ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….
