ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಬಂಧನ
ಬೆಳ್ತಂಗಡಿ: ಜಲಪಾತಕ್ಕೆ ತೆರಳಿದ್ದ ವೇಳೆ ಮೂವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತರನ್ನು ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಆರೋಪಿಗಳಾದ ಈ ಮೂವರು ಯುವಕರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದರು. ಈ ವೇಳೆ…
