ಮಂಗಳೂರು: ‘ವಾದಿರಾಜ ವಾಲಗ ಮಂಡಳಿ’ ಚಿತ್ರದ ಚಿತ್ರೀಕರಣ ಪೂರ್ಣ, ಆಗಸ್ಟ್‌ನಲ್ಲಿ ಬಿಡುಗಡೆ
ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಹಾಸ್ಯಮಯ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕಾರ್ಯಗಳು ವೇಗವಾಗಿ ಸಾಗುತ್ತಿವೆ ಎಂದು ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಂ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ವಿಶಿಷ್ಟ ಕಥಾಹಂದರ ಮತ್ತು ಹೊಸ ಶೀರ್ಷಿಕೆಯ ಮೂಲಕ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಕರಾವಳಿ ಕನ್ನಡದ ಸೊಗಡನ್ನು ಒಳಗೊಂಡಿರುವ ಈ ಸಿನಿಮಾ…
