ಸುರತ್ಕಲ್‌ನಲ್ಲಿ ವಿದ್ಯಾರ್ಥಿಗಳು–ಸಾರ್ವಜನಿಕರ ಶ್ರಮದಾನ: ರಾಷ್ಟ್ರೀಯ ಹೆದ್ದಾರಿ ಹಾಗೂ ಬಸ್ ನಿಲ್ದಾಣಗಳ ಸ್ವಚ್ಚತಾ ಅಭಿಯಾನ
ಮಂಗಳೂರು:ಸುರತ್ಕಲ್ ಪ್ರದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕೂಡಿ ಬಸ್ ನಿಲ್ದಾಣ ಮತ್ತು ಪರಿಸರ ಸ್ವಚ್ಚಗೊಳಿಸುವ ಕಾರ್ಯ ನಡೆಸಿದರು.ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್ ಮಾತನಾಡಿ ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದೆ ದೇಶದ ಆರ್ಥಿಕತೆಗೆ ಸಂಘ ಸಂಸ್ಥೆಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಹೇಳಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀನಿವಾಸ್ ಕಾಲೇಜು ಸಮೂಹ ವಿದ್ಯಾ ಸಂಸ್ಥೆ ಮುಕ್ಕ ಹಾಗೂ ಸುರತ್ಕಲ್ ಪೋಲಿಸ್…