಮಿಸ್ರಾ (22) ಹಾಗೂ ಮುಹಮ್ಮದ್ ಆಕೀಬ್ ಅಲಿ (27), ನೌಶಾದ್ ಅಲಿ…

Read More

ನೇಪಾಳದಿಂದ ಕುಳಿತು ಹೂಡಿಕೆ ವಂಚನೆ: 11 ಮಂದಿಯನ್ನು ಬಂಧಿಸಿದ ಮಂಗಳೂರು ಸೆನ್ ಕ್ರೈಂ ಪೊಲೀಸ್‌ಗಳು

ಮಂಗಳೂರು: ನೇಪಾಳದಲ್ಲಿ‌ ಕುಳಿತು ವಂಚನೆ ನಡೆಸುತ್ತಿದ್ದ 11 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ಸೆನ್ ಕ್ರೈಂ ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.ಇವರು ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿಕೊಂಡು ಭಾರಿ ಮೊತ್ತದ ಹೂಡಿಕೆ ವಂಚನೆ ನಡೆಸುತ್ತಿದ್ದರು. ಈ ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ವಂಚಕರ ಜಾಲವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಬೇಧಿಸಿದ್ದು, ಒಟ್ಟು 11 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಈ ವಂಚಕರ ತಂಡದಲ್ಲಿ 16…

Read More

ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ.ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿ…

Read More

ಕವಯತ್ರಿ ಶಾರದಾ ಮೊಳೆಯಾರ್ ಅವರಿಗೆ ‘ಚುಟುಕು ಸಿರಿ ರತ್ನ’ ಪ್ರಶಸ್ತಿ

ಮಂಗಳೂರು: ಕವಯತ್ರಿ, ಲೇಖಕಿ ಹಾಗೂ ಆದರ್ಶ ಶಿಕ್ಷಕಿ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಶಾರದಾ ಮೊಳೆಯಾರ್ ಅವರಿಗೆ ಪ್ರತಿಷ್ಠಿತ ‘ಚುಟುಕು ಸಿರಿ ರತ್ನ’ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಡಾ. ವಾಮನ್ ರಾವ್ ಬೇಕಲ್ ಸ್ಥಾಪಕರಾಗಿರುವ ಕನ್ನಡ ಭವನ ನುಳ್ಳಿಪ್ಪಾಡಿ, ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ ವಾರ್ಷಿಕೋತ್ಸವದ ಪ್ರಯುಕ್ತ ಈ ಗೌರವ ನೀಡಲಾಗುತ್ತಿದೆ. ಕನ್ನಡ ಭವನದ ‘ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್’ ವೇದಿಕೆಯಲ್ಲಿ ಫೆಬ್ರವರಿ 22, 2026 (ಭಾನುವಾರ) ನಡೆಯಲಿರುವ…

Read More
error: Content is protected !!