ಗೋಮಾತೆಗೆ ‘ರಾಷ್ಟ್ರಮಾತೆ’ ಸ್ಥಾನಮಾನ: ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಣೆ
ಮಂಗಳೂರು:ಗೋಮಾತೆಗೆ ‘ರಾಷ್ಟ್ರ ಮಾತೆ’ ಗೌರವ ನೀಡಬೇಕು ಹಾಗೂ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹದೊಂದಿಗೆ ‘ಗೋಮಾತೆಯ ಗೌರವ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಉದ್ದೇಶದಿಂದ ದೇಶಾದ್ಯಂತ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದರು . ಈ ಅಭಿಯಾನದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ…
