“ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ — ಜನರ ಹಕ್ಕುಗಳ ಮೇಲಿನ ದಾಳಿ”- ರಾಮಣ್ಣ ವಿಟ್ಲ

ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್‌ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ ಜನರ ಹಕ್ಕುಗಳ ಮೇಲೆ ದಾಳಿ ಯಾಗಿದೆ ಎಂದು ಆರೋಪಿಸಿದರು. ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇ…

Read More

ಮಂಗಳೂರು: ಬೆಂಗಳೂರಿನಲ್ಲಿ ‘ಕರಾವಳಿ ಜಾನಪದ ವೈಭವ’ ಏ.24ರಿಂದ

ಮಂಗಳೂರು: ಕರಾವಳಿ ಪ್ರದೇಶದ ಕಲಾ ಜಗತ್ತಿನ ಸಾಕ್ಷಾತ್ಕಾರ ಮಾಡುವ ಉದ್ದೇಶದಿಂದ ವೈಟ್ ಲೊಟಸ್ ಪೌಂಡೇಶನ್ ಟ್ರಸ್ಟ್ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ತಾಲೂಕು ಘಟಕದ ಸಹಯೋಗದೊಂದಿಗೆ ಏಪ್ರಿಲ್ 24 ರಿಂದ 26 ರವರೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮೈದಾನ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಮಂಗಳೂರು: ಏ.19ರಂದು ಇಸ್ಕಾನ್ ವತಿಯಿಂದ ರಥಯಾತ್ರೆ, ಅಕ್ಷಯ ತೃತೀಯ ಮಹೋತ್ಸವ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಏಪ್ರಿಲ್ 19ರಂದು ರಥಯಾತ್ರೆ ಹಾಗೂ ಅಕ್ಷಯ ತೃತೀಯ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಾಕಾರ ರಾಮದಾಸ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಯಾತ್ರೆ ಮತ್ತು ಅಕ್ಷಯ ತೃತೀಯ ಎರಡೂ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನಗಳಾಗಿದ್ದು, ಈ ದಿನಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಮತ್ತು ಹೊಸ ಆರಂಭಗಳು ಅತ್ಯಂತ ಫಲಪ್ರದವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಕಾರ್ಯಕ್ರಮವು…

Read More

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ-2: ಕಾಂಗ್ರೆಸ್ ವಿರುದ್ಧ ಕಾಮತ್ ವಾಗ್ದಾಳಿ

“ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳುವ ಕಾಂಗ್ರೆಸ್ ನಾಯಕರು, ಮೊದಲು ತಾವೇ ಅದನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದ ಅನುದಾನಗಳು ಹಾಗೂ ಇಂದಿನ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ ಬಂದ ಅನುದಾನಗಳ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಇದರಿಂದ ಯಾರು ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ…

Read More

ಮಂಗಳೂರು: ‘ಬುರುಡೆ ಗ್ಯಾಂಗ್’ ಪ್ರಹಸನ ವಿಚಾರ—ಕಲಾವಿದರ ವಿರುದ್ಧ ನಿಂದನೆ; ಕ್ರಮಕ್ಕೆ ಆಗ್ರಹ

ಮಂಗಳೂರು: ಸ್ಥಳೀಯ ವಾಹಿನಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಕಲಾವಿದರಿಗೆ ಅವಾಚ್ಯವಾಗಿ ನಿಂದನೆ ಮಾಡಿದ ಪ್ರಕರಣದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯಕ್ಷಗಾನ ಕಲಾವಿದರು ಒತ್ತಾಯಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ದೂರವಾಣಿ ಮೂಲಕ ಅವಾಚ್ಯವಾಗಿ ನಿಂದಿಸಿರುವುದಾಗಿ ಆರೋಪಿಸಿದರು. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಮಹಿಳಾ ಠಾಣೆಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಸಂಬಂಧಪಟ್ಟವರ…

Read More

ಮಂಗಳೂರು: ನಿರ್ಮಾಣ ಕ್ಷೇತ್ರಕ್ಕೆ ಕಚ್ಚಾ ವಸ್ತು, ಕಾರ್ಮಿಕರ ಕೊರತೆ—ಸಂಘಗಳ ಆತಂಕ

ಮಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದು, ಅಗತ್ಯ ಕಚ್ಚಾ ವಸ್ತುಗಳ ಕೊರತೆ ಹಾಗೂ ಕುಶಲಕರ್ಮಿ ಕಾರ್ಮಿಕರ ಅಭಾವವನ್ನು ತಕ್ಷಣ ಪರಿಹರಿಸಲು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್, ಇಂಜಿನಿಯರ್ಸ್ ಅಸೋಸಿಯೇಷನ್ ಹಾಗೂ ಕೆನರಾ ಬಿಲ್ಡರ್ಸ್ ಅಸೋಸಿಯೇಷನ್ ಜಂಟಿಯಾಗಿ ಆಗ್ರಹಿಸಿವೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಅಧ್ಯಕ್ಷ ಮಹಾಬಲ ಶೆಟ್ಟಿ, ಕೆಂಪುಕಲ್ಲು, ಮರಳು ಹಾಗೂ ಎಂ-ಸ್ಯಾಂಡ್ ಕೊರತೆಯಿಂದ ಕಳೆದ ಕೆಲವು…

