ಗ್ಯಾಸ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ: ರಸ್ತೆಯಲ್ಲೇ ಚಹಾ ತಯಾರಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಉಡುಪಿ: ಅಡುಗೆ ಗ್ಯಾಸ್ ಮತ್ತು ವಾಣಿಜ್ಯ ಸಿಲಿಂಡರ್ ದರ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಳೆದ ದಿನ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ತಲುಪಿ ರಸ್ತೆ ಮಧ್ಯೆ ಧರಣಿ ನಡೆಸಿದರು. ಪ್ರತಿಭಟನೆಯ ಭಾಗವಾಗಿ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಚ್ಚಿ ಚಹಾ ತಯಾರಿಸಿ ಜನರಿಗೆ ಹಂಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಅಡುಗೆ ಗ್ಯಾಸ್ ಸಿಲಿಂಡರ್…

Read More

ಉಡುಪಿ: ಬಸ್–ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಉಡುಪಿ: ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝದ್ (19) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಝದ್ ಶೀಘ್ರದಲ್ಲೇ ಉದ್ಯೋಗಕ್ಕಾಗಿ ಗಲ್ಫ್ ರಾಷ್ಟ್ರಕ್ಕೆ ತೆರಳಲು ಸಿದ್ಧತೆ…

Read More

ಮಾರ್ಚ್ 15 ರಿಂದ 20ರವರೆಗೆ ಆದ್ಯಪಾಡಿಯ ದೈವಂಗಳಗುಡ್ಡೆ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ… !

ಮಂಗಳೂರು: ಅದ್ಯಪಾಡಿ ದೈವಂಗಳಗುಡ್ಡೆ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.15ರಿಂದ 20ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.18ಕ್ಕೆ ರುದ್ರಯಾಗ, 19ರಂದು ಸಹಸ್ರ ನಾಳಿಕೇರ ಮಹಾಗಣಪತಿ ಹೋಮ, 20ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ನಾಗರಾಜ ಶೆಟ್ಟಿ ತಿಳಿಸಿದರು . ಅವರು ದೇವಾಲಯದ ಪ್ರಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ 2 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆಡಳಿತ ಮೊಕ್ತೇಸರ…

Read More

ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಶಾಸಕರಾದ Vedavyas Kamath ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ತಾವು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ರಸ್ತೆ ಅಭಿವೃದ್ಧಿಯ ಅಗತ್ಯತೆಯನ್ನು ಗಮನಕ್ಕೆ ತಂದಿದ್ದರು. ಅದರಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ…

Read More

ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಈಜುಗಾರ್ತಿ ಶ್ರೀಲಕ್ಷ್ಮಿ

ವಿಟ್ಲ: ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿರುವ ವಿಟ್ಲದ ಪ್ರತಿಭಾವಂತ ಈಜುಗಾರ್ತಿ ಶ್ರೀಲಕ್ಷ್ಮಿ ಅವರು ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ವಿಟ್ಲದ ಹಿತ್ಲು ಕೋಟಿಕೆರೆ ನಿವಾಸಿಗಳಾದ ದಿವಂಗತ ಗೋಪಿಕಾ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ತೃತೀಯ ಪುತ್ರಿಯಾದ ಶ್ರೀಲಕ್ಷ್ಮಿ ಬಾಲ್ಯದಲ್ಲಿಯೇ ಈಜು ಕ್ರೀಡೆಗೆ ಆಸಕ್ತಿ ಬೆಳೆಸಿಕೊಂಡರು. ಈಜಿನಲ್ಲಿ ಸಾಧನೆಗೈಯುವ ದಿಟ್ಟ ಸಂಕಲ್ಪ ಹೊಂದಿದ್ದ ಅವರಿಗೆ ತಂದೆಯೇ ಮೊದಲ ಗುರು ಆಗಿದ್ದು, ಬಳಿಕ ಉಮೇಶ್ ಗಾಣಿಗ ವಿಟ್ಲ ಹಾಗೂ ತುಳಸಿದಾಸ್ ಶೆಣೈ ಅವರಿಂದ ತರಬೇತಿ ಪಡೆದು ಕ್ರೀಡೆಯಲ್ಲಿ…

Read More

ಕೆನರಾ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ – ಮಹಿಳಾ ಉದ್ಯಮಿಗಳ ಎಕ್ಸ್ಪೋಗೆ ಭರ್ಜರಿ ಪ್ರತಿಕ್ರಿಯೆ

