ಕರಂಗಲ್ಪಾಡಿಯ ಕಾರ್ಣಿಕದ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದಲ್ಲಿ ಏಪ್ರಿಲ್.4ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

ಮಂಗಳೂರು: ನಗರದ ಕರಂಗಲ್ಪಾಡಿಯ ಕಾರ್ಣಿಕದ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಏಪ್ರಿಲ್ 4 ಶನಿವಾರ ರಾತ್ರಿ ೮. ೩೦ ರಿಂದ ನಡೆಯಲಿದೆ ಎಂದು ಕರಂಗಲ್ಪಾಡಿಯ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸಾನಿಧ್ಯದ ಪ್ರಧಾನ ಅರ್ಚಕರಾದ ಸುದನ್ ವಿದ್ಯಾನಗರ ಪಂಜಿಮುಗೇರು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಅಕ್ರಮ ಜಾನುವಾರು ಸಾಗಾಟ ಪತ್ತೆ: 19 ಜಾನುವಾರುಗಳು ವಶ, ಓರ್ವ ಬಂಧನ

ಕಡಬ : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ, ಅಮಾನುಷವಾಗಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯನ್ನು ಸಬ್‌ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ…

Read More

ಕೊಳ್ನಾಡು ಆರೋಗ್ಯ ಸೇವೆಗೆ ಹೊಸ ಚೈತನ್ಯ: ಕುಡ್ತಮುಗೇರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ₹30 ಲಕ್ಷ ಅನುದಾನ ಮಂಜೂರು

ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಪ್ರಾಥಮಿಕ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಎಂ.ಆರ್.ಪಿ.ಎಲ್ CSR ನಿಧಿಯಿಂದ ₹30 ಲಕ್ಷ ಅನುದಾನ ಮಂಜೂರಾಗಿದೆ. ವಿಧಾನಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ ಅವರ ಶಿಪಾರಸ್ಸಿನ ಮೇರೆಗೆ ಈ ಅನುದಾನ ಬಿಡುಗಡೆಯಾಗಿದ್ದು, ಸ್ಥಳೀಯ ಜನರಲ್ಲಿ ಅಪಾರ ಸಂತೋಷ ಮೂಡಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಕಟ್ಟಡದ ಕೊರತೆಯಿಂದ ಬಳಲುತ್ತಿದ್ದ ಆರೋಗ್ಯ ಕೇಂದ್ರಕ್ಕೆ ಹೊಸ ಜೀವ ಬಂದಿದೆ. ಈ ಕೇಂದ್ರದ ಸ್ಥಾಪನೆಗಾಗಿ ಹಿಂದಿನಿಂದಲೂ ಶ್ರಮಿಸುತ್ತಿದ್ದ ಕೊಳ್ನಾಡು ಗ್ರಾಮ ಪಂಚಾಯತ್…

Read More

ಜನವಿರೋಧಿ ನೀತಿಗೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೈಂದೂರು, ಏಪ್ರಿಲ್ 3: ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ Bharatiya Janata Party (ಬಿಜೆಪಿ) ಕಾರ್ಯಕರ್ತರು ಗುರುವಾರ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರವು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಡೆದ ಪ್ರತಿಭಟನೆಯನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ನೇತೃತ್ವ ವಹಿಸಿದ್ದರು. ಈ ವೇಳೆ ಪಿಡಿಒ ಮೂಲಕ…

Read More

ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು. ಗ್ರಾಮ ಪಂಚಾಯತ್‍ಗಳÀ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು….

