ಹಳೆ ಡಿಸಿ ಕಚೇರಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ಸಿದ್ಧತೆ:ಐವನ್ ಡಿ’ಸೋಜಾ ವಿಶ್ವಾಸ
ಮಂಗಳೂರು:ಮಂಗಳೂರಿನಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಕೇವಲ ವಕೀಲರದ್ದಲ್ಲ, ಇಡೀ ಕರಾವಳಿ ಭಾಗದ ಸಾರ್ವಜನಿಕರ ನ್ಯಾಯಸಮ್ಮತ ಹಕ್ಕಿನ ಬೇಡಿಕೆಯಾಗಿದ್ದು ಇದಕ್ಕೆ ಮನ್ನಣೆಯನ್ನು ರಾಜ್ಯದ ಮುಖ್ಯ ಮಂತ್ರಿಗಳು ನೀಡಿದ್ದು ಅಕ್ಟೋಬರ್ ತಿಂಗಳ ಒಳಗಾಗಿ ನಗರದ ಹಳೆ ಡಿಸಿ ಕಚೇರಿಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ಐವನ್ ಡಿ’ಸೋಜಾ ತಿಳಿಸಿದರು . ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