ಮಂಗಳೂರು, ಮಾರ್ಚ್ 9: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು ಇಲ್ಲಿ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಉದ್ಯಮಿಗಳ ಎಕ್ಸ್ಪೋ ಕಾರ್ಯಕ್ರಮವನ್ನು ರೋಟರಿ ಮಂಗಳೂರು ಮೆಟ್ರೋ ಸಹಯೋಗದಲ್ಲಿ ಮಾರ್ಚ್ 9, 2026ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಸುಮಾರು 35 ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ವಿವಿಧ ಸ್ಟಾಲ್‌ಗಳ ಮೂಲಕ ಪ್ರದರ್ಶಿಸಿ, ಮಹಿಳಾ ಉದ್ಯಮಶೀಲತೆ ಮತ್ತು ಹೊಸತನವನ್ನು ಪ್ರೋತ್ಸಾಹಿಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಅಶ್ವಿನಿ ಕಾಮತ್‌ (ಕೆನರಾ ಹೈ-ಸ್ಕೂಲ್‌ ಅಸೋಸೀಯೇಶನ್‌…

Read More

ಕಾರು–ಆಟೋ ಡಿಕ್ಕಿ: ಐದು ವಿದ್ಯಾರ್ಥಿಗಳು ಸೇರಿ ಆರು ಮಂದಿ ಗಾಯ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್ (13), ಮಹಮ್ಮದ್ ಇರ್ಷಾದ್ (11), ನೂರ್ ಮಹಮದ್ (10), ಮಹಮದ್ ರಾಝೀಲ್ (7), ಸಜ್ಮಾ (4) ಹಾಗೂ ಆಟೋ ಚಾಲಕ ಕಲಂದರ್ ಶಾಫಿ (46) ಎಂದು ಗುರುತಿಸಲಾಗಿದೆ. ನೆಕ್ಕಿಲಾಡಿ…

Read More

ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರಿನಲ್ಲೇ 300 ಹಾಸಿಗೆ ಸಾಮರ್ಥ್ಯದ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ

ಪುತ್ತೂರು: ಪುತ್ತೂರು ನಗರದ ಹೃದಯಭಾಗದಲ್ಲಿ ಇರುವ ಹಾಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ೫.೧೬ ಎಕರೆ ಜಾಗದಲ್ಲೇ ಸುಸಜ್ಜಿತವಾಗಿ ೩೦೦ ಹಾಸಿಗೆ ಸಾಮರ್ಥ್ಯದ ಸರಕಾರಿ ಮೆಡಿಕಲ್ ಆಸ್ಪತ್ರೆ ಆಗಲಿ ಎಂದು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರು ಆಗ್ರಹ ವ್ಯಕ್ತಪಡಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರಾದ ರಫೀಕ್ ದರ್ಬೆ, ರಾಜೇಶ್ ಬನ್ನೂರು ಹಾಗೂ ವಿದ್ಯಾ ಆರ್. ಗೌರಿ, ಕಳೆದ ಬಾರಿಯ ಬಿಜೆಪಿ ಸರಕಾರದ ಅವಧಿಯಲ್ಲಿ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆಗಬೇಕೆಂಬುದು ಜನರ…

Read More

ಬಂಟ್ವಾಳದಲ್ಲಿ ಮನೆಯೊಂದರಲ್ಲಿ ಚಿನ್ನಾಭರಣ ಕಳವು

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಕೈಕುಂಜೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಮಧ್ಯರಾತ್ರಿ ಅವಧಿಯಲ್ಲಿ ಚಿನ್ನಾಭರಣ ಕಳವು ನಡೆದಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮಧ್ಯರಾತ್ರಿ ರಿಂದ ಬೆಳಗಿನ ಅವಧಿಯ ನಡುವೆ ಮನೆಯ ಹಿಂಬದಿ ಬಾಗಿಲಿನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಒಟ್ಟು ಸುಮಾರು 61 ಗ್ರಾಂ ಚಿನ್ನಾಭರಣ ಕಳವಾಗಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಗ್ಗೆ ಮನೆಯವರಿಗೆ ತಿಳಿದುಬಂದಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಚಿನ್ನಾಭರಣಗಳು…

Read More
error: Content is protected !!