Read More

ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಂದ ಭವ್ಯ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ ಯಶಸ್ವಿ

ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ ಪುಸ್ತಕಗಳು ಕರ್ನಾಟಕದ ಸಾಮರಸ್ಯ ಸಂಸ್ಕೃತಿ, ಬಹುಮುಖ ಪರಂಪರೆ ಹಾಗೂ ವೈವಿಧ್ಯತೆಯೊಳಗಿನ ಏಕತೆಯನ್ನು ಪ್ರತಿಬಿಂಬಿಸುವ ಅಮೂಲ್ಯ ಕೃತಿಗಳಾಗಿವೆ. ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಡಾ‌. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಯಶಸ್ವಿಯಾಗಿ…

Read More

ಮಂಗಳೂರಿನಲ್ಲಿ CITU ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ನಾಳೆ ಚಾಲನೆ

ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ CITUನ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ನಾಳೆಯಿಂದ ಮೂರು ದಿನಗಳ ಕಾಲ ಮಂಗಳೂರಿನ ಸಂದೇಶ ಸಂಸ್ಥೆಯಲ್ಲಿ ಜರುಗಲಿದ್ದು,ಈ ಹಿನ್ನೆಲೆಯಲ್ಲಿ CITUನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು CITU ಪ್ರಕಟಣೆಯೊಂದರಲ್ಲಿ ತಿಳಿಸಿದೆ. CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್,ರಾಷ್ಟ್ರೀಯ ಉಪಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ಎಸ್ ವರಲಕ್ಷ್ಮಿ,ರಾಜ್ಯದ ಕಾರ್ಮಿಕ ಚಳುವಳಿಯ ಹಿರಿಯ ನಾಯಕರಾದ ವಿಜೆಕೆ ನಾಯರ್, ರಾಜ್ಯದ ನಾಯಕರಾದ ಕೆ ಮಹಾಂತೇಶ್,ಸೈಯ್ಯದ್ ಮುಜೀಬ್,ಪ್ರತಾಪ್…

Read More

ಮಂಗಳೂರು: ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ – ಪೊಲೀಸ್ ಸಿಬ್ಬಂದಿಗೆ ಕರ್ತವ್ಯನಿಷ್ಠೆಗೆ ಕರೆ

ಮಂಗಳೂರು: ಮಂಗಳೂರು ನಗರ ಪೊಲೀಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಹಾಗೂ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್ ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ Sudheer Kumar Reddy ಅವರು, ಪೊಲೀಸ್ ಸಿಬ್ಬಂದಿ ಸಮಾಜದಲ್ಲಿ ಅನುಕರಣೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು. ಘಟನೆಗಳು ಸಂಭವಿಸಿದಲ್ಲಿ ಅವುಗಳನ್ನು ಸಮರ್ಥವಾಗಿ…

Read More

ಬಂಟ್ವಾಳದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ, ತಜ್ಞರಿಂದ ತರಬೇತಿ ಕಾರ್ಯಾಗಾರ

ಬಂಟ್ವಾಳ: ವಿಕಾಸಂ ಸೇವಾ ಫೌಂಡೇಶನ್ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದಲ್ಲಿ ಗುರುವಾರ ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚಣೆ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಸಿವಿಲ್ ಕಾಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷರಾದ ಮಹಾಬಲ ಕೊಟ್ಟಾರಿ ಉದ್ಘಾಟಿಸಿ ಮಾತನಾಡಿ, ಆಟಿಸಂ ಕುರಿತು ವಿಕಾಸಂ ಸಂಸ್ಥೆ ತೋರುತ್ತಿರುವ ಕಾಳಜಿಯನ್ನು ಶ್ಲಾಘಿಸಿದರು. ಬಂಟ್ವಾಳ ಸಿಡಿಪಿಒ ಮಮ್ತಾಜ್ ಮಾತನಾಡಿ, ಬೆಳೆಯುವ ಹಂತದಲ್ಲೇ ಆಟಿಸಂ ಗುರುತಿಸುವಿಕೆ ಅಗತ್ಯವಾಗಿದ್ದು, ಇದು ಮುಂದಕ್ಕೂ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ…

Read More

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ – ಪತ್ನಿ ಸೌಮ್ಯ ಶೆಟ್ಟಿ ಸ್ಪಷ್ಟನೆ

ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಈ ನಡುವೆ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಹಾಜರಾಗಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ಶೆಟ್ಟಿ, ಸುದೀಪ್ ರೈ ಅವರ ತಂದೆ ಹಾಗೂ ವೇಣುಗೋಪಾಲ ಶೆಟ್ಟಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದರು. “ನನ್ನ…

Read More
error: Content is protected !!