ಮತದಾರರ ಪಟ್ಟಿ ಪರಿಷ್ಕರಣೆ ಅವ್ಯವಸ್ಥೆ ಆರೋಪ: ಐವನ್ ಡಿ’ಸೋಜಾ ನೇತೃತ್ವದಲ್ಲಿ ಡಿಸಿಗೆ ಮನವಿ
ಮಂಗಳೂರು, ಜು. 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎನ್ಯುಮರೇಷನ್ ಪ್ರಕ್ರಿಯೆಯಲ್ಲಿ ಅಕ್ರಮಗಳು ಮತ್ತು ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಶುಕ್ರವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ, ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಕಾಂಗ್ರೆಸ್ ಪಕ್ಷವು 1,750ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರನ್ನು…
