ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶರವು ಮಹಾಗಣಪತಿ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಗೆ ಚಾಲನೆ …!

ಮಂಗಳೂರು:ತೊಕ್ಕೊಟ್ಟು, ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಶರವು ಮಹಾಗಣಪತಿ ದೇವಸ್ಥಾನ ದಿಂದ ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಹೊರಡಿತು . ಈ ಸಂದರ್ಭದಲ್ಲಿ ಶರವು ದೇವಸ್ಥಾನದ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ಶಾಸ್ತ್ರೀ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲು , ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ , ಹೊರೆ ಕಾಣಿಕೆ ಸಮಿತಿ ಉಸ್ತುವಾರಿ ಮೋನಪ್ಪ ಭಂಡಾರಿ , ದೇವಸ್ಥಾನ ದ…

Read More

ಫೆಬ್ರವರಿ 01 ಮತ್ತು 02 ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ ಸಂಭ್ರಮ ….!

ಮಂಗಳೂರು:ಸರಕಾರವು ಮಹಿಳೆಯರ ಅಭಿವೃದ್ಧಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಅವುಗಳ ಫಲಾನುಭವಿಗಳನ್ನಾಗಿಸುವಲ್ಲಿ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ಮಹತ್ತರ ಪಾತ್ರ ವಹಿಸುತ್ತಿದೆ. ರಾಜ್ಯದ ಮಹಿಳೆಯರ ಏಳಿಗೆಗಾಗಿ ರಾಜ್ಯದ 31 ಜಿಲ್ಲೆಗಳ ಮಹಿಳೆಯರನ್ನು ಒಗ್ಗೂಡಿಸಿ ಫೆಬ್ರವರಿ 01 ಮತ್ತು 02 ರಂದು ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ಮೈದಾನದಲ್ಲೂ ಹಾಗೂ ಸಾಂಸ್ಕೃತಿಕ ಸಮ್ಮೇಳನವು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಒಕ್ಕೂಟದ ಅಧ್ಯಕ್ಷೆ…

Read More

ಇ-ಖಾತಾ ಅವ್ಯವಸ್ಥೆ, ಹದಗೆಟ್ಟ ರಸ್ತೆ–ಚರಂಡಿ ಸಮಸ್ಯೆ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಧ್ವನಿ ಎತ್ತಿದರು. ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು…

Read More

“ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ-2026″

ಮಂಗಳೂರು: ದೇಶಾದ್ಯಂತ “ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮವು ಜನವರಿ 30 ರಿಂದ ಫೆಬ್ರವರಿ 13 ವರೆಗೆ ನಡೆಯಲ್ಲಿದ್ದು ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ವರ್ಷದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-2026 ಕಾರ್ಯಕ್ರಮವನ್ನು ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ಮಂಚಿಯಲ್ಲಿ ಎಸ್ ವಿ ಎಸ್ ಕಾಲೇಜು ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ವಿದ್ಯಾರ್ಥಿಯು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಸಾಮಾಜಿಕ ಜೀವನದ ಆಗು-ಹೋಗುಗಳ ಬಗ್ಗೆ ಅರಿವಿರಬೇಕು. ಆಗ ಮಾತ್ರ ಅವನು ಸಂಘಜೀವಿಯಾಗಲು ಸಾಧ್ಯ ಎಂದು ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಶಿವಶಂಕರ್ ರಾವ್ ನುಡಿದರು. ಇವರು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ 2025-26 ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಹಾಗೂ ಸಾಮಾಜಿಕ ಪ್ರಗತಿ ಅತಿಮುಖ್ಯ ಅದು ಶಾಲಾ – ಕಾಲೇಜುಗಳಿಗಿಂತ ಈ ರೀತಿಯ…

Read More

ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿದೆ – ಮೀನಾಕ್ಷಿ ಸುಂದರಂ

ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ.ಈ ಹಿನ್ನೆಲೆಯಲ್ಲಿ ಜಾರಿಗೊಂಡ 4 ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು.ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು ಇಂದು ಮಂಗಳೂರಿನ…

