ಬಿಎಸ್ ವೈ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು

ಮಂಗಳೂರು, ಮೇ 2: “ಬಿಎಸ್ ವೈ ಅಭಿಮಾನೋತ್ಸವ” ಕಾರ್ಯಕ್ರಮ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕರ್ತರನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದುಳಿದ ವರ್ಗಗಳ…

Read More

ಸಿಎಂ ಗಾದಿ ಪೈಪೋಟಿಯೇ ಸರ್ಕಾರದ 3 ವರ್ಷದ ಸಾಧನೆ: ಸತೀಶ್ ಕುಂಪಲ

ಮಂಗಳೂರು, ಮೇ 2: ರಾಜ್ಯ ಸರ್ಕಾರ ಆಡಳಿತ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪೈಪೋಟಿಯೇ ಕಳೆದ ಮೂರು ವರ್ಷಗಳ ಸರ್ಕಾರದ ಸಾಧನೆಯಾಗಿದೆ ಎಂದು ಸತೀಶ್ ಕುಂಪಲ ಟೀಕಿಸಿದ್ದಾರೆ. ಮಂಗಳೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಸರ್ಕಾರವೇ ಘೋಷಿಸಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಹ ಸಮರ್ಪಕವಾಗಿ ಸೌಲಭ್ಯಗಳು ತಲುಪುತ್ತಿಲ್ಲ ಎಂದರು. ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗದೆ ಜನರು…

Read More

ಕೊರಿಂಗಿಲ ಜುಮಾ ಮಸೀದಿಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಪುತ್ತೂರು : ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಕೊರಿಂಗಿಲ ಜುಮಾ ಮಸೀದಿಯಲ್ಲಿ ನಡೆಯಿತು. ಕೊರಿಂಗಿಲ ಜಮಾಅತ್ ನ ಸದಸ್ಯರಾದ ಶಾಹುಲ್ ಹಮೀದ್ KMK ಹಾಗೂ ಪುತ್ತುಚ್ಚ ಗುಂಡ್ಯಡ್ಕ ಇವರು ಹಜ್ ಯಾತ್ರೆ ಕೈಗೊಳ್ಳುತ್ತಿದ್ದು ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಡಲಾಯಿತು. ಖತೀಬರಾದ ಬಹು. ಅಲ್ಹಾಜ್ GH ಅಯ್ಯೂಬ್ ವಹಬಿ, KJM ಅಧ್ಯಕ್ಷರಾದ ಜ. ಮುಹಮ್ಮದ್ ಕುಂಞ ಹಾಜಿ, ಪ್ರಧಾನ ಕಾರ್ಯದರ್ಶಿ ಮೂಸೆ ಕುಂಞ ಬೆಟ್ಟoಪಾಡಿ, ಕೋಶಾಧಿಕಾರಿ ಮುಹಮ್ಮದ್ ಹಾಜಿ ಶಾಲಾಬಳಿ, ಉಪಾಧ್ಯಕ್ಷರಾದ ಆಲಿ ಕುoಞ ಹಾಜಿ, ಹಮೀದ್…

Read More

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಆರ್ಥಿಕತೆಯನ್ನು ರಕ್ಷಿಸಲು ವಿಫಲವಾಗಿದೆ ಎಂದು ಆರೋಪಿಸಿದರು. ವಿಧಾನಸಭಾ ಚುನಾವಣೆಗಳು ಮುಗಿದ ತಕ್ಷಣವೇ ಬೆಲೆ ಏರಿಕೆ ಮಾಡಲಾಗಿದೆ. ಮೇ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ…

