ಪಂಚರಾಜ್ಯ ಫಲಿತಾಂಶಗಳು ಬಿಜೆಪಿ ಪರ ಸುನಾಮಿ: ಸತೀಶ್ ಕುಂಪಲ
ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ .ಸತೀಶ್ ಕುಂಪಲ ಹೇಳಿದ್ದಾರೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ ಎಂದವರು ಹೇಳಿದ್ದಾರೆ. ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ…
