ಬಿಲ್ಲವ ಬ್ರಿಗೇಡ್–ನಂದಾದೀಪ ಫೌಂಡೇಶನ್ ವತಿಯಿಂದ 14ನೇ ಮತ್ತು 15ನೇ ಮನೆಗಳ ಹಸ್ತಾಂತರ: ಏ.25ರಂದು ‘ಸೇವಾ ಸಂಭ್ರಮ’

ಬಡವರ ಕಣ್ಣೀರು ಒರೆಸುವ ಸಂಕಲ್ಪದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಬ್ರಿಗೇಡ್ ಹಾಗೂ ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ 14ನೇ ಮತ್ತು 15ನೇ ಮನೆಗಳ ಹಸ್ತಾಂತರ ಹಾಗೂ ‘ಸೇವಾ ಸಂಭ್ರಮ’ ಕಾರ್ಯಕ್ರಮ ಏಪ್ರಿಲ್ 25ರಂದು ಸಂಜೆ 6 ಗಂಟೆಗೆ ಬಂಟ್ವಾಳ ತಾಲೂಕಿನ ಪಂಬದಬೆಟ್ಟು ಬ್ರಹ್ಮರಕೂಟ್ಟು ಟೋಲ್‌ಗೇಟ್ ಸಮೀಪದ ಕ್ರೀಡಾಂಗಣದಲ್ಲಿ ನಡೆಯಲಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಂದಾದೀಪ ಫೌಂಡೇಶನ್ ಮಂಗಳೂರು ಸ್ಥಾಪಕ ಸದಾನಂದ ಪೂಜಾರಿ ಈ ಕುರಿತು ಮಾಹಿತಿ ನೀಡಿದರು. ಈಗಾಗಲೇ 13 ಮನೆಗಳನ್ನು ನಿರ್ಮಿಸಿ…

Read More

ಪುತ್ತೂರು ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಯ ಮೇಲೆ ದಾಳಿ: ಐವರು ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯನ್ನು…

Read More

ಪ್ರಧಾನಿ ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ಇಡೀ ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅವಹೇಳನಕಾರಿಯಾಗಿ ನಿಂದಿಸಿರುವುದು ದೇಶದ ಸಮಸ್ತ ಪ್ರಜೆಗಳಿಗೆ ಮಾಡಿದ ಅವಮಾನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. “ಮೋದಿ ಭಯೋತ್ಪಾದಕ ” ಎಂಬ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ನಾಯಕ ಅದರಲ್ಲಿಯೂ ದೇಶದ ಪ್ರಧಾನಮಂತ್ರಿಯನ್ನು ಇಂತಹ ಕೀಳುಮಟ್ಟದ ಶಬ್ದಗಳಿಂದ…

Read More

ಎನ್.ಎಂ.ಪಿ.ಎ. ಶಾಲೆ ವಿಲೀನ ಯತ್ನಕ್ಕೆ ಬಿ.ಎ. ಮೊಯ್ದೀನ್ ಬಾವಾ ಆಕ್ರೋಶ: ಹೋರಾಟದ ಎಚ್ಚರಿಕೆ

ನವಮಂಗಳೂರು ಬಂದರು ಮಂಡಳಿ (NMPA) ಆಡಳಿತಕ್ಕೆ ಒಳಪಟ್ಟಿರುವ ಹಾಗೂ ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದೀನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಗತ್ಯವಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಶಾಲೆ ಕೇವಲ ಕಟ್ಟಡವಲ್ಲ; ನವಮಂಗಳೂರು ಬಂದರಿಗಾಗಿ ತಮ್ಮ ಭೂಮಿಯನ್ನು ತ್ಯಾಗ…

Read More

ವೈದ್ಯಕೀಯ ಶಿಕ್ಷಣದಲ್ಲಿ ಕ್ರಾಂತಿ: DrDevansAcademy.org ನಿಂದ ಅತ್ಯಾಧುನಿಕ ಡಿಜಿಟಲ್ ಕಲಿಕಾ ವೇದಿಕೆ ಬಿಡುಗಡೆ

ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್‌ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು…

