ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅವಕಾಶ: ಬ್ಯಾರಿಸ್ ಸೆಂಟ್ರಲ್ ಕಮಿಟಿ ಸ್ವಾಗತ
ಬೆಂಗಳೂರು:ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಶಿಸ್ತು, ಸುರಕ್ಷತೆ ಮತ್ತು ಗುರುತಿಸುವಿಕೆಗೆ ಅಡ್ಡಿಯಾಗದ ರೀತಿಯಲ್ಲಿ ಧರಿಸಲು ಅವಕಾಶ…