Read More

ಆನೆ ದಾಳಿಗೆ ಮೂರು ಮಾವಿನ ಮರ ನಾಶ

ಹನಗೋಡು : ಮೇವನ್ನರಸಿ ರಾತ್ರಿ ಸಮಯದಲ್ಲಿ ರೈತರ ಜಮೀನಿಗೆ ಲಗ್ಗೆಯಿಟ್ಟ ಒಂಟಿ ಸಲಗವೊಂದು ಮೂರು ಮಾವಿನ ಮರಗಳನ್ನ ನಾಶಗೊಳಿಸಿರುವ ಘಟನೆ ಹನಗೋಡು ಹೋಬಳಿಯ ಕೊಳವಿಗೆ ಗ್ರಾಮದಲ್ಲಿ ನಡೆದಿದೆ. ಕೊಳವಿಗೆ ಗ್ರಾಮದ ಶಿವರುದ್ರಪ್ಪ ಎಂಬುವರಿಗೆ ಸೇರಿದ ಮಾವಿನ ಮರಗಳು ಆನೆ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ಇನ್ನೇನು ಫಸಲನ್ನು ಕೂಯ್ಲು ಮಾಡುವ ಸಮಯವಾಗಿದ್ದು, ನಷ್ಟದಿಂದ ರೈತ ಶಿವರುದ್ರಪ್ಪ ರವರು ಪರಿಹಾರಕ್ಕಾಗಿ ಅರಣ್ಯ ಇಲಾಖೆಯವರನ್ನು ಮನವಿ ಮಾಡಿದ್ದಾರೆ.

Read More

ಕಾರ್ಮಿಕರೇ ದೇಶದ ಅಭಿವೃದ್ಧಿಯ ಶಿಲ್ಪಿಗಳು: ಸಿದ್ದರಾಮಯ್ಯ

ಬೆಂಗಳೂರು, ಮೇ 2: ಕಾರ್ಮಿಕರು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯ ಶಿಲ್ಪಿಗಳಾಗಿದ್ದು, ಅವರ ಶ್ರಮವೇ ರಾಷ್ಟ್ರ ನಿರ್ಮಾಣದ ಮೂಲಶಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಾಯಕವೇ ಕೈಲಾಸ” ಎಂದು ಬಸವಣ್ಣ ಹೇಳಿರುವುದನ್ನು ಉಲ್ಲೇಖಿಸಿದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ದೊರೆಯಬೇಕು. ಕಾರ್ಮಿಕರು ದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅವಿಭಾಜ್ಯ ಅಂಗ ಎಂದು ಹೇಳಿದರು. ದೇಶದಲ್ಲಿ 75 ಶೇಕಡಕ್ಕೂ…

Read More

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಸ್ಥಾನ ಗೆಲ್ಲಲಿದೆ: ಕೆ. ಸುರೇಂದ್ರನ್ ವಿಶ್ವಾಸ

ಪುತ್ತೂರು: ಕೇರಳದಲ್ಲಿ ಈ ಬಾರಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನ ಗಳಿಸಲಿದೆ ಎಂದು ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20 ಶೇಕಡಾ ಮತಗಳನ್ನು ಪಡೆದಿದ್ದು, ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿರುವುದನ್ನು ಉಲ್ಲೇಖಿಸಿದರು. ಕೇರಳದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿನತ್ತ ಕೊಂಡೊಯ್ದಿದ್ದೇವೆ. ಇದೇ ರೀತಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಉತ್ತಮ ಸಾಧನೆ…

Read More

ಗ್ಯಾಸ್ ದರ ಏರಿಕೆ ಹೋಟೆಲ್ ಉದ್ಯಮಕ್ಕೆ ಆಘಾತ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದಿಂದ ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಎಲ್ ಪಿಜಿ ದರ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಹೊಟೇಲ್ ಮಾಲಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು, ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ದರ…

Read More

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್

ಉಡುಪಿ: ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ‌. ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಶನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ….

Read More

ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿದ ಜನವಿರೋಧಿ ಕಾರ್ಮಿಕ ಸಂಹಿತೆಗಳು – ಸುನಿಲ್ ಕುಮಾರ್ ಬಜಾಲ್

ಮಂಗಳೂರು: 8 ಗಂಟೆಯ ದುಡಿಮೆ,8 ಗಂಟೆಯ ನಿದ್ರೆ,8 ಗಂಟೆಯ ವಿಶ್ರಾಂತಿಗಾಗಿ ಮೂಡಿ ಬಂದಿರುವ ಮೇ ದಿನಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಜಗತ್ತಿನಾದ್ಯಂತ ಮಾನವ ಜನಕೋಟಿಗಳು ಒಂದಾಗಿ ಆಚರಿಸುವ ಏಕೈಕ ದಿನವಾಗಿದೆ ಮೇ ದಿನ.ಅಂತಹ ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿ ದಿನದ ದುಡಿಮೆಯನ್ನು 12 ಗಂಟೆಗೆ ಏರಿಸುವ ಮೂಲಕ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಸರಕಾರದ ವಿರುದ್ಧ ಸಮರಶೀಲ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗ ಸಜ್ಜಾಗಬೇಕೆಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್…

Read More
error: Content is protected !!