Read More

ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಹಬ್ಬ ಏಪ್ರಿಲ್ 24ರಿಂದ ಆರಂಭ

ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ 28ನೇ ವರ್ಷದ ರಾಷ್ಟ್ರೀಯ ಕಾನೂನು ಹಬ್ಬವು ಏಪ್ರಿಲ್ 24, 25 ಮತ್ತು 26ರಂದು ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 24ರಂದು ಪೂರ್ವಾಹ್ನ 9.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಕೇರಳದ ಕೊಚ್ಚಿಯ ನ್ಯಾಶನಲ್ ಯುನಿವರ್ಸಿಟಿ ಆಫ್ ಅಡ್ವಾನ್ಸ್‌ಡ್ ಲೀಗಲ್ ಸ್ಟಡೀಸ್‌ನ ಕುಲಪತಿ ಪ್ರೊ. ಡಾ. ಜಿ.ಬಿ. ರೆಡ್ಡಿ ದೀಪ ಪ್ರಜ್ವಲನೆ ಮಾಡುವರು. ಎಸ್‌ಡಿಎಮ್…

Read More

ತಣ್ಣೀರುಬಾವಿ ಬಳಿ ದರೋಡೆ ಪ್ರಕರಣ: ರೌಡಿಶೀಟರ್ ಚಂದು ಹಾರೀಸ್ ಬಂಧನ – ವಸ್ತುಗಳ ವಶಪಡಿಕೆ

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು…

Read More

ಕಾವೂರಿನಲ್ಲಿ ‘ರಂಗೋತ್ಸವ 2026’ ಸಮಾರೋಪ – ಭವಾನಿ ಶಿಕ್ಷಕಿಗೆ ಪ್ರಶಸ್ತಿ, ಮಕ್ಕಳಿಗೆ ಕಲಾ ಪ್ರೇರಣೆ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026′ 4ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮರಕಡ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ಓಷಿಯನ್ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಇನಾಯತ್ ಅಲಿ ರಂಗೋತ್ಸವ 2026′ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿದರು‌. ಬಳಿಕ ಮಾತನಾಡಿದ ಅವರು ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಇಂತಹ ರಂಗ ತರಬೇತಿ ಮತ್ತು ಕಲೆಗಳ ಮೂಲಕ ಸಂಸ್ಕಾರ…

Read More

ಕಾರ್ಕಳ : ಏ.24-25–26ರಂದು ಬೃಹತ್ ಹಲಸು ಮೇಳ : 70ಕ್ಕೂ ಹೆಚ್ಚು ಪ್ರದರ್ಶನ, ವಿವಿಧ ಸ್ಪರ್ಧೆಗಳು

ಕಾರ್ಕಳ : ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳು ಜನರನ್ನು ಆಕರ್ಷಿಸಲಿವೆ. ರೋಟರಿ ಕ್ಲಬ್‌ನ ನವೀನ್ ಮಾತನಾಡಿ, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ…

Read More

ಮಹಿಳಾ ಮೀಸಲಾತಿ ಮಸೂದೆ: ರಾಜಕೀಯ ಆರೋಪ–ಪ್ರತಾರೋಪಗಳ ಮಧ್ಯೆ ಮುಂದುವರಿದ ಚರ್ಚೆ

ಈಗಾಗಲೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿಯ ಮಸೂದೆ ಅಂಗೀಕಾರವಾಗಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ನೀಡುವ ಮಸೂದೆ ಡಾಕ್ಟರ್ ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ 2010ರಲ್ಲಿ ಮಂಡನೆಯಾಗಿತ್ತು ಆಗ ರಾಜ್ಯಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಿತು ಲೋಕಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಲಿಲ್ಲ. 2023ರ ಸೆಪ್ಟೆಂಬರ್ 19ರಂದು ಮತ್ತೊಮ್ಮೆ ಈ ಮಸೂದೆ ಮಂಡನೆ ಆಯಿತು ,ಅಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಯಾಗಿ ಸೆಪ್ಟೆಂಬರ್ 20ರಂದು ಎಲ್ಲ ಪಕ್ಷದವರು ಸೇರಿ ಸರ್ವಾನುಮತದಿಂದ…

Read More
error: Content is protected !!