ರಾಮಕೃಷ್ಣ ಮಿಷನ್‌ನಿಂದ ಧಾರ್ಮಿಕ ವಸ್ತುಗಳ ಗೌರವಯುತ ವಿಲೇವಾರಿಗೆ ‘ವಿಸರ್ಜನೆ’ ಅಭಿಯಾನಕ್ಕೆ ಚಾಲನೆ

ಮಂಗಳೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿರುವ ರಾಮಕೃಷ್ಣ ಮಿಷನ್ ‘ಸ್ವಚ್ಛ ಮಂಗಳೂರು’ ಅಭಿಯಾನದ ಅಡಿಯಲ್ಲಿ ಧಾರ್ಮಿಕ ತ್ಯಾಜ್ಯಗಳ ಸಮರ್ಪಕ ಹಾಗೂ ಗೌರವಯುತ ವಿಲೇವಾರಿಗಾಗಿ ‘ವಿಸರ್ಜನೆ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ಅಭಿಯಾನವು ಮಾರ್ಚ್ 16 ರಿಂದ 26 ರವರೆಗೆ ಮಂಗಳೂರಿನ ಆಯ್ದ ಆರು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ತಿಳಿಸಿದರು . ನಗರದ ರಾಮಕೃಷ್ಣ ಮಠದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ‘ವಿಸರ್ಜನೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು, ನಮ್ಮ ಜೀವನ ಶೈಲಿಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ವಿವರಿಸಿ, ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಇವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯವನ್ನು ಕಾಪಾಡಲು ಬಹಳ ಸಹಾಯಕವಾಗುತ್ತವೆ ಎಂದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಒಕ್ಕೂಟದ…

Read More

ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯಕ್ಷ ಶಿಕ್ಷಣ ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು…

Read More

ಜ್ಞಾನದ ಕೇಂದ್ರ ಪಸರಿಸುತ್ತಿದೆ ಇತಿಹಾಸದ ಹೊಂಗಿರಣ ….. !

ಮಂಗಳೂರು : ಮಂಗಳೂರು ಸಮೀಪದ ಮುಡಿಪು ಗುಡ್ಡದ ಮೇಲಿರುವ ಶ್ರೀಕೃಷ್ಣ ಧ್ಯಾನ ಕೇಂದ್ರವು ಇಂದು ಧ್ಯಾನ, ಆಧ್ಯಾತ್ಮಿಕತೆ ಮತ್ತು ಇತಿಹಾಸವನ್ನು ಒಂದೇ ಸ್ಥಳದಲ್ಲಿ ಪರಿಚಯಿಸುವ ವಿಶಿಷ್ಟ ತಾಣವಾಗಿ ಗುರುತಿಸಿಕೊಂಡಿದೆ. ಪ್ರಕೃತಿಯ ಸೊಬಗು ಮಧ್ಯೆ ನಿರ್ಮಾಣವಾಗಿರುವ ಈ ಭವ್ಯ ಧ್ಯಾನ ಮಂದಿರವು ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸಸ್ಯ ಸಿರಿರಾಶಿ ಪ್ರಕೃತಿಯ ನಡುವೆ ಎತ್ತರದ ಗುಡ್ಡದ ಮೇಲೆ ಭವ್ಯವಾಗಿ ವಿರಾಜಮಾನವಾಗಿರುವ ಶ್ರೀಕೃಷ್ಣ ಧ್ಯಾನ ಮಂದಿರವು ತನ್ನ ವಿಶಿಷ್ಟ ವಾಸ್ತುಶೈಲಿಯಿಂದಲೇ ಗಮನ ಸೆಳೆಯುತ್ತದೆ. ಪುರಿ ಜಗನ್ನಾಥ ಮಂದಿರವನ್ನು ಹೋಲುವ ಈ…

Read More

ಡಾ. ವಾಮನ್ ರಾವ್ ಬೇಕಲ್ ಅವರಿಗೆ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ’

ಕಾಸರಗೋಡು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ – 2025’ ಲಭಿಸಿದೆ. ಮೈಸೂರು ನಗರದ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗವು ಪ್ರತಿವರ್ಷ ನೀಡುವ ಈ ಪ್ರಶಸ್ತಿಗೆ, ಗಡಿನಾಡಿನಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೊಯ್ಸಳ…

Read More

ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ರಂಜಾನ್ ಹಾಗೂ ಯುಗಾದಿ ಹಬ್ಬ ಶಾಂತಿಯುತವಾಗಿ ಆಚರಿಸಲು ಕರೆ

ವಿಟ್ಲ: ಮುಖಂಡರ ಸಮ್ಮುಖದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮುಂಬರುವ ರಂಜಾನ್ ಹಾಗೂ ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ಸಮುದಾಯದ ನಾಯಕರು ಪರಸ್ಪರ ಸಹಕಾರದೊಂದಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಪೊಲೀಸ್ ಸಭ್ ಇನ್ಸ್ ಪೆಕ್ಟರ್ ರಾಮಕೃಷ್ಣ ಇಲಾಖೆಯ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದರು. ಸಭೆಯಲ್ಲಿ ಮಾತನಾಡಿದ ವಿಟ್ಲ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರು, ಹಬ್ಬದ ಸಂದರ್ಭದಲ್ಲಿ ಮಸೀದಿಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜಾಗರೂಕತೆ ವಹಿಸಬೇಕು…

Read More

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು. ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ ಕೈಗೊಂಡು, ಮಕ್ಕಳಿಗೆ ಮಕ್ಕಳ ಹಕ್ಕುಗಳ ಸಂಭಂಧಿತ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಜೆಜೆಬಿ ಬೋರ್ಡ್ ಮುಂದೆ ಸಾದರಪಡಿಸಲು ಫಾರಂ ನಂ: 1 ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಸಮಾಲೋಚನೆಗೆಕರೆದೊಯ್ದಾಗ ಫಾರಂ:17…

Read More

ಶಿರಾಡಿ ಘಾಟಿಯಲ್ಲಿ ಮಧ್ಯಾಹ್ನದ ಭೀಕರ ಅಪಘಾತ: ರಾಜಹಂಸ ಬಸ್ – ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ನೆಲ್ಯಾಡಿ:ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಸಕಲೇಶಪುರದ ಬಳಿ ನಡೆದ ಮದುವೆಯ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಸನದಿಂದ ಉಜಿರೆ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಬೆಂಗಳೂರಿನ ಮೂಲಕ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ ನಡುವೆ ಬರ್ಚಿನಹಳ್ಳಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಕಾರು…

Read More

ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ

ಉಡುಪಿ: ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕಾಪು ತಾಲೂಕಿನ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್, ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಸಂದೇಶ್ ಹಾಗೂ ಹಿರಿಯಡಕ ದರ್ಖಾಸು ಪಾಪುಜೆ ನಿವಾಸಿ ಸುಶಾಂತ್ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾರ್ಚ್ 12ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಜಬ್ಬಾರ್ ಹುಸೇನ್ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಂಗಳೂರು ನಗರದಲ್ಲಿ ಒಟ್ಟು…

Read More
error: Content is protected !!