ಮೇ 17ರಿಂದ ವಿಶ್ವ ಕೊಂಕಣಿ ಸಮಾರೋಹ-2026
ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ನಗರದ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೇ 17 ಮತ್ತು 18ರಂದು ಎರಡು ದಿನಗಳ ‘ವಿಶ್ವ ಕೊಂಕಣಿ ಸಮಾರೋಹ-2026’ ಆಯೋಜಿಸಲಾಗಿದೆ ಎಂದು ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಗೋವಾದ ಕಲೆ ಮತ್ತು ಸಂಸ್ಕೃತಿ ಪೋಷಕಿ ಹಾಗೂ ಶಿಕ್ಷಣ ತಜ್ಞೆ ಸುಲಕ್ಷಣಾ ಸಾವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ…
