ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ (ಮೇ-26): ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ…

Read More

ಹುತಾತ್ಮರ ದಿನಾಚರಣೆ: ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ, ಯುವಜನರಲ್ಲಿ ದೇಶಭಕ್ತಿ ಜಾಗೃತಿ

ಪುತ್ತೂರು/ಮಂಗಳೂರು, ಮಾರ್ಚ್ 23, 2026: ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಥಾಪರ್ ಅವರ ತ್ಯಾಗವನ್ನು ಸ್ಮರಿಸುವ ಹುತಾತ್ಮರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪಾದಯಾತ್ರೆ ನಡೆಯಿತು. ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (ಮೈ ಭಾರತ್), ದಕ್ಷಿಣ ಕನ್ನಡ, ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ 250ಕ್ಕೂ…

Read More

ವಿಟ್ಲ ಸಮೀಪ ಭೀಕರ ಅಪಘಾತ: ಬೈಕ್ ಸವಾರರು ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ–ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ವೀರಕಂಬ ಮೂಲದವರಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿಟ್ಲದ…

Read More

ಮಸೀದಿ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ಬಂಟ್ವಾಳದಲ್ಲಿ ಕೌಂಟರ್ ಪ್ರಕರಣ ದಾಖಲು

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳೂ ಪರಸ್ಪರ ದೂರು ನೀಡಿದ್ದು, ಕೌಂಟರ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ನಡು ಗ್ರಾಮದ ತಲೆಮೊಗರು ಮಸೀದಿ ಸಮೀಪ ಈ ಗಲಾಟೆ ನಡೆದಿದ್ದು, ಒಟ್ಟು 17 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ ದಾವೂದ್ ಅವರ ತಂಡ ಬಂದು ಹಲ್ಲೆ ನಡೆಸಿದೆ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ ಪತ್ರಿಕೆ ಬಿಡುಗಡೆ

ಮಂಗಳೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ದೇವಸ್ಥಾನದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಶಾಸಕ Vedavyas Kamath ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಯ್ಯಪ್ಪ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದು ಪುಣ್ಯದ ಫಲವಾಗಿದ್ದು, ಇಂತಹ ದೇವತಾ ಕಾರ್ಯಗಳು ಊರಿನ ಉನ್ನತಿಗೆ ಕಾರಣವಾಗುತ್ತವೆ ಎಂದರು. ಬ್ರಹ್ಮಕಲಶ ನಡೆಯುವ ಊರಿಗೆ ಸಂಕಷ್ಟಗಳು ದೂರವಾಗುತ್ತವೆ ಎಂದು…

Read More

ಇಂಧನ ಕೊರತೆ ಬಗ್ಗೆ ಗೊಂದಲ ಬೇಡ: ಕೇಂದ್ರದ ಕ್ರಮಗಳಿಂದ ಸ್ಥಿತಿ ನಿಯಂತ್ರಣದಲ್ಲಿ – ಸಂಜೀವ ಮಠಂದೂರು

ಪುತ್ತೂರು: ಪ್ರಸ್ತುತ ಇರಾನ್, ಅಮೇರಿಕಾ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಮಟ್ಟದಲ್ಲಿ ಇಂಧನ, ತೈಲ ಮತ್ತು ನೈಸರ್ಗಿಕ ಅನಿಲದ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲೂ, ಭಾರತದಲ್ಲಿ ಅಡುಗೆ ಅನಿಲ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೇಶದ ಪ್ರಧಾನಿ Narendra Modi ಹಾಗೂ ಕೇಂದ್ರ ಇಂಧನ ಸಚಿವ Hardeep Singh Puri ಅವರ ಸೂಕ್ತ ಯೋಜನೆ ಮತ್ತು ವ್ಯವಸ್ಥಿತ ನಿರ್ವಹಣೆಯಿಂದ ದೇಶದ ಜನರಿಗೆ…

Read More

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿ ಖಂಡಿಸಿ ಹಾಗೂ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನೆ

ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿಗಳನ್ನು ಖಂಡಿಸಿ, ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಗೊಳ್ಳಬೇಕೆಂದು ಒತ್ತಾಯಿಸಿ ಇಂದು ಮಂಗಳೂರು ನಗರದ ಹೃದಯ ಭಾಗದಲ್ಲಿ CITU, DYFI, JMS,DHS,ಆದಿವಾಸಿ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದದಾಹದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಗತ್ತಿನೆಲ್ಲೆಡೆ ಶಾಂತಿ ನೆಲೆಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಅಮೇರಿಕನ್ ಸಾಮ್ರಾಜ್ಯಶಾಹಿ ಇಡೀ ಜಗತ್ತನ್ನು ತನ್ನ‌ ನಿಯಂತ್ರಣದಲ್ಲಿಡಲು ಹರಸಾಹಸ ಪಡುತ್ತಿದೆ.ಜಗತ್ತಿನ 80…

Read More

ಅಳಪೆ ದಕ್ಷಿಣ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಕುಂದರ್ ಕುಟುಂಬ ದೈವಸ್ಥಾನ ಚಾವಡಿ ಸಮಿತಿ ವತಿಯಿಂದ ಅಳಪೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪಡೀಲಿನ ಕುಂದರ್ ಕುಟುಂಬದ ದೈವಸ್ಥಾನಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಬಹಳ ಕಿರಿದಾಗಿದ್ದು, ಅಭಿವೃದ್ಧಿ ಕಾಮಗಾರಿಯ ಅಗತ್ಯತೆ ಬಹಳ ದಿನಗಳಿಂದ ಇದ್ದುದಾಗಿ ಹೇಳಿದರು. ಇಂದು ಶಿಲಾನ್ಯಾಸಗೊಂಡಿರುವ ಈ ಕಾಮಗಾರಿ ಶೀಘ್ರದಲ್ಲೇ…

Read More

ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಯುವಕನ ಬಂಧನ

ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಹಮ್ಮದ್ ಝಾಕೀರ್, ಬಂಧಿತ ಯುವಕ. ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರು ಫೀಜಾ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಮೊಹಮ್ಮದ್ ಝಾಕೀರ್ ಎಂಬಾತನು ಎಮ್.ಡಿ.ಎಮ್.ಎ ಮಾದಕವಸ್ತುವನ್ನು ತಂದು ತನ್ನ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ…

Read More

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿ ಬಂಧನ

ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೈದರ್ @ ಹೈದರ್ ಆಲಿ, ಮೊಹಮ್ಮದ್ ಸಜಾದ್, ಜೈಸನ್ ಮೆನೆಜಸ್ ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ 2,50,000ಮೌಲ್ಯದ 26 ಗ್ರಾಂ…

Read More
error: Content is protected !!