ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವರು
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ ಬಳಸದೆ,…
