ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ದುರಂತ ಅಂತ್ಯ .. !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ…

Read More

ರಾಜಕೀಯ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ , ಸೈನಿಕರಿಗೆ ಏಕೆ ಇಲ್ಲ… ? ,ಮಾಜಿ ಸೈನಿಕರಾದ ಸೆಬಾಸ್ಟೀನ್ ಪ್ರಶ್ನೆ .. ?

ಮಂಗಳೂರು: ನಮ್ಮ ಹೆಚ್ಚಿನ ಯವ್ವನವನ್ನು ಗಡಿಯಲ್ಲೇ ಕಳೆಯುತ್ತೇವೆ ಅಲ್ಲಿಂದ ನಿವೃತ್ತಿ ಪಡೆದು ಇಲ್ಲಿಗೆ ಬರುವಾಗ ಯಾವುದೇ ರೀತಿಯ ಮರ್ಯಾದೆ ಸಿಗುವುದಿಲ್ಲ . ಇದು ತುಂಬಾನೇ ನೋವು ಉಂಟು ಮಾಡುತ್ತದೆ . ಸರಕಾರವು ಯಾವುದೇ ಸವಲತ್ತನ್ನು ನೀಡುವುದಿಲ್ಲ ಎಂದುಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲ್ಲೂಕು ಘಟಕದ ಅಧ್ಯಕ್ಷರು ,ಮಾಜಿ ಸೈನಿಕರಾದ ಸೆಬಾಸ್ಟೀನ್ ತಮ್ಮ ಅಳಲನ್ನು ತೋಡಿಕೊಂಡರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂವಿಧಾನ ಹೇಳುತ್ತದೆ ಸೈನಿಕರಿಗೆ ಗೌರವ, ಅನುಕೂಲವನ್ನು ನೀಡಬೇಕೆಂದು…

Read More

ಡಿ 13 ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಆಚರಣೆ

ಮಂಗಳೂರು:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಜಂಟಿ ಆಚರಣೆಯು ಡಿ 13 ರಂದು ಬೆಳಿಗ್ಗೆ ೯.೩೦ ರಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ಬಿರ್ವಾ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು , ಮಾಜಿ ಸೈನಿಕರಾದ ನೋಬರ್ಟ್ ರೋಡಿಗ್ರಾಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಸಭೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷರಾದ ಡಾ|…

Read More

ಡಿ.13 ರಂದು : ಜಿಎಸ್‌ಬಿ ಸೇವಾ ಸಂಘದ ” ವಾಗ್ದೇವಿ ಟವರ್ಸ್‌ ಕಟ್ಟಡದ ಶಿಲಾನ್ಯಾಸ

ಮಂಗಳೂರು :ನಗರದ ಕದ್ರಿ ಪರಿಸರದಲ್ಲಿ ಸುಮಾರು 60000 ಚದರ ಅಡಿಗಳ “ವಾಗ್ವೇವಿ ಟವರ್ಸ” ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿ 13 ರಂದು ಬೆಳಿಗ್ಗೆ 8:31ಕ್ಕೆ ಉದ್ಯಮಿ ಡಾ.ಪಿ.ದಯಾನಂದ ಪೈ ಯವರು ಈ ಹೊಸ ಯೋಜನೆಯ ಶಿಲಾನ್ಯಾಸ ಮಾಡಲಿದ್ದಾರೆ ಎಂದು ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ ಅಧ್ಯಕ್ಷರಾದ ಡಾ.ಕಸ್ತೂರಿ ಮೋಹನ್ ಪೈ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 60000 ಚದರ ಅಡಿಗಳ ‘ವಾಗ್ದೇವಿ ಟವರ್ಸ್’ ಕಟ್ಟಡದ ಶಿಲಾನ್ಯಾಸ…

Read More

ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ಚತುರ್ಥ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 07-12-2025ನೇ ಅದಿತ್ಯವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು. ಅಂದು ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ ಹಾಗೂ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭಜನೆ ಹಾಗೂ ಹರಿನಾಮ…

Read More

ಡಿಸೆಂಬರ್ 13 ಮತ್ತು 14 ರಂದು ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025”

ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025” ಆಚರಣೆಯನ್ನು ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್ನಲ್ಲಿ, ಮಧ್ಯಾಹ್ನ 2:30ರಿಂದ ರಾತ್ರಿ 9:30ರ ತನಕ ನಡೆಯಲಿದೆ ಎಂದು ವಿಚಾರ ವೇದಿಕೆಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸರ್ವ ಧರ್ಮದ ಹಬ್ಬಗಳು…

Read More

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್

ಬೆಳಗಾವಿ ಸುವರ್ಣ ವಿಧಾನಸೌಧ ಡಿ.09. : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು.ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ…

Read More

ಗೋಹತ್ಯೆ ನಿಷೇಧ ಕಾನೂನು ದುರ್ಬಲಗೊಳಿಸಲು ಕಾಂಗ್ರೆಸ್ ಸರಕಾರ ಯತ್ನ- ವಿಶ್ವ ಹಿಂದೂ ಪರಿಷತ್ ಆರೋಪ

ಉಡುಪಿ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲಗೊಳಿಸಲು ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಉಡುಪಿ ಜಟ್ಕಾ ಬಸ್ ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು‌ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿದರು. ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ದಿಕ್ಕಾರ ಕೂಗಿದರು. ವಿಎಚ್ ಪಿ ಕರ್ನಾಟಕ ದಕ್ಷಿಣ…

Read More

“ವಾದಿರಾಜ ವಾಲಗ ಮಂಡಳಿ” ಸಿನಿಮಾ ಮೇ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ – ನಿರ್ಮಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ:ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಿಸಲಾಗುತ್ತಿರುವ ವಾದಿರಾಜ ವಾಲಗ ಮಂಡಳಿ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಪ್ರೊಡಕ್ಷನ್‌ನ ಅಧ್ಯಕ್ಷ, ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಬ್ರಹ್ಮಾವರ ತೆಂಕುಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300 ವರ್ಷಗಳ ಇತಿಹಾಸವುಳ್ಳ ಬ್ರಹ್ಮಾವರ ತೆಂಕುಮನೆಯಲ್ಲಿ ಮುಂದಿನ 15 ದಿನಗಳ ಚಿತ್ರೀಕರಣ ನಡೆಯಲಿದ್ದು, ಆ ಬಳಿಕ ಮಂಗಳೂರು ಅದ್ಯಪಾಡಿ, ಮಂಜೇಶ್ವರದಲ್ಲಿ ಚಿತ್ರೀಕರಿಸಲಾಗುತ್ತದೆ. 50 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿ ಮೇ ನಲ್ಲಿ ತೆರೆ…

Read More

ಡಿ.12ಕ್ಕೆ ತೆರೆ ಮೇಲೆ ಘರ್ಜಿಸಲು ಬರುತ್ತಿದೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ… !

ಮಂಗಳೂರು:ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು ಪ್ರೇಕ್ಷಕರು…

Read More
error: Content is protected !!