ಪ್ರತಿಷ್ಠಿತ ಶ್ರೀ ಕುಂದೇಶ್ವರ ಪ್ರಶಸ್ತಿ ಪ್ರಕಟ … !
ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ರಂಗದ ಅಗ್ರಮಾನ್ಯ ಮಹಿಳಾ ಭಾಗವತೆಯಾದ ಕಾವ್ಯಶ್ರೀ ಅಜೇರನ್ನು ಮತ್ತು ರಂಗಭೂಮಿ ಕ್ಷೇತ್ರಕ್ಕೆ ನೀಡಲಾಗುವ ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಹಿರಿಯ ಕಲಾವಿದ ಉಮೇಶ್ ಮಿಜಾರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು , ಶ್ರೀ ಕುಂದೇಶ್ವರ ದೇಗುಲದ ಧರ್ಮದರ್ಶಿ, ಯಕ್ಷಗಾನ ಮೇಳ…