Read More

ವೆನ್ಲಾಕ್ ಆಸ್ಪತ್ರೆಗೆ ₹70 ಕೋಟಿ ಹೈಟೆಕ್ ಸ್ಪರ್ಶ – ನೂತನ OPD ಬ್ಲಾಕ್‌ಗೆ ₹35 ಕೋಟಿ

ಮಂಗಳೂರಿನ ಹೆಮ್ಮೆಯ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದ್ದು ₹70 ಕೋಟಿ‌ ಅನುದಾನ ನೀಡಲಾಗುತ್ತಿದ್ದು ಮೊದಲ ಹಂತದಲ್ಲಿ ನೂತನ ಹೊರರೋಗಿ ವಿಭಾಗ (OPD Block) ನಿರ್ಮಾಣಕ್ಕೆ ₹35 ಕೋಟಿ ಅನುದಾನ ಮೀಸಲಿಡಲಾಗಿದೆ.2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ಬೃಹತ್ ಅನುದಾನದೊಂದಿಗೆ ಹೈಟೆಕ್ ಸ್ಪರ್ಶ ನೀಡುವ ಈ ಮಹತ್ವದ ಯೋಜನೆಗೆ ಚಾಲನೆ ದೊರೆತಿದೆ.​ಪಾರದರ್ಶಕವಾಗಿ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ಪೂರೈಕೆ ನಮ್ಮ…

Read More

ಬೆಂಕಿ ಅವಘಡ ತಡೆಗೆ ಅರಣ್ಯ ಇಲಾಖೆ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕೂಡ ಅವರು ಸ್ವತಃ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದ ಅವರು,ಯಾವುದೇ ಸಣ್ಣ ಪುಟ್ಟ ವ್ಯತ್ಯಾಸಗಳು ಕಂಡುಬಂದರೂ ಉದಾಸೀನ ಮನೋಭಾವ ತೋರದೆ ತಕ್ಷಣ ವೈದ್ಯಕೀಯ…

Read More

MPL ಸೀಸನ್–04 ಕ್ರಿಕೆಟ್ ಟೂರ್ನಮೆಂಟ್: ದುಬೈನಲ್ಲಿ ಜರ್ಸಿ ಬಿಡುಗಡೆ, ಫೆ.1ರಂದು ಶಾರ್ಜಾದಲ್ಲಿ ಪಂದ್ಯಾವಳಿ

ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆಯುವ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ ನಡೆಯುವ MPL (season-04) ಕ್ರಿಕೆಟ್ ಟೂರ್ನಮೆಂಟ್ 1/02/2025 ರಂದು ಶಾರ್ಜಾ ಬತಾಯ ಗ್ರೌಂಡ್ ಅಲ್ಲಿ ಜರಗಲಿರುವುದು. ಇದರ ಪ್ರಯುಕ್ತ ಜರ್ಸಿ ಬಿಡುಗಡೆ ಕಾರ್ಯಕ್ರಮ 25/01/2025 ರಂದು MMCT ಕ್ರಿಕೆಟ್ ಗ್ರೌಂಡ್ ದುಬೈ ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಉದ್ಯಮಿ ರೋಷನ್ ಕಂಪ ರಾಮಕ್ಷತ್ರಿಯ ಸಂಘ ಯುಎಇ ಅಧ್ಯಕ್ಷರಾದ ಇಶ್ವರ್ ಬಲ್ಕಿ ರಕ್ಷಿತ್ ಪುತ್ತೂರು ರೇಷ್ಮಾ ಹಾಗೂ ವೇದ ಅತಿಥಿಗಳಾಗಿ ಬಂದಿದ್ದರು ಮಹೇಶ್ ಚಂದ್ರಗಿರಿಯವರ ಅಧ್ಯಕ್ಷತೆಯಲ್ಲಿ…

Read More

ಪಡುಬಿದ್ರೆ: ಮನೆಗೆ ನುಗ್ಗಿ‌ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ.ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3…

Read More
error: Content is protected !!