Read More

ಸುಲ್ತಾನ್ ಬತ್ತೇರಿ: ಆಟೋರಿಕ್ಷಾ ನಿಲ್ದಾಣಕ್ಕೆ ಕುಡಿಯುವ ನೀರಿನ ಸೌಲಭ್ಯ

ಪಲ್ಗುಣಿ ನದಿ ತೀರದಲ್ಲಿರುವ ಇತಿಹಾಸ ಪ್ರಸಿದ್ಧ ಸುಲ್ತಾನ್ ಬತ್ತೇರಿ ಪ್ರದೇಶದ ಆಟೋರಿಕ್ಷಾ ನಿಲ್ದಾಣಕ್ಕೆ ನೇತ್ರಾವತಿ ಲೈನ್ಸ್ ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು, ಈ ಸೇವೆಯ ಮೂಲಕ ನದಿ ತೀರದಲ್ಲಿಯೂ ನೇತ್ರಾವತಿ ಮತ್ತು ಪಲ್ಗುಣಿಯ ಸಂಗಮದ ಸಾಂಕೇತಿಕ ಅರ್ಥವನ್ನು ನೆನಪಿಸಲಾಗಿದೆ ಎಂದು ಅಭಿಪ್ರಾಯಪಟ್ಟರು. ರಿಕ್ಷಾ ಚಾಲಕರು ಸಮಾಜಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಅವರು ಹೇಳಿದರು. ನೇತ್ರಾವತಿ ಕ್ಲಬ್ ಅಧ್ಯಕ್ಷ ವಿನಯ ಶೆಟ್ಟಿ ಪ್ರಾಸ್ತಾವಿಕವಾಗಿ…

Read More

ಮಂಗಳೂರು: ಏ.18–19ರಂದು ಬಜರಂಗದಳ ಪ್ರಾಂತ ಸಂಯೋಜಕ ಸಮಾವೇಶ

ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಇದರ ವತಿಯಿಂದ ಏ.18, 19ಕ್ಕೆ ಮಂಗಳೂರಿನ ಮಣ್ಣಗುಡ್ಡೆಯ ಪ್ರತಾಪನಗರದಲ್ಲಿರುವ ಸಂಘನಿಕೇತನದಲ್ಲಿ ಬಜರಂಗದಳ ಪ್ರಾಂತ ಸಂಯೋಜಕ ಸಮಾವೇಶ ಆಯೋಜಿಸಲಾಗಿದೆ ಎಂದು ಬಜರಂಗದಳ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ತಿಳಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18ಕ್ಕೆ ಬೆಳಗ್ಗೆ 9 ಗಂಟೆಗೆ ಸಮಾವೇಶಕ್ಕೆ ಚಾಲನೆ ದೊರೆಯಲಿದೆ. ವಿಹಿಂಪ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, ಜಂಟಿ ಪ್ರಧಾನ ಕಾರ್ಯದರ್ಶಿ ಸ್ಥಾಣು ಮಾಲಯನ್, ಬಜರಂಗದಳ ರಾಷ್ಟ್ರೀಯ ಸಂಯೋಜಕ್ ಕಿಶನ್…

Read More

ಕಾಪು: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ. ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಪಾಂಗಾಳ ಕಟ್ಟಿಕೆರೆಗೆ ಸಮೀಪಿಸುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾಪು ಪೋಲಿಸ್ ಭೇಟಿ ನೀಡಿದ್ದಾರೆ.

Read More

ಮಂಗಳೂರು: ಎಮ್ಮೆಮಾಡು ಮಕಾಮ್ ಶರೀಫ್ ಉರೂಸ್ ಏಪ್ರಿಲ್ 17ರಿಂದ ಭವ್ಯವಾಗಿ

ಕೊಡಗು ಜಿಲ್ಲೆಯ ಇತಿಹಾಸ ಪ್ರಸಿದ್ದ ಎಮ್ಮೆಮಾಡು ಮಕಾಮ್ ಶರೀಫ್‌ನಲ್ಲಿ ಹಜ್ರತ್ ಸೂಫಿ ಶಹೀದ್ (ರ) ಮತ್ತು ಸಯ್ಯದ್ ಹಸನ್ ಸಖಾಫ್ ಅಲ್ ಹದ್ಯಾದಿ (ರ) ಹಾಗೂ ಇತರ ಔಲಿಯಾಗಳ ಹೆಸರಿನಲ್ಲಿ ನಡೆಯುವ ಉರೂಸ್ ಮುಬಾರಕ್ ಈ ವರ್ಷ ಏಪ್ರಿಲ್ 17 ರಿಂದ ಏಪ್ರಿಲ್ 24 ರವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ ಎಂದು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎಂ. ಹುಸೈನ್ ಸಖಾಫಿ ಅವರು ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏಪ್ರಿಲ್ 17 ರಂದು…

Read More
error: Content is protected !!