ಬಂಟ್ವಾಳದಲ್ಲಿ ಮನೆಯಲ್ಲೇ ಮಾದಕ ವಸ್ತು ಮಾರಾಟ: 17.97 ಗ್ರಾಂ MDMA ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮನೆಯಲ್ಲೇ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳದ ನೇರಳಕಟ್ಟೆ ಇಂದಿರಾ ನಗರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂ.ಎ (MDMA) ಅನ್ನು ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಈ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್…
