ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿದ ಲಾರಿ – ಬೇಕರಿ, ಮೊಬೈಲ್ ಅಂಗಡಿಗೆ ಡಿಕ್ಕಿ

ಗುರುಪುರ: ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಘಟನೆ ಇಂದು ಸಂಭವಿಸಿದೆ. ಲಾರಿ ನಿಯಂತ್ರಣ ತಪ್ಪಿ ಜಂಕ್ಷನ್ ಬಳಿ ಇರುವ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಅಂಗಡಿಗಳ ಮುಂಭಾಗಕ್ಕೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಕರಿಸಿದರು.

Read More

ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ-8.69 ಕೋಟಿ ಮೌಲ್ಯದ ಆಸ್ತಿ ಪತ್ತೆ !

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ…

Read More

ಉಡುಪಿ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎನ್‌ಆರ್‌ಸಿ ಕೇಂದ್ರ ಇಲ್ಲದಿರುವುದು ಖೇಧಕರ- ಶಶಿಧರ್ ಕೋಸಂಬೆ

ಉಡುಪಿ: ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ(ಎನ್‌ಆರ್‌ಸಿ)ವೇ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು….

Read More

ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ ಗುರುವಾರ ಆಫ್-ಸೈಟ್ ತುರ್ತು ಅಣಕು ಡ್ರಿಲ್ ಅನ್ನು ನಡೆಸಿತು. ಕಾರ್ಖಾನೆಗಳ ಉಪನಿರ್ದೇಶಕ ಡಾ.ರಾಜೇಶ್ ಮಿಶ್ರಿಕೋಟಿ, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿಜಯ್, ಕಂದಾಯ ಇಲಾಖೆ, ಕರ್ನಾಟಕ ಅಗ್ನಿಶಾಮಕ…

Read More

ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ ಪೀಳಿಗೆಗಳು ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು….

Read More

ನಾಳೆ ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಜರಂಗಿ ಪ್ರವೇಶ….

ಕಟಪಾಡಿ, ಮಾ. 12: ಶ್ರೀ ಕ್ಷೇತ್ರ ಶಂಕರಪುರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ 19 ಅಡಿ ಎತ್ತರದ ಏಕಶಿಲಾ ಬಜರಂಗಿ ಮೂರ್ತಿಯ ಪ್ರವೇಶವು ಮಾ. 14ರಂದು ಭವ್ಯ ಮೆರವಣಿಗೆಯೊಂದಿಗೆ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ ಗುರೂಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 14ರಂದು ಸಂಜೆ 3.30ಕ್ಕೆ ಉಡುಪಿ ಜೋಡುಕಟ್ಟೆಯಿಂದ ವಾಹನಗಳ ಭವ್ಯ ಮೆರವಣಿಗೆಯೊಂದಿಗೆ ಬಜರಂಗಿ ಮೂರ್ತಿಯ ಪ್ರವೇಶ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಕಳೆದ 11 ವರ್ಷಗಳಿಂದ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಶ್ರೀ…

Read More

ದೇವಸ್ಥಾನದ ಪವಿತ್ರ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ – ವಿ.ಹಿಂ.ಪ. ಮಾತೃಶಕ್ತಿಯಿಂದ ಖಂಡನೆ

ಕಡಬ : ಪುತ್ತೂರಿನ ಐತಿಹಾಸಿಕ ಮತ್ತು ಭಕ್ತರ ಭಾವನೆಗಳಿಗೆ ಅತ್ಯಂತ ಪವಿತ್ರವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆಯಿರುವುದು ಅತ್ಯಂತ ಖಂಡನೀಯ ಘಟನೆ ಎಂದು ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಅವರು ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಸ್ಥಾನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಾಗಿರುವ ಪವಿತ್ರ ಸ್ಥಳಗಳಾಗಿವೆ. ಇಂತಹ ಪವಿತ್ರ ವೇದಿಕೆಗಳನ್ನು ರಾಜಕೀಯ ವೇದಿಕೆಯಾಗಿ ಬಳಸುವುದು ದೇವಾಲಯದ ಪರಂಪರೆ ಮತ್ತು ಭಕ್ತರ ಭಾವನೆಗಳಿಗೆ…

Read More

ಮಂಗಳೂರು–ಶಾರ್ಜಾ ದೈನಂದಿನ ವಿಮಾನ ಹಾರಾಟ ಪುನರಾರಂಭ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಮತ್ತೆ ದೈನಂದಿನ ವಿಮಾನ ಸೇವೆ ಆರಂಭವಾಗುತ್ತಿದೆ. ಮಾರ್ಚ್ 16 ರಿಂದ 28ರವರೆಗೆ ಮಂಗಳೂರು–ಶಾರ್ಜಾ ಮಾರ್ಗದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆ ದೈನಂದಿನ ವಿಮಾನ ಹಾರಾಟ ನಡೆಸಲಿದೆ. ವಿಮಾನ ವೇಳಾಪಟ್ಟಿಯ ಪ್ರಕಾರ ಮಂಗಳೂರಿನಿಂದ ವಿಮಾನವು **ಮಧ್ಯಾಹ್ನ 1:25 (IST)**ಕ್ಕೆ ಹೊರಟು ಶಾರ್ಜಾ ಸಮಯದ ಪ್ರಕಾರ ಸಂಜೆ 4:05ಕ್ಕೆ ತಲುಪಲಿದೆ. ವಾಪಸಾಗಿ ಶಾರ್ಜಾದಿಂದ ಸಂಜೆ 5:05ಕ್ಕೆ ಹೊರಡುವ ವಿಮಾನವು **ರಾತ್ರಿ 10:30 (IST)**ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಈ…

Read More

ಉಡುಪಿ: ವಾಣಿಜ್ಯ ಅನಿಲ ಕೊರತೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದ ಹಿನ್ನೆಲೆಯಲ್ಲಿ ಹೋಟೇಲ್ ಮಾಲಕರಿಗೆ ಎದುರಾಗುತ್ತಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನಗರದ ಡಯಾನ ಹೋಟೇಲ್‌ನಲ್ಲಿ ಉಡುಪಿ ಜಿಲ್ಲಾ ಹೋಟೇಲ್ ಮಾಲಕರ ಸಂಘದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಾಣಿಜ್ಯ ಬಳಕೆಯ ಅನಿಲ ಅಲಭ್ಯತೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ಜೊತೆ…

Read More

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಶಂಕರಪುರದಲ್ಲಿ ಘಟನೆ

ಉಡುಪಿ: ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಸಾಲ್ಮರದಲ್ಲಿರುವ ಕ್ಯಾಟರಿಂಗ್ ಸೆಡ್ ಸಮೀಪದ ಒಂದು ಕೊಠಡಿಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗೌತಮ್ ಪೂಜಾರಿ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ಸಂಸ್ಥೆಯಲ್ಲಿ…

Read More
error: Content is protected !!