ಮೋದಿ ಮಿತವ್ಯಯ ಕರೆಗೆ ಸ್ಪಂದನೆ: ಬಸ್‌ನಲ್ಲಿ ಪುತ್ತೂರಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆದ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೀಡಿರುವ ಮಿತವ್ಯಯ ಕರೆ ಪಾಲನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮೇ.14ರಂದು ಸಾರಿಗೆ ಬಸ್‌ನಲ್ಲಿ ಪುತ್ತೂರಿಗೆ ಆಗಮಿಸಿದರು. ಪುತ್ತೂರು ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿರುವ ಮಣಿಕಂಠ ಅವರ ವಿವಾಹದ ಅತಿಥಿ ಸತ್ಕಾರಕ್ಕೆ ಆಗಮಿಸಿದ ಅವರು ಮಂಗಳೂರು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಸಾರಿಗೆ ಬಸ್‌ನಲ್ಲಿ ಪದಾಧಿಕಾರಿಗಳು ಸಾಮೂಹಿಕವಾಗಿ ಪುತ್ತೂರಿಗೆ ಆಗಮಿಸಿದ್ದಾರೆ. ಬಸ್ ನಿಲ್ದಾಣದಿಂದ ಆಟೋ ರಿಕ್ಷಾದಲ್ಲಿ ಅತಿಥಿ…
