ಬೆಳ್ತಂಗಡಿ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ ಜಾಲ ಬಯಲು

ದಕ್ಷಿಣ ಕನ್ನಡ:ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ…

Read More

ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮ.ನ.ಪಾ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಯು ಸುಮಾರು 10.65 ಲಕ್ಷ ರೂ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈಗಾಗಲೇ ಮೂಡ ವತಿಯಿಂದ ಈ ಹಿಂದೆಯೇ ಪಾರ್ಕ್ ಅಭಿವೃದ್ಧಿಗೊಂಡಿದ್ದು ಪ್ರತಿನಿತ್ಯ ಅನೇಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಇನ್ನಷ್ಟು ಮುಂದುವರಿದ ಅಭಿವೃದ್ಧಿ ಕಾರ್ಯ ಅಗತ್ಯವಿರುವ ಬಗ್ಗೆ ಅನೇಕರು ಮನವಿ ಮಾಡಿದಂತೆ ಮೂಡ ಸಭೆಯಲ್ಲಿ ಅದಕ್ಕೆ ಎಲ್ಲರ…

Read More

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸ್ಪಾರ್ಕ್ ಟ್ರೀಯಿಂದ ವಿಶೇಷ ಉತ್ಸವ:ಮೇ 16 ಮತ್ತು 17ರಂದು “ಕಿಡ್‌ಫೆಸ್ಟ್ 2026”

ಮಂಗಳೂರು: ಮಕ್ಕಳ ಪ್ರತಿಭೆ, ಸೃಜನಶೀಲತೆ ಹಾಗೂ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ‘ಸ್ಪಾರ್ಕ್ ಟ್ರೀ’ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ತಂಡದ ಪ್ರಮುಖರಾದ ಸೌಜನ್ಯ ಹೆಗ್ಡೆ ತಿಳಿಸಿದ್ದಾರೆ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಆಸಕ್ತಿ ಮತ್ತು ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಒದಗಿಸುವ ಆಶಯದೊಂದಿಗೆ ಈ ಉತ್ಸವವನ್ನು ರೂಪಿಸಲಾಗಿದೆ…

Read More

ಮೇ 26ರಿಂದ ‘ಮಂಗಳೂರು ಓಪನ್ ಶೂಟಿಂಗ್ ಚಾಂಪಿಯನ್‌ಶಿಪ್-2026’

ಮಂಗಳೂರು ರೈಫಲ್ ಕ್ಲಬ್ ವತಿಯಿಂದ ಆಯೋಜಿಸಲಾದ ಎರಡನೇ ಆವೃತ್ತಿಯ ‘ಮಂಗಳೂರು ಓಪನ್ ಶೂಟಿಂಗ್ ಚಾಂಪಿಯನ್‌ಶಿಪ್-2026’ ಮೇ 26ರಿಂದ 30ರವರೆಗೆ ನಡೆಯಲಿದೆ ಎಂದು ಕ್ಲಬ್‌ನ ಸ್ಥಾಪಕ ಕಾರ್ಯದರ್ಶಿ ಮುಕೇಶ್ ಕುಮಾರ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂಟಿಂಗ್ ಕ್ರೀಡೆಯನ್ನು ತಳಮಟ್ಟದಿಂದ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರತಿಷ್ಠಿತ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ ಎಂದರು. ವಿವಿಧ ರಾಜ್ಯಗಳಿಂದ ಸುಮಾರು 450ಕ್ಕೂ ಅಧಿಕ ಶೂಟರ್‌ಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಅರ್ಹತಾ ಸುತ್ತಿನ ಸ್ಪರ್ಧೆಗಳು ಕದ್ರಿ ಮಲ್ಲಿಕಟ್ಟೆಯ ಜುಗುಲ್…

Read More

ಜೆಎಫ್ ಅಸೋಸಿಯೇಷನ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು ನಗರದ ಬಜಾಲ್ ನಂತೂರಿನ ಜೆ ಎಫ್ ಅಸೋಸಿಯೇಷನ್ ವತಿಯಿಂದ, ಯೆನೆಪೊಯ ಬ್ಲಡ್ ಬ್ಯಾಂಕ್ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ಸಹಯೋಗದೊಂದಿಗೆ ಭಾನುವಾರ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಸಂಸ್ಥೆಯ ಅಧ್ಯಕ್ಷ ನಝೀರ್ ಬಜಾಲ್ ಅವರ ನೇತೃತ್ವದಲ್ಲಿ ನಡೆದ ಶಿಬಿರವನ್ನು ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಅಬ್ದುಲ್ ರವೂಫ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, “ರಕ್ತದಾನವು ಆರೋಗ್ಯವಂತ ವ್ಯಕ್ತಿಯ ಸಾಮಾಜಿಕ ಕರ್ತವ್ಯ. ರಕ್ತದಾನದಿಂದ ರೋಗಿಗಳು ಹಾಗೂ ಅಪಘಾತದಲ್ಲಿ ಗಾಯಗೊಂಡವರ…

Read More

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು, ಮೇ 9: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ….

Read More

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಡಿ. ಸುಧಾಕರ್ ನಿಧನ

ಬೆಂಗಳೂರು : ಕರ್ನಾಟಕ ಸರ್ಕಾರದ ಯೋಜನೆ ಮತ್ತು ಅಂಕಿಅಂಶ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಇಂದು ಮುಂಜಾನೆ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು ಮತ್ತು ಕಳೆದ ಎರಡು ತಿಂಗಳಿನಿಂದ ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಅವರ ಸಾವು ರಾಜ್ಯದ ರಾಜಕೀಯ ವಲಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದೆ. ಬೆಂಗಳೂರಿನ ಕೃಷ್ಣ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ಪ್ರಕಾರ, ಸಚಿವ ಸುಧಾಕರ್ ಭಾನುವಾರ ಬೆಳಗಿನ ಜಾವ 3:15 ಕ್ಕೆ…

Read More

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಎಸ್.ಎನ್. ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ವೃಷಭ ಹಾಗೂ ಕಾನ್ಸ್ಟೇಬಲ್ ಚರಣ್ ರಾಜ್ ಅವರು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಹೆಚ್.ಡಿ.ಕೋಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಉಪ್ಪಿನಂಗಡಿಯಲ್ಲಿ ಭೀಕರ ದುರಂತ; ರೋಡ್ ರೋಲರ್ ಹರಿದು ಕಾರ್ಮಿಕ ಸಾವು

ಉಪ್ಪಿನಂಗಡಿ ಸಮೀಪದ ಗಾಂಧಿಪಾರ್ಕ್ ಬಳಿ ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್‌ನಡಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ, ಮೃತ ವ್ಯಕ್ತಿ ರಸ್ತೆ ಬದಿಯಲ್ಲಿ ಮಲಗಿದ್ದ ವೇಳೆ ರೋಡ್ ರೋಲರ್ ಆತನ ಮೇಲಿಂದ ಚಲಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಉತ್ತರ ಭಾರತದ ಮೂಲದ…

Read More

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಮೇ 10ರಂದು ‘ಸಂಗೀತ ಸುಧೆ 2026’ ಕಾರ್ಯಕ್ರಮ

ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸೇವಿನೆನಪು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಮೇ 10ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ನಾಗೇಂದ್ರ ಎನ್ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜಲಿ ಆಯೋಜಿಸಲಾಗಿದೆ….

Read More
error: Content is protected !!