ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಸನ್ಮಾನ, ಸ್ಮಾರ್ಟ್ ಕಾರ್ಡ್ ವಿತರಣೆ
ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಆರು ಮಂದಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂದರ್ಭದಲ್ಲಿ ಧೈರ್ಯದಿಂದ ಸೇವೆ…
